ಅಹಮದಾಬಾದ್: ಪ್ರಧಾನಮಂತ್ರಿ ನರೇಂದ್ರ ಮೋದಿ ಹುಟ್ಟುಹಬ್ಬದ ಹಿನ್ನಲೆಯಲ್ಲಿ ಗುಜರಾತ್ ರಾಜ್ಯದ ಕೇವಡಿಯಾ ಜಿಲ್ಲೆಯಲ್ಲಿರುವ ಸರ್ದಾರ್ ಸರೋವರ ಅಣೆಕಟ್ಟು ಪ್ರದೇಶಕ್ಕೆ ಭೇಟಿ ನೀಡಿ, ಆರತಿ ಬೆಳಗಿದ್ದಾರೆ.
ಸರ್ದಾರ್ ಸರೋವರದ್ದ ಬಳಿ ಇರುವ ಏಕ್ತಾ ನರ್ಸರಿಗೆ ತೆರಳಿ ಅಲ್ಲಿನ ಪರಿಸರ ಸ್ನೇಹಿ ವಸ್ತುಗಳನ್ನು ನೋಡಿದರು. ಅಲ್ಲದೆ ಕ್ಯಾಕ್ಟಸ್ ಉದ್ಯಾನವನಕ್ಕೆ ಭೇಟಿ ನೀಡಿದರು. ನಂತರ ನರ್ಮದಾ ಜಿಲ್ಲೆಯ ಗುರುಡೇಶ್ವರ ದತ್ತ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.
ಅಣೆಕಟ್ಟು ಪ್ರದೇಶಕ್ಕೆ ಭೇಟಿ ನೀಡಿದ ವೇಳೆ ಪ್ರಧಾನಿ ಮೋದಿಯವರು ಬಣ್ಣ, ಬಣ್ಣದ ಚಿಟ್ಟೆಗಳನ್ನು ಹಾರಿಸುವ ಮೂಲಕ ಸಂಭ್ರಮಿಸಿದ್ದು, ಬಳಿಕ ಸರ್ದಾರ್ ಸರೋವರ ಅಣೆಕಟ್ಟನ್ನು ವೀಕ್ಷಣೆ ಮಾಡಿದರು. ಈ ವೇಳೆ ಪ್ರಧಾನಿ ಮೋದಿ ಅವರು ಪ್ರಥಮ ಪೂರ್ಣವೈಭವ ವೀಕ್ಷಿಸಿದ್ದಾರೆ.
1961, ಏಪ್ರಿಲ್ 5ರಂದು ಸರ್ದಾರ್ ಸರೋವರ ಅಣೆಕಟ್ಟೆ ನಿರ್ಮಾಣಕ್ಕೆ ಅಂದಿನ ಪ್ರಧಾನಿ ಜವಾಹರ್ ಲಾಲ್ ನೆಹರು ಅಡಿಗಲ್ಲುನೆಟ್ಟಿದ್ದರು. ಅದಾಗಿ ಹಲವು ಅಡೆತಡೆಗಳಿಂದ ವಿಳಂಬಗೊಂಡಿದ್ದ ಕಾಮಗಾರಿ 56 ವರ್ಷಗಳ ಬಳಿಕ, 2017ರಲ್ಲಿಪೂರ್ಣಗೊಂಡಿತ್ತು. 2018ರಲ್ಲಿಮಳೆ ಕೊರತೆ ಕಾರಣ ಅಣೆಕಟ್ಟೆ ತುಂಬಿರಲಿಲ್ಲ. ಈ ವರ್ಷ ಸಮೃದ್ಧ ಮಳೆಯಿಂದ ಮೊದಲ ಬಾರಿ ಭರ್ತಿಯಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…