ಹುಬ್ಬಳ್ಳಿ: ಈದ್ಗಾ ಮೈದಾನದಲ್ಲಿ ಟಿಪ್ಪು ಜಯಂತಿ ಆಚರಣೆ ವಿರೋಧಿಸಿ ಮುತ್ತಿಗೆ ಹಾಕಲು ಆಗಮಿಸಿದ್ದ ಶ್ರೀರಾಮ ಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಅವರನ್ನು ಪೊಲೀಸರು ವಶಕ್ಕೆ ಪಡೆದರು.
ಮುತ್ತಿಗೆ ಹಾಕಲು ಮೈದಾನದ ಬಳಿಯಿರುವ ಚೆನ್ನಮ್ಮ ವೃತ್ತಕ್ಕೆ ಆಗಮಿಸಿದ ಸಂದರ್ಭ ಪೊಲೀಸರು ತಡೆದರು. ಅವರದೇ ಕಾರಿನಲ್ಲಿ ವಶಕ್ಕೆ ಪಡೆದು ಸಿಎಆರ್ ಮೈದಾನಕ್ಕೆ ಕರೆದುಕೊಂಡು ಹೋಗಲಾಯಿತು. ಇದೇ ಸಂದರ್ಭದಲ್ಲಿ ಅವರೊಂದಿಗೆ ಆಗಮಿಸಿದ್ದ ಕಾರ್ಯಕರ್ತರನ್ನು ವಶಕ್ಕೆ ಪಡೆದು ಸಾರಿಗೆ ಸಂಸ್ಥೆ ಬಸ್ಸಿನಲ್ಲಿ ಕರೆದೊಯ್ಯಲಾಯಿತು.
ಪ್ರಮೋದ್ ಮುತಾಲಿಕ್ ಮೈದಾನಕ್ಕೆ ಬರುವ ಮುನ್ನೆಚ್ಚರಿಕೆ ಹಿನ್ನೆಲೆಯಲ್ಲಿ ಮೈದಾನ ಸುತ್ತಲೂ ಪೊಲೀಸ್ ಬಂದೋಬಸ್ತ್ ಆಯೋಜಿಸಿ ಸಂಚರಿಸುವ ಎಲ್ಲಾ ಕಾರುಗಳನ್ನು ಪೊಲೀಸರು ತಪಾಸಣೆ ಮಾಡುತ್ತಿರುವುದು ಕಂಡು ಬಂದಿತು.
ಕಾಸರಗೋಡು: ಬದಿಯಡ್ಕದ ಖ್ಯಾತ ದಂತ ವೈದ್ಯ ಡಾ.ಕೃಷ್ಣಮೂರ್ತಿ ನಾಪತ್ತೆ – Vishwanews24
ಇದೇ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಮೋದ್ ಮುತಾಲಿಕ್, ಟಿಪ್ಪು ಸುಲ್ತಾನ್ ಜಯಂತಿ ಆಚರಣೆಗೆ ನಮ್ಮ ವಿರೋಧವಿದೆ. ಹೀಗಾಗಿ ನಮಗೆ ಪ್ರತಿಭಟನೆ ಮಾಡಲು ಬಿಡುತ್ತಿಲ್ಲ. ಆತ ಹಿಂದೂ ಮತ್ತು ಕನ್ನಡ ವಿರೋಧಿ ಹಾಗಾಗಿ ಎಲ್ಲಿಯೂ ಆಚರಣೆ ಮಾಡಲು ಬಿಡುವುದಿಲ್ಲ. ಯಾವುದೇ ಸಂದರ್ಭದಲ್ಲಿ ಆಚರಣೆ ತಡೆಯುತ್ತೇವೆ. ಎಲ್ಲ ಮಹಾಪುರುಷರಿಗೆ ಟಿಪ್ಪು ಸುಲ್ತಾನ್ ಹೋಲಿಕೆ ಮಾಡಬಾರದು. ಮಹಾನಗರ ಪಾಲಿಕೆ ತೆಗೆದುಕೊಂಡ ನಿಲುವನ್ನು ಖಂಡಿಸುತ್ತೇವೆ. ಎಐಎಂಐಎಂ ದೇಶ ದ್ರೋಹಿ ಪಕ್ಷವಾಗಿದೆ. ದೇಶ ದ್ರೋಹಿಗಳನ್ನು ಬಿಜೆಪಿ ಬೆಳೆಸುತ್ತಿದೆ. ಇದಕ್ಕೆ ನಮ್ಮ ವಿರೋಧವಿದೆ. ಮತಾಂತರ ಮಾಡಿದವರ ಜಯಂತಿ ಆಚರಣೆ ಸರಿಯಲ್ಲ. ಟಿಪ್ಪು ಜಯಂತಿ ಆಚರಣೆ ಬೇಡವೆಂದು ಹೈಕೋರ್ಟ್ ನಲ್ಲಿ ಪಿಐಎಲ್ ಹಾಕಲಾಗುವುದು ಎಂದರು.
ಉಳ್ಳಾಲ : ಸಿಸಿ ಕ್ಯಾಮರಾ ಹಾನಿ ಪ್ರಕರಣ :- ಇಬ್ಬರು ಆರೋಪಿಗಳ ಬಂಧನ – Vishwanews24
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…