ಮಂಗಳೂರು : ಹುಡುಗಿಯ ವೇಷ ಧರಿಸಿ ಬ್ಲಾಕ್ ಮೇಲ್ ಮಾಡಿ ಹಣ ಸುಲಿಗೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಉರ್ವ ಪೊಲೀಸ್ ರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಬಂಧಿತರನ್ನು ಬೆಂಗಳೂರು ನಿವಾಸಿಗಳಾದ ಆದಿತ್ಯ, ಹಾಗೂ ಅರುಣ್ ಎಚ್ ಎಸ್ ಎಂದು ಗುರುತಿಸಲಾಗಿದೆ.
ದೂರುದಾರರನ್ನು ಬೆಂಗಳೂರು ಮೂಲದ ಆರಾಧ್ಯ ಎಂಬ ಹೆಂಗಸಿನ ಹೆಸರಿನಲ್ಲಿ ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಪರಿಚಯ ಮಾಡಿಕೊಂಡಿರುತ್ತಾರೆ. ದೂರುದಾರರು ಆರೋಪಿಯ ಬೇಡಿಕೆಯಂತೆ ತಮ್ಮ ಭಾವಚಿತ್ರವನ್ನು ಕಳುಹಿಸಿಕೊಟ್ಟಿದ್ದು, ಈ ಭಾವಚಿತ್ರವನ್ನು ಪಡೆದುಕೊಂಡ ಆರೋಪಿ ಪೊಲೀಸರಿಗೆ ದೂರು ನೀಡಿ ಜೈಲಿಗೆ ಕಳುಹಿಸುವುದಾಗಿ ಬ್ಲಾಕ್ ಮೇಲ್ ಮಾಡಿ ಫಿರ್ಯಾಧಿದಾರರಿಂದ ರೂ 65,000/- ಹಣವನ್ನು ಬೆಂಗಳೂರಿನ ಯಶವಂತಪುರದಲ್ಲಿ ಪಡೆದುಕೊಂಡಿರುತ್ತಾರೆ.
ನಂತರದಲ್ಲಿ ಪದೇ ಪದೇ ಫೋನ್ ಮಾಡಿ ಹೆಚ್ಚಿನ ಹಣಕ್ಕಾಗಿ ಪೀಡಿಸುತ್ತಿರುವ ಹಿನ್ನಲೆಯಲ್ಲಿ ಬಗ್ಗೆ ಪ್ರಕರಣ ದಾಖಲಾಗಿ ತನಿಖೆಯಲ್ಲಿರುವ ಸಮಯ ಆರೋಪಿಗಳು ಫಿರ್ಯಾಧಿದಾರರಿಗೆ ಹಿರಿಯ ಪೊಲೀಸ್ ಅಧಿಕಾರಿಗಳ ಹಾಗೂ ರಾಜಕಾರಣಿಗಳ ಸೋಗಿನಲ್ಲಿ ಕರೆ ಮಾಡಿ ಹೆದರಿಸಿರುತ್ತಾರೆ.
ಪ್ರಕರಣದ ಆರೋಪಿಗಳನ್ನು ಖಚಿತ ಮಾಹಿತಿ ಆಧಾರದ ಮೇಲೆ ಬೆಂಗಳೂರಿನ ಕೊಲಂಬಿಯಾ ಆಸ್ಪತ್ರೆ ಬಳಿ ಆರೋಪಿಗಳನ್ನು ದಸ್ತಗಿರಿ ಮಾಡಲಾಗಿದೆ. ಈ ಪ್ರಕರಣದ ಮುಖ್ಯ ಆರೋಪಿ ಆರಾಧ್ಯ ಎಂಬ ಹೆಸರಿನಲ್ಲಿ ಪರಿಚಯ ಮಾಡಿಕೊಂಡಿದ್ದಾಕೆ ಪುರುಷ ವ್ಯಕ್ತಿ ಎಂಬುದು ದಸ್ತಗಿರಿ ಸಮಯ ತಿಳಿದು ಬಂದಿದ್ದು, ಹೆಂಗಸಿನ ವೇಷ ಧರಿಸಿ ಫಿರ್ಯಾಧಿದಾರರನ್ನು ನಂಬಿಸಿ ಬ್ಲಾಕ್ ಮೇಲ್ ಮಾಡಿರುತ್ತಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…