ಈ ಮೂಲಕ ಪ್ರಮೋದ್ ಮಧ್ವರಾಜ್ ಅವರು ತನ್ನ ರಾಜಕೀಯ ವಿರೋಧಿ ಮತ್ತು ಶಾಸಕ ರಘುಪತಿ ಭಟ್ ಅವರ ವಿರುದ್ದ ಟೀಕಾಸ್ತ್ರ ಬಿಟ್ಟಿದ್ದಾರೆ.
ಜೋಕಟ್ಟೆಯ ದನದ ವ್ಯಾಪಾರಿ ಹುಸೈನಬ್ಬ(61) ಶಂಕಾಸ್ಪದ ಸಾವಿನ ಪ್ರಕರಣದಲ್ಲಿ ಬಂಧಿತ ಹಿರಿಯಡ್ಕ ಎಸ್ಸೈ ಮತ್ತು ಇಬ್ಬರು ಪೊಲೀಸ್ ಸಿಬಂದಿಯನ್ನು ಕಾರವಾರ ಜೈಲಿನಲ್ಲಿ ಇರಿಸಲಾಗಿದೆ.
ಜೂನ್ 3ರ ರಾತ್ರಿ ಆರೋಪಿಗಳನ್ನು ನ್ಯಾಯಾಧೀಶರ ಮನೆಗೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಆದೇಶಿಸಲಾಗಿದೆ. ಆರೋಪಿಗಳನ್ನು ಕಾರವಾರ ಜೈಲಿನಲ್ಲಿ ಇರಿಸುವಂತೆ ಸೂಚಿಸಲಾಗಿದ್ದು, ಸೋಮವಾರ ಆರೋಪಿಗಳನ್ನು ನ್ಯಾಯಾಲಯಕ್ಕೆ ಮತ್ತೆ ಹಾಜರುಪಡಿಸಲಾಗುವುದು.
ಹಿರಿಯಡ್ಕ ಎಸ್ಸೈ ಡಿ.ಎನ್. ಕುಮಾರ್, ಠಾಣೆಯ ಜೀಪ್ ಚಾಲಕ ಗೋಪಾಲ, ಎಚ್. ಸಿ ಮೋಹನ ಕೊತ್ವಾಲ, ಬಜರಂಗದಳ ಕಾರ್ಯಕರ್ತರಾದ ಪೆರ್ಡೂರು ಪಕಾಲುವಿನ ಚೇತನ್ ಯಾನೆ ಚೇತನ್ ಆಚಾರ್ಯ(22), ಪೆರ್ಡೂರು ಅಲಂಗಾರು ನಿವಾಸಿ ಶೈಲೇಶ ಶೆಟ್ಟಿ(20). ಪೆರ್ಡೂರು ಕೆನ್ನೆತ್ ಬೈಲುವಿನ ಗಣೇಶ ನಾಯ್ಕ(24) ಸೇರಿದಂತೆ ಒಟ್ಟು ಹತ್ತು ಮಂದಿಯನ್ನು ಈ ಪ್ರಕರಣದಲ್ಲಿ ಬಂಧಿಸಲಾಗಿದೆ.
ಬಜರಂಗದಳ ಕಾರ್ಯಕರ್ತರು ಹಲ್ಲೆಗೈದ ಬಳಿಕ ಹುಸೈನಬ್ಬ ಅವರನ್ನು ಪೊಲೀಸರಿಗೆ ನೀಡಿದ್ದರು. ಈ ವೇಳೆ ಜೀಪಿನ ಹಿಂಬದಿ ಇದ್ದ ಹುಸೈನಬ್ಬ ಅಲ್ಲೇ ಸಾವಪ್ಪಿದ್ದರು. ದನ ಸಾಗಾಟದ ಸ್ಕಾರ್ಪಿಯೊವನ್ನು ಸುರೇಶ್ ಮೆಂಡನ್ ಮತ್ತು ಇತರ ಆರೋಪಿಗಳು ಠಾಣೆಗೆ ತಂದಿದ್ದರು ಎಂಬ ಸಂಗತಿ ಪೊಲೀಸ್ ತನಿಖೆಯಲ್ಲಿ ಬೆಳಕಿಗೆ ಬಂದಿದೆ.
ಬಜರಂಗಿಗಳಿಂದ ಹಲ್ಲೆಗೊಳಗಾಗಿದ್ದ ಹುಸೈನಬ್ಬ ಅವರು ಪೊಲೀಸ್ ಜೀಪಿನಲ್ಲೇ ಸಾವಪ್ಪಿರುವುದು ತನಿಖೆಯಿಂದ ಬಯಲಾಗುವ ಮೂಲಕ ಕರಾವಳಿಯಲ್ಲಿ ಹಲವು ಪೊಲೀಸರು ಸಂಘಪರಿವಾರದ ಕಾರ್ಯಕರ್ತರೊಂದಿಗೆ ಕೈಮಿಲಾಯಿಸಿದ್ದಾರೆ ಎಂಬ ಅನುಮಾನಗಳಿಗೆ ಪುಷ್ಠಿ ಬಂದಿದೆ.
ಮಲ್ಪೆ : ಸೈಂಟ್‌ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…