Featured

ಹಿರಿಯ ಶಾಸಕರು ಸಚಿವ ಸ್ಥಾನ ಕೇಳೋದ್ರಲ್ಲಿ ತಪ್ಪಿಲ್ಲ : ಪರಮೇಶ್ವರ್ – vishwanews24

ಹಿರಿಯ ಶಾಸಕರು ಸಚಿವ ಸ್ಥಾನ ಕೇಳೋದ್ರಲ್ಲಿ ತಪ್ಪಿಲ್ಲ : ಪರಮೇಶ್ವರ್

ಬೆಂಗಳೂರು: ಅದೇನು ಗ್ಯಾಂಬ್ಲಿಂಗ್ ಅಲ್ಲ, ಹಿರಿಯ ಶಾಸಕರು ಸಚಿವ ಸ್ಥಾನ ಕೇಳೋದ್ರಲ್ಲಿ ತಪ್ಪಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಅವರು ಹೇಳಿದ್ದಾರೆ.ಈ ಕುರಿತು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಶಾಸಕರಾಗಿ ಎರಡು ಮೂರು ಬಾರಿ ಗೆದ್ದಿದ್ದಾರೆ. ಅವರು ಸಚಿವರಾಗಲು ಸಮರ್ಥರು. ಹೀಗಾಗಿ ಸಚಿವ ಸ್ಥಾನ ಕೇಳೋದ್ರಲ್ಲಿ ಯಾವ ತಪ್ಪೂ ಇಲ್ಲ. ಆದರೆ ಅದರ ಬಗ್ಗೆ ಸಿಎಂ ಮತ್ತು ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಬಹಿರಂಗವಾಗಿ ಕೇಳಬಹುದು, ಅದೇನು ಗ್ಯಾಂಬ್ಲಿಂಗ್ ಅಲ್ಲ. ಅವರಿಗೆ ಅರ್ಹತೆ ಇದೆ ಕೇಳ್ತಾರೆ. ನಾಯಕತ್ವ ವಿಚಾರ ಇರಲಿ, ಪುನಾರಚನೆ ಇರಲಿ ಹೈಕಮಾಂಡ್ ಮಾತ್ರವೇ ತೀರ್ಮಾನ ಮಾಡಬೇಕು. ಹೈಕಮಾಂಡ್ ಎಲ್ಲ ಗಮನಿಸಿದೆ, ಅವರಿಗೆ ಎಲ್ಲ ಗೊತ್ತಿದೆ. ಯಾವ ಸಂದರ್ಭದಲ್ಲಿ ಏನು ಮಾಡಬೇಕು ಅಂತ ಹೈಕಮಾಂಡ್‌ಗೆ ಗೊತ್ತಿದೆ, ಅವರು ಮಾಡ್ತಾರೆ” ಎಂದರು.

ಇದನ್ನೂ ಓದಿ:

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಪರಮೇಶ್ವರ್ ಆಕಾಂಕ್ಷಿನಾ ಅನ್ನೋ ವಿಚಾರವಾಗಿ ಮಾತನಾಡಿದ ಅವರು, “ಈಗ ಪುನಾರಚನೆ ಚರ್ಚೆ ಆಗ್ತಿದೆ ಅಷ್ಟೇ. ಅಧ್ಯಕ್ಷ ಸ್ಥಾನ ವಿಚಾರ ಹೈಕಮಾಂಡ್‌ಗೆ ಬಿಟ್ಟಿದ್ದು. ಅದರ ಬಗ್ಗೆ ಹೈಕಮಾಂಡ್ ನಿರ್ಧಾರ ಮಾಡುತ್ತೆ. ಅನೇಕರಿಂದ ಮಾಹಿತಿ ಪಡೆದು ಹೈಕಮಾಂಡ್ ನಿರ್ಧಾರ ಮಾಡ್ತಾರೆ” ಎಂದು ತಿಳಿಸಿದರು.

Vishwa News 24

Recent Posts

ಮತ್ಸ್ಯಕ್ಷಾಮ: ಮಂಗಳೂರಿನಲ್ಲಿ ಮೀನುಗಾರಿಕೆ ನಿಲ್ಲಿಸಿದ ಶೇ.85ರಷ್ಟು ಬೋಟುಗಳು – vishwanews24

ಮತ್ಸ್ಯಕ್ಷಾಮ: ಮಂಗಳೂರಿನಲ್ಲಿ ಮೀನುಗಾರಿಕೆ ನಿಲ್ಲಿಸಿದ ಶೇ.85ರಷ್ಟು ಬೋಟುಗಳು ಮೀನುಗಳ ಕೊರತೆಯಿಂದಾಗಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಕರಾವಳಿಯ ಮೀನುಗಾರರು ಮಂಗಳೂರು(ದಕ್ಷಿಣ ಕನ್ನಡ):…

6 minutes ago

ಕಾರ್ಕಳ : ಭಗವಾನ್ ಬಾಹುಬಲಿಯ ಮಹಾಮಸ್ತಕಾಭಿಷೇಕ – 82.37 ಕೋಟಿ ರೂ.ನೆರವಿಗೆ ಸರಕಾರಕ್ಕೆ ಮನವಿ: ಡಾ.ಎಂಎನ್‌ಆರ್ – vishwanews24

ಕಾರ್ಕಳ : ಭಗವಾನ್ ಬಾಹುಬಲಿಯ ಮಹಾಮಸ್ತಕಾಭಿಷೇಕಕ್ಕೆ ಸಿದ್ಧತೆ: ಡಾ.ಎಂ.ಎನ್.ರಾಜೇಂದ್ರಕುಮಾರ್ 82.37 ಕೋಟಿ ರೂ.ನೆರವಿಗೆ ಸರಕಾರಕ್ಕೆ ಮನವಿ: ಡಾ.ಎಂಎನ್‌ಆರ್ ಕಾರ್ಕಳ: ಕಾರ್ಕಳದ…

1 hour ago

ಮೂಡುಬಿದಿರೆ: ಅಕ್ರಮ ಜಾನುವಾರು ಸಾಗಾಟ ಪತ್ತೆ; ಎಂಟು ದನಗಳ ರಕ್ಷಣೆ – vishwanews24

ಮೂಡುಬಿದಿರೆ: ಅಕ್ರಮ ಜಾನುವಾರು ಸಾಗಾಟ ಪತ್ತೆ; ಎಂಟು ದನಗಳ ರಕ್ಷಣೆ, ಎರಡು ವಾಹನ ವಶ ಮೂಡುಬಿದಿರೆ: ಅತ್ಯಂತ ಹಿಂಸಾತ್ಮಕವಾಗಿ ಹಾಗೂ…

1 hour ago

ರಾಜ್ಯದ ಹಲವೆಡೆ ಇಂದು, ನಾಳೆ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ : ಹವಾಮಾನ ಇಲಾಖೆ – vishwanews24

ರಾಜ್ಯದ ಹಲವೆಡೆ ಇಂದು, ನಾಳೆ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ : ಹವಾಮಾನ ಇಲಾಖೆ ಬೆಂಗಳೂರು: ರಾಜ್ಯದ ಹಲವೆಡೆ ಇಂದು…

1 hour ago

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ – vishwanews24

ಉಡುಪಿ : ಅಕ್ಕ ಕೆಫೆ ನಿರ್ವಹಣೆ ;  ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…

4 days ago

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ,  ದ.ಕ ಜಿಲ್ಲೆ ದ್ವೀತಿಯ – vishwanews24

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ,  ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…

4 days ago