ಬೆಂಗಳೂರು: ಬುಧವಾರ ರಜೌರಿ ಜಿಲ್ಲೆಯಲ್ಲಿ ಉಗ್ರರ ಜೊತೆ ನಡೆದ ಗುಂಡಿನ ಚಕಮಕಿಯಲ್ಲಿ ಹುತಾತ್ಮರಾದ ಕನ್ನಡಿಗ ಯೋಧ ಎಂ.ವಿ. ಪ್ರಾಂಜಲ್ ಅವರ ಅವರ ಕುಟುಂಬಕ್ಕೆ ಮುಖ್ಯಮಂತ್ರಿಸಿದ್ದರಾಮಯ್ಯ ಅವರು 50 ಲಕ್ಷ ರೂ ಪರಿಹಾರ ಘೋಷಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ, ಯೋಧನ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ನಮನ ಸಲ್ಲಿಸಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ, ಕ್ಯಾಪ್ಟನ್ ಪ್ರಾಂಜಲ್ ಅವರು ತಮ್ಮ ತಂಡದೊಂದಿಗೆ ಕಾರ್ಯಾಚರಣೆ ನಡೆಸಿದ್ದರು. ನಾಗರಿಕರ ಜೊತೆ ಸಮಾಲೋಚನೆ ನಡೆಸುತ್ತಿರುವ ಸಂದರ್ಭದಲ್ಲಿ ಉಗ್ರರಿಂದ ತೀವ್ರವಾದ ದಾಳಿ ನಡೆಯಿತು. ಈ ಗುಂಡಿನ ದಾಳಿಯಲ್ಲಿ ಪ್ರಾಂಜಲ್ ಅವರು ನಾಗರಿಕರನ್ನು ರಕ್ಷಿಸುವ ಕಾರ್ಯದಲ್ಲಿ ನಿರತರಾಗಿದ್ದರು. ಉಗ್ರರೊಂದಿಗೆ ಈ ವೇಳೆ ಗುಂಡಿನ ಚಕಮಕಿ ನಡೆಯಿತು. ಈ ದಾಳಿಯಲ್ಲಿ ಪ್ರಾಂಜಲ್ ಅವರು ತೀವ್ರವಾಗಿ ಗಾಯಗೊಂಡು ಹುತಾತ್ಮರಾದರು.
ಹುತಾತ್ಮ ಯೋಧನ ಕುಟುಂಬಕ್ಕೆ ನಮ್ಮ ಸರ್ಕಾರದಿಂದ ಸಾಧ್ಯವಿರುವ ಎಲ್ಲಾ ರೀತಿಯ ನೆರವೂ ಸಿಗಲಿದೆ ಎಂದು ಹೇಳಿದರು.
ಉಡುಪಿ : ರೈಲ್ವೆ ನಿಲ್ದಾಣದಲ್ಲಿ ಆತ್ಮಹತ್ಯೆಗೆ ಯತ್ನಿಸುತ್ತಿದ್ದ ಯುವಕನ ರಕ್ಷಿಸಿದ ರೈಲ್ವೇ ಆರ್. ಪಿ .ಎಫ್ ಪಡೆ ಉಡುಪಿ: ಇಂದ್ರಾಳಿ…
ಆದಿಚುಂಚನಗಿರಿ ಮಠದ ಗುರುಭೈರವೈಕ್ಯ ಮಂದಿರ ಉದ್ಘಾಟಿಸಿದ ಪ್ರಧಾನಿ ಮೋದಿ ಮಂಡ್ಯ: ಆದಿಚುಂಚನಗಿರಿ ಮಠದಲ್ಲಿ ದ್ರಾವಿಡ-ಹೊಯ್ಸಳ ಶೈಲಿಯ ಶಿಲ್ಪಕಲೆಯಿಂದ ನಿರ್ಮಿಸಿರುವ ಶ್ರೀಗುರು…
ಮಂಗಳೂರು : ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ಕೇಂದ್ರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ಕೇಂದ್ರ ಸರಕರದ ಅಸ್ಪಷ್ಟ ವಿದೇಶಾಂಗ…
ಕೊಂಕಣ ರೈಲ್ವೆ: ಬೈಂದೂರಿನಲ್ಲಿ ಕ್ರಾಸಿಂಗ್ ಸ್ಟೇಶನ್ ನಿರ್ಮಾಣಕ್ಕೆ ಪ್ರಸ್ತಾವನೆ ಉಡುಪಿ : ಕರ್ನಾಟಕ ಕರಾವಳಿಯ ಮೂರು ಜಿಲ್ಲೆಗಳನ್ನು -ಉತ್ತರ ಕನ್ನಡ,…
ರಾಷ್ಟ್ರೀಯ ಪುರಸ್ಕಾರಕ್ಕೆ ಆಯ್ಕೆ: ಬೆಳ್ಳೆ ಗ್ರಾ.ಪಂ.ಗೆ ಕೇಂದ್ರ ತಂಡ ಭೇಟಿ ಶಿರ್ವ : ಆತ್ಮ ನಿರ್ಭರ ಭಾರತ ರಾಷ್ಟ್ರೀಯ ಪ್ರಶಸ್ತಿಗೆ…
ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಪ್ರಮಾಣವಚನ ಸ್ವೀಕಾರ ಪಾಟ್ನಾ: ಬಿಹಾರದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ನಾಯಕ…