ಬೆಂಗಳೂರು: ಮೆದುಳಿನ ರಕ್ತಸ್ರಾವದಿಂದ ಹೆಸರಾಂತ ಹಿರಿಯ ನಟಿ ಹೇಮಾ ಚೌಧರಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ.
ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಎರಡು ದಿನಗಳ ಹಿಂದೆ ಹೇಮಾ ಚೌಧರಿಗೆ ಬ್ರೈನ್ ಹ್ಯಾಮರೇಜ್ ಆಗಿತ್ತು. ಅವರನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ತೀವ್ರ ನಿಗಾ ಘಟಕದಲ್ಲಿ ಅವರನ್ನು ಇಡಲಾಗಿದೆ. ಹೇಮಾ ಅವರ ಮಗ ಐರ್ಲೆಂಡ್ನಲ್ಲಿ ಇದ್ದಾರೆ. ಅವರ ಆಗಮನಕ್ಕಾಗಿ ಕಾಯಲಾಗುತ್ತಿದೆ. ಅವರ ದೇಹ ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ ಎಂದು ತಿಳಿದು ಬಂದಿದೆ. ಹಿರಿಯ ನಟಿ ಶೀಘ್ರ ಗುಣಮುಖರಾಗಿ ಮೊದಲಿನಂತಾಗಲಿ ಎಂದು ಅವರ ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.
ಇತ್ತೀಚೆಗೆ ನಿಧನರಾದ ಹಿರಿಯ ನಟಿ ಲೀಲಾವತಿ ಅವರ ಪುಣ್ಯತಿಥಿ ಮೊನ್ನೆ 18ರಂದು ಅವರ ನೆಲಮಂಗಲದ ಸೋಲದೇವನಹಳ್ಳಿ ತೋಟದ ಮನೆಯಲ್ಲಿ ನೆರವೇರಿತ್ತು. ಅದಕ್ಕೆ ಹೇಮಾ ಚೌಧರಿಯವರು ಬಂದಿದ್ದರು. ಅದಾದ ನಂತರ ಇದ್ದಕ್ಕಿದ್ದಂತೆ ತೀವ್ರ ಅನಾರೋಗ್ಯ ಉಂಟಾಗಿದೆ.
ಕನ್ನಡ ಸೇರಿದಂತೆ ತೆಲುಗು, ಮಲಯಾಳಂ ಮತ್ತು ತಮಿಳು ಸುಮಾರು 180ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದರು. ರಾಜಕುಮಾರ್, ವಿಷ್ಣುವರ್ಧನ್, ಅಂಬರೀಶ್, ಕಮಲ್ ಹಾಸನ್, ಚಿರಂಜೀವಿ, ಮೋಹನ್ ಬಾಬು, ಮಲಯಾಳಂ ಸೂಪರ್ ಸ್ಟಾರ್ ಪ್ರೇಮ್ ನಜೀರ್, ಅನಂತ್ ನಾಗ್, ಶಂಕರ್ ನಾಗ್, ರವಿಚಂದ್ರನ್ ಹೀಗೆ ಅನೇಕ ನಟರ ಜತೆ ಹೇಮಾ ಚೌಧರಿ ತೆರೆ ಹಂಚಿಕೊಂಡಿದ್ದರು.
2011ರಲ್ಲಿ ಕನ್ನಡ ಕಿರುತೆರೆಗೆ ಜನಪ್ರಿಯ ಧಾರವಾಹಿ ‘ಅಮೃತವರ್ಷಿಣಿ’ಯಲ್ಲಿ ಮುಖ್ಯ ಪಾತ್ರದಲ್ಲಿ ಅಭಿನಯಿಸಿ ಜನರ ಮನಸೂರೆಗೊಂಡಿದ್ದರು. ಜಯಪ್ರಧಾ, ಜಯಸುಧಾ, ಶ್ರೀದೇವಿ, ಜಯಮಾಲ, ಆರತಿ, ಮಂಜುಳಾ, ಪದ್ಮಪ್ರಿಯ, ಲಕ್ಷ್ಮೀ ಮೊದಲಾದವರ ಜತೆ ತೆರೆಹಂಚಿಕೊಂಡಿದ್ದಾರೆ. ಶುಭಾಶಯ (ಚಲನಚಿತ್ರ) (1977), ಗಾಳಿಮಾತು(1981) ಮತ್ತು ವೀರಪ್ಪನಾಯ್ಕ(1997) ಚಿತ್ರಗಳಲ್ಲಿಯ ಅಮೋಘ ಅಭಿನಯದಿಂದ ಜನಮನ್ನಣೆ ಗಳಿಸಿದ್ದರು.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…