ಹುಬ್ಬಳ್ಳಿ: ಪ್ರೀತಿ ನಿರಾಕರಿಸಿದ್ದಕ್ಕೆ ಪಾಗಲ್ ಪ್ರೇಮಿಯೊಬ್ಬ ಯುವತಿಯನ್ನು ಚಾಕುವಿನಿಂದ ಮನಬಂದಂತೆ ಇರಿದು ಹತ್ಯಗೈದ ಘಟನೆ ಇಲ್ಲಿನ ವೀರಾಪುರ ಓಣಿ ಕರಿಯಮ್ಮನ ಗುಡಿ ಬಳಿ ಬುಧವಾರ ಬೆಳಗಿನ ಜಾವ ಸಂಭವಿಸಿದೆ.
ವೀರಾಪುರ ಓಣಿಯ ಅಂಜಲಿ ಮೋಹನ ಅಂಬಿಗೇರ (21) ಕೊಲೆಯಾಗಿದ್ದು, ಯಲ್ಲಾಪುರ ಓಣಿಯ ಗಿರೀಶ (ವಿಶ್ವ) ಎಸ್. ಸಾವಂತ ಎಂಬಾತ ಕೊಲೆ ಮಾಡಿದ್ದಾನೆ.
ಅಂಜಲಿಯು ಪ್ರೀತಿ ನಿರಾಕರಿಸಿದ್ದಕ್ಕೆ ಹುಚ್ಚು ಪ್ರೇಮಿಯಾದ ಗಿರೀಶ ಬೆಳಗಿನ ಜಾವ 5 ಗಂಟೆ ಸುಮಾರಿಗೆ ಮನೆಯ ಬಾಗಿಲು ಬಡೆದಿದ್ದಾನೆ. ಆಗ ಅಂಜಲಿಯೇ ಬಾಗಿಲು ತೆರೆದಾಗ ಚಾಕುವಿನಿಂದ ಮನಬಂದಂತೆ ಇರಿದಿದ್ದಾನೆ. ರಕ್ತದ ಮಡುವಿನಲ್ಲಿ ಬಿದ್ದಿದ್ದ ಅಂಜಲಿ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾಳೆ ಎಂದು ಮೂಲಗಳು ತಿಳಿಸಿವೆ.
ಕೃತ್ಯ ಎಸಗಿದ ಗಿರೀಶ ಅಲ್ಲಿಂದ ಕಾಲ್ಕಿತ್ತಿದ್ದಾನೆ. ಆತನ ತಾಯಿ ಮನೆ ಮನೆಯ ಪಾತ್ರೆ ತೊಳೆಯುವ ಕೆಲಸ ಮಾಡಿಕೊಂಡಿದ್ದಾರೆಂದು ತಿಳಿದುಬಂದಿದೆ.
ಬೆಂಡಿಗೇರಿ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲಿಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ಹಂತಕನ ಪತ್ತೆ ನಡೆಸುತ್ತಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…