Featured

ಹೀರಾ ಗೋಲ್ಡ್ ವಂಚನೆ ಪ್ರಕರಣ : ನೌಹೀರಾ ಶೇಖ್ ಒಡೆತನದ 300 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ ಮಾಡಿದ ಇಡಿ ಅಧಿಕಾರಿಗಳು -Vishwanews24

ಬೆಂಗಳೂರು : ಹೀರಾ ಗೋಲ್ಡ್ ವಂಚನೆ ಪ್ರಕರಣ ಸಂಬಂಧ ಎಂಇಪಿ ಪಕ್ಷದ ಮುಖ್ಯಸ್ಥೆ ನೌಹೀರಾ ಶೇಕ್ ಅವರಿಗೆ ಸೇರಿದ ಸುಮಾರು 300 ಕೋಟಿ ರೂ.ಗೂ ಅಧಿಕ ಆಸ್ತಿ ಹಾಗೂ ಹಣವನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

ಬ್ಯಾಂಕ್ ಗಳಿಗಿಂತ ಅಧಿಕ ಬಡ್ಡಿ ನೀಡುವ ಆಮಿಷ ಒಡ್ಡಿ ಹೀರಾ ಗೋಲ್ಡ್ ಕಂಪನಿ ಹೆಸರಿನಲ್ಲಿ ಕರ್ನಾಟಕ, ಮಹಾರಾಷ್ಟ್ರ, ದೆಹಲಿ, ಕೇರಳ ಸೇರಿದಂತೆ ಅನೇಕ ರಾಜ್ಯಗಳಲ್ಲಿ ಜನರಿಗೆ ಸಾವಿರಾರು ಕೋಟಿ ರೂ.ಗಳನ್ನು ನೌಹೀರಾ ಶೇಕ್ ವಂಚನೆ ಮಾಡಿದ್ದರು. ಹೀಗಾಗಿ ಜಾರಿ ನಿರ್ದೇಶನಾಲಯ ಇದೀಗ 300 ಕೊಟಿ ಗೂ ಅಧಿಕ ಆಸ್ತಿ ಮತ್ತು ಹಣವನ್ನು ಜಪ್ತಿ ಮಾಡಿದೆ.

ಜಾರಿ ನಿರ್ದೇಶನಾಲಯದ ಅಧಿಕಾರಿಗಳು 2014 ರ ಮೇ ತಿಂಗಳಲ್ಲಿ ಹೀರಾ ಸಮೂಹ ಸಂಸ್ಥೆಗಳ ಅಕ್ರಮ ಪತ್ತೆಗಾಗಿ ಆಂದ್ರಪ್ರದೇಶದ ಟೋಲಿ ಚೌಕಿಯಲ್ಲಿರುವ ಕಚೇರಿಯಲ್ಲಿ ಹುಡುಕಾಟ ನಡೆಸಿದ್ದರು. ನಂತರ ಅಧಿಕಾರಿಗಳು ವಿದೇಶಿ ವಿನಿಮಯ ನಿರ್ವಹಣಾ ಕಾಯಿದೆಯಡಿ ಪ್ರಕರಣವನ್ನು ದಾಖಲಿಸಿಕೊಂಡಿದ್ದರು. ಹೀರಾ ಗ್ರೂಪ್ ಭಾರತ ಮತ್ತು ವಿದೇಶಗಳಲ್ಲಿ ಕಂಪನಿಗಳನ್ನು ಹೊಂದಿದೆ. ತೆಲಂಗಾಣ ಪೊಲೀಸರು ಇತ್ತೀಚಗಷ್ಟೇ ನೌಹೀರಾ ಶೇಕ್ ಅವರನ್ನು ಬಂಧಿಸಿದ್ದರು.

ನೌಹೀರಾ ಶೇಖ್ ಮೂಲತಃ ಆಂಧ್ರಪ್ರದೇಶದ ತಿರುಪತಿಯವರು. 1973ರಲ್ಲಿ ಶೇಖ್ ಮೋಹಿಯುದ್ದೀನ್ ಸಾಹೇಬ್ ಕೋಲ್ಕರ್ ಮತ್ತು ಶೇಖ್ ಬಾಲ್ಕಿಜ್ ದಂಪತಿಗೆ ಜನಿಸಿದ ನೌಹೀರಾ, ಸಣ್ಣ ವಯಸ್ಸಿನಲ್ಲೇ ತಂದೆ ನಡೆಸುತ್ತಿದ್ದ ಉದ್ಯಮಗಳಲ್ಲಿ ತೊಡಗಿಕೊಂಡರು. ಇಸ್ಲಾಂ ಧರ್ಮದ ಬಗ್ಗೆ ಆಸಕ್ತಿ ಹೊಂದಿದ್ದ ನೌಹೀರಾ, ಧರ್ಮದ ಬಗ್ಗೆ ಹೆಚ್ಚು ಸಂಶೋಧನೆಗಳನ್ನು ಮಾಡಿದರು. ನಂತರ ಇಸ್ಲಾಂ ವೈಜ್ಞಾನಿಕ ಸಂಶೋಧನೆಯಲ್ಲಿ ಪದವೀಧರೆಯಾದರು. ಜತೆಗೆ, ಇಸ್ಲಾಂ ಕುರಿತಾಗಿ ಮಹಿಳೆಯರಿಗೆ ಪ್ರವಚನವನ್ನೂ ನೌಹೀರಾ ನೀಡುತ್ತಿದ್ದರು. ಕೊಲಂಬೋ ಅಂತಾರಾಷ್ಟ್ರೀಯ ಮುಕ್ತ ವಿಶ್ವವಿದ್ಯಾನಿಲಯದಿಂದ ಗೌರವ ಡಾಕ್ಟರೇಟ್ ಕೂಡ ನೌಹೀರಾಗೆ ಲಭಿಸಿತ್ತು.

Vishwa News 24

Recent Posts

ಕುಂದಾಪುರ: ಹೋಂಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ – vishwanews24

ಕುಂದಾಪುರ: ಹೋಂ ಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…

19 hours ago

ಉಚ್ಚಿಲ : ಕರಾವಳಿ ಭಾಗವಿಲ್ಲದೇ ರಾಜ್ಯಕ್ಕೆ ಹೆಚ್ಚಿನ ಬೆಲೆಯೇ ಇರುವುದಿಲ್ಲ :  ಮುಖ್ಯಮಂತ್ರಿ ಡಿ.ಕೆ.ಶಿ – vishwanews24

ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ  :…

24 hours ago

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ ; ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು – vishwanews24

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ  : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…

24 hours ago

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ – vishwanews24

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ    ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…

24 hours ago

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

2 days ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

2 days ago