ನವದೆಹಲಿ: ಚಂದನವನದ ಹಿರಿಯ ನಟ ಅನಂತ್ ನಾಗ್ ಅವರನ್ನು ಭಾರತೀಯ ಚಿತ್ರರಂಗದ ಅತ್ಯುನ್ನತ ಗೌರವ ಎನಿಸಿರುವ ‘ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ 2024’ ಕೇಂದ್ರ ಸರ್ಕಾರ ಆಯ್ಕೆ ಮಾಡಿದೆ. ಭಾರತೀಯ ಚಿತ್ರರಂಗದಲ್ಲಿ ವಿಶೇಷವಾಗಿ ಕನ್ನಡ ಚಿತ್ರರಂಗದಲ್ಲಿ ಸಲ್ಲಿಸಿರುವ ಅನುಪಮ ಕೊಡುಗೆಯನ್ನು ಪರಿಗಣಿಸಿ ಅವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಸೆಪ್ಟೆಂಬರ್ 22 ರಂದು ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.
ಈ ಕುರಿತು ಭಾರತೀಯ ವಾರ್ತಾಶಾಖೆ ಪಿಐಬಿ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿದೆ. ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಆಯ್ಕೆ ಸಮಿತಿಯ ಶಿಫಾರಸಿನ ಮೇರೆಗೆ, ಭಾರತೀಯ ಚಿತ್ರರಂಗಕ್ಕೆ ನೀಡಿದ ಕೊಡುಗೆ ಹಾಗೂ ಹಲವಾರು ತಲೆಮಾರುಗಳಿಗೆ ಸ್ಫೂರ್ತಿಯಾಗಿರುವ ಅವರ ಅದ್ಭುತ ಸಿನಿಮಾ ಪಯಣಕ್ಕಾಗಿ ನಟ ಅನಂತ್ ನಾಗ್ ಅವರಿಗೆ ಪ್ರತಿಷ್ಠಿತ ‘ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ 2024’ ಅನ್ನು ನೀಡಲಾಗುತ್ತಿದೆ ಎಂದು ಕೇಂದ್ರ ಸರ್ಕಾರ ತಿಳಿಸಿರುವುದಾಗಿ ತಿಳಿಸಿದೆ.
ಸೆಪ್ಟೆಂಬರ್ 22 ರಂದು ಪ್ರಶಸ್ತಿ ಪ್ರದಾನ: ಗುಜರಾತ್‌ನ ಕೆವಾಡಿಯಾದಲ್ಲಿ 2026ರ ಸೆಪ್ಟೆಂಬರ್ 22 ರಂದು ನಡೆಯಲಿರುವ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅನಂತ್ ನಾಗ್ ಅವರಿಗೆ ಈ ಪ್ರಶಸ್ತಿಯನ್ನು ನೀಡಲಾಗುತ್ತದೆ.
ಸುಮಾರು 300ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟನೆ: ಸೆಪ್ಟೆಂಬರ್ 4, 1948 ರಂದು ಜನಿಸಿದ ಅನಂತ ನಾಗ್ (ಮೂಲ ಹೆಸರು ಅನಂತ ನಾಗರಕಟ್ಟೆ), ಕನ್ನಡ ಚಿತ್ರರಂಗದ ಪ್ರಸಿದ್ಧ ನಟರಲ್ಲಿ ಒಬ್ಬರಾಗಿದ್ದಾರೆ. ತಮ್ಮ ವೃತ್ತಿಜೀವನದಲ್ಲಿ 250ಕ್ಕೂ ಹೆಚ್ಚು ಕನ್ನಡ ಚಲನಚಿತ್ರಗಳು ಸೇರಿದಂತೆ ಒಟ್ಟು 300ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. ಅವರ ಅಭಿನಯಿಸಿರುವ ಸಿನಿಮಾಗಳಲ್ಲಿ ಹಿಂದಿ, ತೆಲುಗು, ತಮಿಳು, ಮರಾಠಿ, ಮಲಯಾಳಂ ಮತ್ತು ಇಂಗ್ಲಿಷ್ ಭಾಷೆಯ ಚಿತ್ರಗಳೂ ಸೇರಿವೆ.
ಚಿಕ್ಕಮಗಳೂರು: ದೇವೀರಮ್ಮ ಬೆಟ್ಟ ಏರಲು ಭಕ್ತರಿಗೆ ಹೊಸ ನಿಯಮ, ರಾತ್ರಿ ಸಂಚಾರಕ್ಕೆ ಬ್ರೇಕ್ ಚಿಕ್ಕಮಗಳೂರು: ಕಾಫಿನಾಡಿನ ಪ್ರಸಿದ್ಧ ಶಕ್ತಿದೇವತೆ ಬಿಂಡಿಗ…
ಕಾಪು ಜೇಸಿಐಗೆ ವಲಯದ ಅತ್ಯುತ್ತಮ ಘಟಕ ಪ್ರಶಸ್ತಿ ಪ್ರದಾನ ಕಾಪು ಪರಿಸರದಲ್ಲಿ ಸೇವಾ ಚಟುವಟಿಕೆಗಳ ಮೂಲಕ ಗುರುತಿಸಿಕೊಂಡಿರುವ ಕಾಪು ಜೇಸಿಐಗೆ…
ಅಗ್ನಿಪಥ್ ಯೋಜನೆಯಲ್ಲಿ ಕೇಂದ್ರ ಸರ್ಕಾರದಿಂದ ಮಹತ್ವದ ಬದಲಾವಣೆ .. ಅಗ್ನಿವೀರರ ಸೇವಾ ಅವಧಿ 2 ವರ್ಷ ವಿಸ್ತರಣೆ ನವದೆಹಲಿ: ಕೇಂದ್ರ…
ಕಾರ್ಕಳ: ಯುವತಿಗೂ ನ್ಯಾಯ ಸಿಗಬೇಕು ; ಪ್ರದೀಪ್ ಪೂಜಾರಿಯ ಸಾವಿಗೂ ನ್ಯಾಯ ದೊರೆಯಬೇಕು : ಶುಭದ ರಾವ್ ಕಾರ್ಕಳ: ಪೆರ್ಡೂರಿನಲ್ಲಿ…
ಮಂಗಳೂರು: ಬೈಕಂಪಾಡಿಯಲ್ಲಿ ಅಕ್ರಮ ಗೋ ಸಾಗಾಟ ಪತ್ತೆ: 16 ಗೋವುಗಳ ರಕ್ಷಣೆ ಮಂಗಳೂರು: ನಗರದ ಬೈಕಂಪಾಡಿ ಪರಿಸರದಲ್ಲಿ ಬುಧವಾರ ಮುಂಜಾನೆ…
ಅಸ್ಸಾಂನಲ್ಲಿ ಬಹುಪತ್ನಿತ್ವಕ್ಕೆ ಕಡಿವಾಣ : ಒಂದಕ್ಕಿಂತ ಹೆಚ್ಚು ಮದುವೆಯಾದರೆ ಸರ್ಕಾರಿ ಉದ್ಯೋಗದಿಂದ ವಜಾ ದಿಸ್ಪುರ್ : ಅಸ್ಸಾಂ ಸರ್ಕಾರವು ಬಹುಪತ್ನಿತ್ವಕ್ಕೆ…