ಹುಬ್ಬಳ್ಳಿ: ದಲಿತ ಯುವಕನನ್ನು ಪ್ರೀತಿಸಿ ಮದುವೆಯಾದ ಕಾರಣಕ್ಕೆ ಮಗಳನ್ನು ಸ್ವಂತ ತಂದೆ ಹಾಗೂ ಆತನ ಕುಟುಂಬದ ಸದಸ್ಯರು ಸೇರಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆಗೈದ ಹೃದಯ ವಿದ್ರಾವಕ ಘಟನೆ ಹುಬ್ಬಳ್ಳಿ ತಾಲೂಕಿನ ಇನಾಂ ವೀರಾಪೂರ ಗ್ರಾಮದಲ್ಲಿ ರವಿವಾರ ನಡೆದಿದೆ.
ಇನಾಂ ವೀರಾಪೂರ ಗ್ರಾಮದ ಮಾನ್ಯಾ ಎಂಬ ಯುವತಿ ಅದೇ ಗ್ರಾಮದ ವಿವೇಕಾನಂದ ದೊಡ್ಡಮನಿ ಎಂಬ ದಲಿತ ಯುವಕನನ್ನು ಕುಟುಂಬದ ವಿರೋಧದ ನಡುವೆಯೂ ಮೇ ತಿಂಗಳಲ್ಲಿ ಮದುವೆಯಾಗಿದ್ದರು. ಮದುವೆಯ ನಂತರ ಪ್ರಾಣಭಯದಿಂದ ಹಾವೇರಿಯಲ್ಲಿ ನೆಲೆಸಿದ್ದ ದಂಪತಿ, ಇತ್ತೀಚೆಗೆ ತಮ್ಮ ಸ್ವಗ್ರಾಮಕ್ಕೆ ಮರಳಿ ವೈವಾಹಿಕ ಜೀವನ ನಡೆಸುತ್ತಿದ್ದರು ಎನ್ನಲಾಗಿದೆ.
ಭಾನುವಾರ ಜಮೀನಿನಲ್ಲಿ ಕೃಷಿ ಕೆಲಸ ಮಾಡುತ್ತಿದ್ದ ವಿವೇಕಾನಂದ ಹಾಗೂ ಅವರ ತಂದೆಯ ಮೇಲೆ ಮಾನ್ಯಾಳ ಕುಟುಂಬದವರು ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಬಳಿಕ ಯುವಕನ ಮನೆಗೆ ತೆರಳಿ ಮಾನ್ಯಾ, ವಿವೇಕಾನಂದನ ತಾಯಿ ರೇಣವ್ವ ಸೇರಿದಂತೆ ಕುಟುಂಬದ ಇತರ ಸದಸ್ಯರ ಮೇಲೂ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿರುವುದಾಗಿ ವರದಿಯಾಗಿದೆ.
ಕುಟುಂಬದ ಮರ್ಯಾದೆ ಹಾಳು ಮಾಡಿದ್ದಾಳೆ ಎಂಬ ಕಾರಣಕ್ಕೆ ಆರು ತಿಂಗಳ ಗರ್ಭಿಣಿಯಾಗಿದ್ದ ಮಾನ್ಯಾಳ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಲಾಗಿದ್ದು, ತಲೆ ಹಾಗೂ ಹೊಟ್ಟೆ ಭಾಗಕ್ಕೆ ಗಂಭೀರ ಗಾಯಗಳಾಗಿದ್ದವು. ಅವರನ್ನು ಚಿಕಿತ್ಸೆಗಾಗಿ ನಗರದ ವಿವೇಕಾನಂದ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಮಾನ್ಯಾ ಹಾಗೂ ಅವರ ಹೊಟ್ಟೆಯಲ್ಲಿದ್ದ ಮಗು ಮೃತಪಟ್ಟಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಹಲ್ಲೆಯಲ್ಲಿ ಗಾಯಗೊಂಡಿರುವ ವಿವೇಕಾನಂದನ ತಾಯಿ ರೇಣವ್ವ ಹಾಗೂ ದೊಡ್ಡಪ್ಪ ಅವರ ಸ್ಥಿತಿ ಗಂಭೀರವಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.
ಘಟನೆ ಕುರಿತು ಮಾತನಾಡಿದ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕಾಶಗೌಡ ಪಾಟೀಲ, ವೀರನಗೌಡ ಪಾಟೀಲ ಮತ್ತು ಅರುಣಗೌಡ ಪಾಟೀಲ ಅವರನ್ನು ವಶಕ್ಕೆ ಪಡೆಯಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಇನ್ನೂ ಏಳು–ಎಂಟು ಮಂದಿ ವಿರುದ್ಧ ಕ್ರಮ ಕೈಗೊಳ್ಳಲಾಗಿದ್ದು, ಮಾನ್ಯಾ ಮೃತಪಟ್ಟಿದ್ದು, ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.
ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…
ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…
ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…
ಆನ್‌ಲೈನ್‌ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…
ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…
ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಡಿ.ಕೆ. ಶಿ ಸ್ಪಷ್ಟನೆ…