Featured

ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು -vishwanews24

ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು

ಶಿಮ್ಲಾ : ಹಿಮಾಚಲ ಪ್ರದೇಶದ ಚಂಬಾ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಖಾಸಗಿ ಬಸ್‌ವೊಂದು ಆಳವಾದ ಪ್ರಪಾತಕ್ಕೆ ಉರುಳಿಬಿದ್ದ ಪರಿಣಾಮ ಏಳು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬೈರಾಗಢ-ಚಂಬಾ ಮಾರ್ಗದ ದೇವಿಕೋಠಿ ಬಳಿ ಈ ದುರಂತ ಸಂಭವಿಸಿದೆ. ಬೈರಾಗಢದಿಂದ ಚಂಬಾಗೆ ತೆರಳುತ್ತಿದ್ದ ಖಾಸಗಿ ಬಸ್, ದೇವಿಕೋಠಿ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಏಕಾಏಕಿ ರಸ್ತೆಯಿಂದ ಜಾರಿ ಆಳವಾದ ಕಂದಕಕ್ಕೆ ಬಿದ್ದಿದೆ. ಅಪಘಾತದ ವೇಳೆ ಬಸ್‌ನಲ್ಲಿ ಒಟ್ಟು 22 ಪ್ರಯಾಣಿಕರಿದ್ದರು. ಈ ಪೈಕಿ ಏಳು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಹಲವು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳೀಯರು, ಪೊಲೀಸರು ಹಾಗೂ ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿ ಕಾರ್ಯಾಚರಣೆ ನಡೆಸಿವೆ.

ಪ್ರಪಾತಕ್ಕೆ ಬಿದ್ದಿದ್ದ ಗಾಯಾಳುಗಳನ್ನು ಮೇಲಕ್ಕೆತ್ತಿ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡವರ ಪೈಕಿ ಹಲವರ ಸ್ಥಿತಿ ಗಂಭೀರವಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಆತಂಕ ವ್ಯಕ್ತವಾಗಿದೆ. ಅಪಘಾತಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಪೊಲೀಸರು ತನಿಖೆ ಆರಂಭಿಸಿದ್ದಾರೆ.

Vishwa News 24

Recent Posts

ಉಡುಪಿ : ಯುವತಿ ನಾಪತ್ತೆ -vishwanews24

ಉಡುಪಿ : ಯುವತಿ ನಾಪತ್ತೆ ಉಡುಪಿ : ಉಡುಪಿ ಸವೀಸ್ ಬಸ್ ನಿಲ್ದಾಣದ ಬಳಿ ಇರುವ ಹೊಲಿಗೆ ತರಬೇತಿ ಕೇಂದ್ರದಲ್ಲಿ…

12 hours ago

ಪಡುಬಿದ್ರಿ : ವ್ಯಕ್ತಿ ನಾಪತ್ತೆ -vishwanews24

ಪಡುಬಿದ್ರಿ : ವ್ಯಕ್ತಿ ನಾಪತ್ತೆ ಉಡುಪಿ: ಎಲ್ಲೂರು ಗ್ರಾಮ ಅದಮಾರು ಅಂಚೆ ಅಂಬೇಡ್ಕರ್ ರೋಡ್ ಆಶಿರ್ವಾದ ಹೌಸ್ ನಿವಾಸಿ ಹರ್ಷಲ್…

13 hours ago

ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ -vishwanews24

ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ ಉಡುಪಿ: ತುಳು ಭಾಷೆಗೆ ಅಧಿಕೃತ…

14 hours ago

ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ -vishwanews24

ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ ಉಡುಪಿ: ನೂತನ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಶೀಘ್ರ…

14 hours ago

ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ  , ಪುತ್ರ ನಾಪತ್ತೆ ;  ಪ್ರಕರಣ ದಾಖಲು -vishwanews24

ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ  , ಪುತ್ರ ನಾಪತ್ತೆ ;  ಪ್ರಕರಣ ದಾಖಲು…

17 hours ago

ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ -vishwanews24

ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ ಮಂಗಳೂರು: ಅಕ್ರಮವಾಗಿ ಹಾಗೂ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು…

17 hours ago