ಹುಬ್ಬಳ್ಳಿ : ಅಪರಿಚಿತ ವಾಹನ ಡಿಕ್ಕಿ : ಕರ್ತವ್ಯದಲ್ಲಿದ್ದ ಪೊಲೀಸ್ ಕಾನ್ಸ್ಟೇಬಲ್ ಸಾವು – Vishwanews24
ಹುಬ್ಬಳ್ಳಿ : ಅಪರಿಚಿತ ವಾಹನ ಡಿಕ್ಕಿ : ಕರ್ತವ್ಯದಲ್ಲಿದ್ದ ಪೊಲೀಸ್ ಕಾನ್ಸ್ಟೇಬಲ್ ಸಾವು – Vishwanews24
ಹುಬ್ಬಳ್ಳಿ ತಾಲೂಕಿನ ಬುಡನಾಳ ಕ್ರಾಸ್ ಬಳಿ ಅಪರಿಚಿತ ವಾಹನ ಡಿಕ್ಕಿಯಾಗಿ ಪೊಲೀಸ್ ಕಾನ್ಸ್ ಟೇಬಲ್ ಸೇರಿದಂತೆ ಇಬ್ಬರು ಸಾವನ್ನಪ್ಪಿದ್ದಾರೆ. ಮೃತ ಪೊಲೀಸ್ ಸಿಬ್ಬಂದಿಯನ್ನು 28 ವರ್ಷದ ಪಂಡಿತ ಕಾಸರ್ ಎಂದು ಗುರುತಿಸಲಾಗಿದೆ.
ಮತ್ತೋರ್ವ ಮೃತರ ಬಗ್ಗೆ ಮಾಹಿತಿ ತಿಳಿದು ಬಂದಿಲ್ಲ. ಮೃತ ಪಂಡಿತ್ ಕಾಸರ್ ಕಲಘಟಗಿ ಪೊಲೀಸ್ ಠಾಣೆಯಲ್ಲಿ ಕಾನ್ಸ್ ಟೇಬಲ್ ಆಗಿ ಸೇವೆ ಸಲ್ಲಿಸುತ್ತಿದ್ದರು. ಬಿರುಗಾಳಿ ಸಹಿತ ಮಳೆಯಾಗಿದ್ದರಿಂದ ಹುಬ್ಬಳ್ಳಿ – ಕಾರವಾರ ರಸ್ತೆಯಲ್ಲಿ ಮರಗಳು ಬಿದ್ದ ಪರಿಣಾಮ ಟ್ರಾಫಿಕ್ ಸಮಸ್ಯೆಯುಂಟಾಗಿತ್ತು.
ಟ್ರಾಫಿಕ್ ಕ್ಲಿಯರ್ ಮಾಡುವ ನಿಟ್ಟಿನಲ್ಲಿ ಸ್ಥಳಕ್ಕೆ ತೆರಳಿದ್ದರು. ಈ ವೇಳೆ ಅಲ್ಲಿಗೆ ಬಂದ ಅಪರಿಚಿತ ವಾಹನ ಡಿಕ್ಕಿಯಾದ ಪರಿಣಾಮ ಪೊಲೀಸ್ ಕಾನ್ಸ್ಟೇಬಲ್ ಹಾಗೂ ಮತ್ತೋರ್ವ ಸಾವನ್ನಪ್ಪಿದ್ದಾರೆ.
ಇನ್ನೂ ಅಪಘಾತದಲ್ಲಿ ಗಾಯಗೊಂಡವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ಠಾಣೆಯ ಪೊಲೀಸರು ಭೇಟಿ ನೀಡಿ ಸ್ಥಳದ ಪರಿಶೀಲನೆ ನಡೆಸಿದ್ದಾರೆ.
