ನವದೆಹಲಿ: ಹಿಮಾಚಲಪ್ರದೇಶದಲ್ಲಿ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳಿರುವಾಗಲೇ ಕಾಂಗ್ರೆಸ್‌ಗೆ ಆಘಾತ ಎದುರಾಗಿದೆ. ಕಾಂಗ್ರೆಸ್‌ನ 26 ಮಂದಿ ಮುಖಂಡರು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.
ಇನ್ನು ನಾಲ್ಕು ದಿನಗಳಲ್ಲಿ ಹಿಮಾಚಲಪ್ರದೇಶ ವಿಧಾನಸಭಾ ಚುನಾವಣೆ ನಡೆಯಲಿದೆ. ಚುನಾವಣೆ ಹೊಸ್ತಿಲಲ್ಲಿರುವಾಗಲೇ ಕಾಂಗ್ರೆಸ್‌ಗೆ ದೊಡ್ಡ ಆಘಾತ ಎದುರಾಗಿದ್ದು, 26 ಮಂದಿ ಕಾಂಗ್ರೆಸ್ ಮುಖಂಡರು ರಾಜ್ಯದ ಮುಖ್ಯಮಂತ್ರಿ ಜೈರಾಮ್ ಠಾಕೂರ್ ಮತ್ತು ಬಿಜೆಪಿ ರಾಜ್ಯ ಚುನಾವಣಾ ಉಸ್ತುವಾರಿ ಸುಧಾನ್ ಸಿಂಗ್ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಶಿಮ್ಲಾದ ಬಿಜೆಪಿ ಅಭ್ಯರ್ಥಿಯಾಗಿರುವ ಸಂಜಯ್ ಸೂದ್ ಕೂಡಾ ಈ ವೇಳೆ ಉಪಸ್ಥಿತರಿದ್ದರು.
ಹಿಂದೂ ಭಾರತೀಯ ಪದವೇ ಅಲ್ಲ, ಪರ್ಷಿಯನ್ ಭಾಷೆಯ ಪದ – ನಾನು ಹೇಳಿದ್ದರಲ್ಲಿ ತಪ್ಪಿಲ್ಲ..
ಕಾಂಗ್ರೆಸ್ ಪಕ್ಷದ ಮಾಜಿ ಪ್ರಧಾನ ಕಾರ್ಯದರ್ಶಿ ಧರ್ಮಪಾಲ್ ಠಾಕೂರ್, ಮಾಜಿ ಕಾರ್ಯದರ್ಶಿ ಆಕಾಶ್ ಸೈನಿ, ಮಾಜಿ ಕೌನ್ಸಿಲರ್ ರಾಜನ್ ಠಾಕೂರ್, ಜಿಲ್ಲಾ ಮಾಜಿ ಉಪಾಧ್ಯಕ್ಷ ಅಮಿತ್ ಮೆಹ್ತಾ, ಮೆಹ್ರ ಸಿಂಗ್ ಕನ್ವರ್, ಯುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ನೇಗಿ, ಜೈ ಮಾ ಶಕ್ತಿ ಸೋಶಿಯಲ್ ಸಂಸ್ಥಾನದ ಅಧ್ಯಕ್ಷ ಜೋಗಿಂದರ್ ಠಾಕೂರ್, ನರೇಶ್ ವರ್ಮಾ, ಗ್ರಾ.ಪಂ ಸದಸ್ಯ ಯೋಗೇಂದ್ರ ಸಿಂಗ, ಟ್ಯಾಕ್ಸಿ ಯೂನಿಯನ್ ಸದಸ್ಯ ರಾಕೇಶ್ ಚೌಹಾಣ್, ಇಂಡಿಯನ್ ನ್ಯಾಷನಲ್ ಟ್ರಸ್ಟ್ ಆರ್ಟ್ ಆಂಡ್ ಕಲ್ಚರಲ್ ಹೆರಿಟೇಜ್ ಅಧ್ಯಕ್ಷ ಧರ್ಮೇಂದ್ರ ಕುಮಾರ್, ರಾಹುಲ್ ರಾವತ್, ವೀರೇಂದ್ರ ಶರ್ಮಾ, ಸೋನು ಶರ್ಮಾ, ಅರುಣ್ ಕುಮಾರ್, ಶಿವಂ ಕುಮಾರ್ ಮತ್ತು ಗೋಪಾಲ ಠಾಕೂರ್ ಕಮಲ ಪಾಳಯಕ್ಕೆ ಜಿಗಿದವರು ಎಂದು ಸುದ್ದಿಸಂಸ್ಥೆಯೊಂದು ವರದಿ ಮಾಡಿದೆ.
ಮೂಡುಬಿದಿರೆ: ಕಾಲೇಜಿನ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ – Vishwanews24
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…