ಹುಟ್ಟುಹಬ್ಬ ಸಂಭ್ರಮಾಚರಣೆಗೆ ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರುಪಾಲು..
ಉಪ್ಪಿನಂಗಡಿ: ನೇತ್ರಾವತಿ ನದಿಯಲ್ಲಿ ಮುಳುಗಿ ಮೂವರು ವಿದ್ಯಾರ್ಥಿಗಳು ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿಯಲ್ಲಿ ನಡೆದಿದೆ.
ಮಹಮ್ಮದ್ ಸುಹೈದ್, ಸಹೀರ್ ಹಾಗೂ ಫಿರ್ಝಾನ್ ಮೃತಪಟ್ಟ ವಿದ್ಯಾರ್ಥಿಗಳು. ಮೂವರು ವಿದ್ಯಾರ್ಥಿಗಳು ಉಪ್ಪಿನಂಗಡಿ ಜೂನಿಯರ್ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದರು.
ಮುಹಮ್ಮದ್ ಸುಹೈದ್, ಸಹೀರ್, ಫಿರ್ಝಾನ್ ಮೃತಪಟ್ಟ ವಿದ್ಯಾರ್ಥಿಗಳು. ಸೋಮವಾರ ರಾತ್ರಿ ಪಿರ್ಝಾನ್ ನ ಜನ್ಮದಿನವನ್ನು ಆಚರಿಸಲು ಮೂವರು ನೇತ್ರಾವತಿ ನದಿ ತೀರಕ್ಕೆ ತೆರಳಿದ್ದರು. ಕೇಕ್ ಕತ್ತರಿಸಿ, ಕೈತೊಳೆಯುವ ಸಂದರ್ಭದಲ್ಲಿ ನೀರು ಪಾಲಾಗಿದ್ದಾರೆ.
ಫಿರ್ಯಾನ್ ಮುಖಕ್ಕೆ ಅಂಟಿಕೊಂಡಿದ್ದ ಕೇಕ್ ತೊಳೆಯಲೆಂದು ನದಿಗೆ ಇಳಿದಿದ್ದು, ಅಂತ್ಯಂತ ಆಳದ ಗುಂಡಿಗೆ ಇಳಿದಿದ್ದು ನೀರು ಪಾಲಾಗಿದ್ದಾನೆ. ಆತನ ರಕ್ಷಣೆಗೆ ತೆರಳಿದ್ದ ಇನ್ನುಳಿದ ಇಬ್ಬರು ವಿದ್ಯಾರ್ಥಿಗಳು ಸಹ ನೀರು ಪಾಲಾಗಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.

ಇಂದು ಬೆಳಗ್ಗೆ ಆತನ ಮೃತದೇಹ ನದಿಯಲ್ಲಿ ಪತ್ತೆಯಾಗಿದೆ. ಈ ವೇಳೆ ಸಹೀರ್ ಹಾಗೂ ಫಿರ್ಝಾನ್ ಅವರನ್ನು ನದಿಯಲ್ಲಿ ಹುಡುಕಾಟ ನಡೆಸುವಾಗ ಅವರ ಮೃತದೇಹ ಕೂಡ ಪತ್ತೆಯಾಗಿದೆ. ಅಗ್ನಿ ಶಾಮಕ ದಳದ ಸಿಬ್ಬಂದಿ ಉಪ್ಪಿನಂಗಡಿ ಪೊಲೀಸರು ಸ್ಥಳಕ್ಕಾಗಮಿಸಿ ಕಾರ್ಯಾಚರಣೆ ನಡೆಸಿದ್ದಾರೆ. ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..
