ಕನ್ನಡ ಮಾಧ್ಯಮ ಲೋಕದ ಹಿರಿಯ ಪತ್ರಕರ್ತ ದೊಡ್ಡ ಬೊಮ್ಮಯ್ಯ ಇಂದು ಶನಿವಾರ ನಿಧನರಾಗಿದ್ದಾರೆ.
ದೊಡ್ಡಬೊಮ್ಮಯ್ಯ ಅವರು ಸಂಜೆವಾಣಿ ಪತ್ರಿಕೆಯ ಮತ್ತು ಇಂದು ಸಂಜೆ ವರದಿಗಾರರಾಗಿ ಕಾರ್ಯ ನಿರ್ವಹಿಸಿದ್ದರು. ಆತ್ಮೀಯ ಬಳಗವನ್ನು ಗಳಿಸಿಕೊಂಡಿದ್ದ ಬೊಮ್ಮಯ್ಯ ಅವರು ನಿಧನ ಹೊಂದಿರುವುದು ಅವರ ಕುಟುಂಬ ವರ್ಗ ಮತ್ತು ಆತ್ಮೀಯ ಗೆಳೆಯರ ಬಳಗದಲ್ಲಿ ತೀವ್ರ ದುಃಖವನ್ನುಂಟುಮಾಡಿದೆ
ನಿನ್ನೆಯಷ್ಟೇ ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶನದ ಸುದ್ದಿ ವರದಿ ಕೆಲಸ ಮುಗಿಸಿ ಇಂದು ಬೆಳಗ್ಗೆ ಬೆಂಗಳೂರಿಗೆ ವಾಪಸ್ಸಾಗಿದ್ದ ದೊಡ್ಡಬೊಮ್ಮಯ್ಯ ಅವರು ತೀವ್ರ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.
ಬೆಳಗ್ಗೆ ಮೆಜೆಸ್ಟಿಕ್ ನಲ್ಲಿ ಬಸ್ಸಿನಿಂದ ಇಳಿದಾಗಲೇ ಅವರಿಗೆ ತೀವ್ರ ಹೃದಯಾಘಾತವಾಗಿದೆ. ಬಸ್ಸಿನಲ್ಲಿಯೇ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.
ಮೂಲತಃ ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ರೊಪ್ಪ ಗ್ರಾಮದವರಾದ ದೊಡ್ಡಬೊಮ್ಮಯ್ಯ, ಬೆಂಗಳೂರಿನಲ್ಲಿ ಸಂಜೆವಾಣಿ ದಿನಪತ್ರಿಕೆಯಲ್ಲಿ ಕೆಲಸ ಮಾಡುತ್ತಿದ್ದರು. ಆಕಾಶವಾಣಿ ಮತ್ತು ದೂರದರ್ಶನಗಳಲ್ಲಿ ಸಹ ಅರೆಕಾಲಿಕ ವೃತ್ತಿ ಮಾಡುತ್ತಿದ್ದರು. ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ಉಪಾಧ್ಯಕ್ಷರಾಗಿದ್ದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…