ಹಿರಿಯಡ್ಕ: ಬುಧವಾರ ಜಾನುವಾರು ವ್ಯಾಪರಿ ಹುಸೇನಬ್ಬ(61) ಸಂಶಯಾಸ್ಪದ ಸಾವಿನ ಪ್ರಕರಣದ ಹಿನ್ನಲೆ ಕರ್ತವ್ಯ ಲೋಪದಡಿಯಲ್ಲಿ ಹಿರಿಯಡ್ಕ ಠಾಣೆಯ ಸಬ್ ಇನ್ಸ್ ಪೆಕ್ಟರ್ ಡಿ.ಎನ್ ಕುಮಾರನ್ನು ಅಮಾನತು ಮಾಡಲಾಗಿದೆ. ಈ ಬಗ್ಗೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ರಮ ಕೈಗೊಂಡ ಬಗ್ಗೆ ತಿಳಿಸಿದ್ದಾರೆ.
ಈ ಪ್ರಕರಣದಲ್ಲಿ ಅಸಿಸ್ಟೆಂಟ್ ಸಬ್ ಇನ್ಸ್ಪೆಕ್ಟರ್, ಜೀಪ್ ಡ್ರೈವರ್ ಗೋಪಾಲ್, ಹೆಡ್ ಕಾನ್ಸ್ಸ್ಟಬಲ್ ರಾಜೇಶ್ ಮೇಲು ಕ್ರಮ ಕೈಗೊಳ್ಳುವ ಸಾಧ್ಯತೆಗಳಿವೆಯೆಂದು ತಿಳಿದು ಬಂದಿದೆ.
ಬುಧವಾರ ಸಂಶಯಾಸ್ಪದ ರೀತಿಯಲ್ಲಿ ಪೆರ್ಡೂರು ತೋಟದಲ್ಲಿ ಶವವಾಗಿ ಪತ್ತೆಯಾಗುವ ಮುನ್ನ ಸ್ಕಾರ್ಪಿಯೋ ಗಾಡಿಯಲ್ಲಿ ದನಗಳನ್ನು ಸಾಗಿಸುತ್ತಿದ್ದವರ ಮೇಲೆ ಕೆಲವರು ದಾಳಿ ನಡೆಸಿ ಸ್ಕಾರ್ಪಿಯೋ ವಾಹನವನ್ನು ಪುಡಿಗಟ್ಟಿದ್ದರು. ನಂತರ ಮೃತ ಹುಸೇನಬ್ಬ ಮನೆಯವರು ಹುಸೇನಬ್ಬರ ಸಾವಿನ ಬಗ್ಗೆ ಸಂಶಯ ವ್ಯಕ್ತಪಡಿಸಿ ಬಜರಂಗದಳದವರು ಹಲ್ಲೆಗೈದು ಕೊಲೆಗೈದಿದ್ದಾರೆಂದು ಆರೋಪಿಸಿ ಪ್ರಕರಣ ದಾಖಲಿಸಿದ್ದರು.
ಈಗ ಪುತ್ತೂರಿನ ಸಬ್ ಇನ್ಸ್ ಪೆಕ್ಟರ್ ಮಹೇಶ್ ಪ್ರಸಾದ್ ಈ ಪ್ರಕರಣ ತನಿಖೆ ನಡೆಸುವ ಸಾಧ್ಯತೆಗಳ ಬಗ್ಗೆ ಬಲ್ಲ ಮೂಲಗಳಿಂದ ತಿಳಿದು ಬಂದಿದೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…