ಹಿರಿಯ ಶಾಸಕರು ಸಚಿವ ಸ್ಥಾನ ಕೇಳೋದ್ರಲ್ಲಿ ತಪ್ಪಿಲ್ಲ : ಪರಮೇಶ್ವರ್ – vishwanews24
ಹಿರಿಯ ಶಾಸಕರು ಸಚಿವ ಸ್ಥಾನ ಕೇಳೋದ್ರಲ್ಲಿ ತಪ್ಪಿಲ್ಲ : ಪರಮೇಶ್ವರ್
ಬೆಂಗಳೂರು: ಅದೇನು ಗ್ಯಾಂಬ್ಲಿಂಗ್ ಅಲ್ಲ, ಹಿರಿಯ ಶಾಸಕರು ಸಚಿವ ಸ್ಥಾನ ಕೇಳೋದ್ರಲ್ಲಿ ತಪ್ಪಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಅವರು ಹೇಳಿದ್ದಾರೆ.ಈ ಕುರಿತು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಶಾಸಕರಾಗಿ ಎರಡು ಮೂರು ಬಾರಿ ಗೆದ್ದಿದ್ದಾರೆ. ಅವರು ಸಚಿವರಾಗಲು ಸಮರ್ಥರು. ಹೀಗಾಗಿ ಸಚಿವ ಸ್ಥಾನ ಕೇಳೋದ್ರಲ್ಲಿ ಯಾವ ತಪ್ಪೂ ಇಲ್ಲ. ಆದರೆ ಅದರ ಬಗ್ಗೆ ಸಿಎಂ ಮತ್ತು ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಬಹಿರಂಗವಾಗಿ ಕೇಳಬಹುದು, ಅದೇನು ಗ್ಯಾಂಬ್ಲಿಂಗ್ ಅಲ್ಲ. ಅವರಿಗೆ ಅರ್ಹತೆ ಇದೆ ಕೇಳ್ತಾರೆ. ನಾಯಕತ್ವ ವಿಚಾರ ಇರಲಿ, ಪುನಾರಚನೆ ಇರಲಿ ಹೈಕಮಾಂಡ್ ಮಾತ್ರವೇ ತೀರ್ಮಾನ ಮಾಡಬೇಕು. ಹೈಕಮಾಂಡ್ ಎಲ್ಲ ಗಮನಿಸಿದೆ, ಅವರಿಗೆ ಎಲ್ಲ ಗೊತ್ತಿದೆ. ಯಾವ ಸಂದರ್ಭದಲ್ಲಿ ಏನು ಮಾಡಬೇಕು ಅಂತ ಹೈಕಮಾಂಡ್‌ಗೆ ಗೊತ್ತಿದೆ, ಅವರು ಮಾಡ್ತಾರೆ” ಎಂದರು.
ಇದನ್ನೂ ಓದಿ:
ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಪರಮೇಶ್ವರ್ ಆಕಾಂಕ್ಷಿನಾ ಅನ್ನೋ ವಿಚಾರವಾಗಿ ಮಾತನಾಡಿದ ಅವರು, “ಈಗ ಪುನಾರಚನೆ ಚರ್ಚೆ ಆಗ್ತಿದೆ ಅಷ್ಟೇ. ಅಧ್ಯಕ್ಷ ಸ್ಥಾನ ವಿಚಾರ ಹೈಕಮಾಂಡ್‌ಗೆ ಬಿಟ್ಟಿದ್ದು. ಅದರ ಬಗ್ಗೆ ಹೈಕಮಾಂಡ್ ನಿರ್ಧಾರ ಮಾಡುತ್ತೆ. ಅನೇಕರಿಂದ ಮಾಹಿತಿ ಪಡೆದು ಹೈಕಮಾಂಡ್ ನಿರ್ಧಾರ ಮಾಡ್ತಾರೆ” ಎಂದು ತಿಳಿಸಿದರು.
