Featured

ಹಿಮಾಚಲ ಪ್ರದೇಶ: ಕಾಂಗ್ರೆಸ್‌ನ 26 ಮಂದಿ ಮುಖಂಡರು ಬಿಜೆಪಿ ಸೇರ್ಪಡೆ – Vishwanews24

ಹಿಮಾಚಲ ಪ್ರದೇಶ: ಕಾಂಗ್ರೆಸ್‌ನ 26 ಮಂದಿ ಮುಖಂಡರು ಬಿಜೆಪಿ ಸೇರ್ಪಡೆ

ನವದೆಹಲಿ: ಹಿಮಾಚಲಪ್ರದೇಶದಲ್ಲಿ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳಿರುವಾಗಲೇ ಕಾಂಗ್ರೆಸ್‌ಗೆ ಆಘಾತ ಎದುರಾಗಿದೆ. ಕಾಂಗ್ರೆಸ್‌ನ 26 ಮಂದಿ ಮುಖಂಡರು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.

ಇನ್ನು ನಾಲ್ಕು ದಿನಗಳಲ್ಲಿ ಹಿಮಾಚಲಪ್ರದೇಶ ವಿಧಾನಸಭಾ ಚುನಾವಣೆ ನಡೆಯಲಿದೆ. ಚುನಾವಣೆ ಹೊಸ್ತಿಲಲ್ಲಿರುವಾಗಲೇ ಕಾಂಗ್ರೆಸ್‌ಗೆ ದೊಡ್ಡ ಆಘಾತ ಎದುರಾಗಿದ್ದು, 26 ಮಂದಿ ಕಾಂಗ್ರೆಸ್ ಮುಖಂಡರು ರಾಜ್ಯದ ಮುಖ್ಯಮಂತ್ರಿ ಜೈರಾಮ್ ಠಾಕೂರ್ ಮತ್ತು ಬಿಜೆಪಿ ರಾಜ್ಯ ಚುನಾವಣಾ ಉಸ್ತುವಾರಿ ಸುಧಾನ್ ಸಿಂಗ್ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ಶಿಮ್ಲಾದ ಬಿಜೆಪಿ ಅಭ್ಯರ್ಥಿಯಾಗಿರುವ ಸಂಜಯ್ ಸೂದ್ ಕೂಡಾ ಈ ವೇಳೆ ಉಪಸ್ಥಿತರಿದ್ದರು.

ಹಿಂದೂ ಭಾರತೀಯ ಪದವೇ ಅಲ್ಲ, ಪರ್ಷಿಯನ್ ಭಾಷೆಯ ಪದ – ನಾನು ಹೇಳಿದ್ದರಲ್ಲಿ ತಪ್ಪಿಲ್ಲ..

ಕಾಂಗ್ರೆಸ್ ಪಕ್ಷದ ಮಾಜಿ ಪ್ರಧಾನ ಕಾರ್ಯದರ್ಶಿ ಧರ್ಮಪಾಲ್ ಠಾಕೂರ್, ಮಾಜಿ ಕಾರ್ಯದರ್ಶಿ ಆಕಾಶ್ ಸೈನಿ, ಮಾಜಿ ಕೌನ್ಸಿಲರ್ ರಾಜನ್ ಠಾಕೂರ್, ಜಿಲ್ಲಾ ಮಾಜಿ ಉಪಾಧ್ಯಕ್ಷ ಅಮಿತ್ ಮೆಹ್ತಾ, ಮೆಹ್ರ ಸಿಂಗ್ ಕನ್ವರ್, ಯುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ನೇಗಿ, ಜೈ ಮಾ ಶಕ್ತಿ ಸೋಶಿಯಲ್ ಸಂಸ್ಥಾನದ ಅಧ್ಯಕ್ಷ ಜೋಗಿಂದರ್ ಠಾಕೂರ್, ನರೇಶ್ ವರ್ಮಾ, ಗ್ರಾ.ಪಂ ಸದಸ್ಯ ಯೋಗೇಂದ್ರ ಸಿಂಗ, ಟ್ಯಾಕ್ಸಿ ಯೂನಿಯನ್ ಸದಸ್ಯ ರಾಕೇಶ್ ಚೌಹಾಣ್, ಇಂಡಿಯನ್ ನ್ಯಾಷನಲ್ ಟ್ರಸ್ಟ್ ಆರ್ಟ್ ಆಂಡ್ ಕಲ್ಚರಲ್ ಹೆರಿಟೇಜ್ ಅಧ್ಯಕ್ಷ ಧರ್ಮೇಂದ್ರ ಕುಮಾರ್, ರಾಹುಲ್ ರಾವತ್, ವೀರೇಂದ್ರ ಶರ್ಮಾ, ಸೋನು ಶರ್ಮಾ, ಅರುಣ್ ಕುಮಾರ್, ಶಿವಂ ಕುಮಾರ್ ಮತ್ತು ಗೋಪಾಲ ಠಾಕೂರ್ ಕಮಲ ಪಾಳಯಕ್ಕೆ ಜಿಗಿದವರು ಎಂದು ಸುದ್ದಿಸಂಸ್ಥೆಯೊಂದು ವರದಿ ಮಾಡಿದೆ.

ಮೂಡುಬಿದಿರೆ: ಕಾಲೇಜಿನ ಹಾಸ್ಟೆಲ್‌ ನಲ್ಲಿ ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ – Vishwanews24

 

Vishwa News 24

Recent Posts

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ -vishwanews24

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…

4 hours ago

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

10 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

10 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

12 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

12 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

12 hours ago