Featured

ಹೃದಯಸ್ತಂಭನ: ಗೋವಾ ಸಚಿವ, ಮಾಜಿ ಸಿಎಂ ರವಿ ನಾಯ್ಕ್ ನಿಧನ – vishwanews24

ಹೃದಯಸ್ತಂಭನ: ಗೋವಾ ಸಚಿವ, ಮಾಜಿ ಸಿಎಂ ರವಿ ನಾಯ್ಕ್ ನಿಧನ

ಪಣಜಿ: ಹೃದಯಸ್ತಂಭನದಿಂದ  ಗೋವಾ ಮಾಜಿ ಸಿಎಂ, ಕೃಷಿ ಸಚಿವ ರವಿ ನಾಯ್ಕ್  ಮಂಗಳವಾರ ತಡರಾತ್ರಿ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಪಣಜಿಯಿಂದ 30 ಕಿ.ಮೀ ದೂರದಲ್ಲಿರುವ ನಿವಾಸದಲ್ಲಿ ರವಿ ನಾಯ್ಕ್ ಅವರು ಹೃದಯಸ್ತಂಭನಕ್ಕೊಳಗಾಗಿದ್ದರು. ಕೂಡಲೇ ಪೊಂಡಾ ಪಟ್ಟಣದ ಖಾಸಗಿ ಆಸ್ಪತ್ರೆಗೆ ಅವರನ್ನು ದಾಖಲಿಸಲಾಯಿತು. ಆದರೆ ತಡರಾತ್ರಿ 1 ಗಂಟೆಯ ಸುಮಾರಿಗೆ ರವಿ ನಾಯ್ಕ್ ನಿಧನರಾಗಿದ್ದಾರೆ. ಇಂದು ಸಂಜೆ 3 ಗಂಟೆಯ ಸುಮಾರಿಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.

79 ವರ್ಷದ ರವಿ ನಾಯ್ಕ್ 2 ಬಾರಿ ಸಿಎಂ ಆಗಿ ಆಯ್ಕೆಯಾಗಿದ್ದರು. ಅಲ್ಲದೇ 7 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಇನ್ನು ರವಿ ನಾಯ್ಕ್ ನಿಧನಕ್ಕೆ ಗೋವಾ ಸಿಎಂ ಪ್ರಮೋದ್ ಸಾವಂತ್ ಸಂತಾಪ ಸೂಚಿಸಿದ್ದಾರೆ. ರವಿ ನಾಯ್ಕ್ ಅವರ ನಾಯಕತ್ವ, ವಿನಯತೆ ಹಾಗೂ ಸಾರ್ವಜನಿಕ ಕಲ್ಯಾಣಕ್ಕೆ ನೀಡಿದ ಕೊಡುಗೆ ಗಮನಾರ್ಹ ಎಂದು ಪ್ರಮೋದ್ ಸಾವಂತ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಇನ್ನು ರವಿ ನಾಯ್ಕ್ ನಿಧನಕ್ಕೆ ಪ್ರಧಾನಿ ಮೋದಿ ಕೂಡ ಸಂತಾಪ ಸೂಚಿಸಿದ್ದಾರೆ. ಸಚಿವ ರವಿ ನಾಯ್ಕ್ ಅವರ ನಿಧನದಿಂದ ದುಃಖಿತನಾಗಿದ್ದೇನೆ. ದೀನದಲಿತರ ಸಬಲೀಕರಣದಲ್ಲಿ ಹೆಚ್ಚು ಆಸಕ್ತಿ ಹೊಂದಿದ್ದ ರವಿ ನಾಯ್ಕ್, ಗೋವಾದ ಅಭಿವೃದ್ಧಿ ಪಥವನ್ನು ಹೆಚ್ಚು ಶ್ರೀಮಂತಗೊಳಿಸಿದ ಅನುಭವಿ ಆಡಳಿತಗಾರ. ಅಲ್ಲದೇ ಸಾರ್ವಜನಿಕರ ಸೇವೆಗಾಗಿ ತನ್ನನ್ನು ತಾನು ಸಮರ್ಪಿಸಿಕೊಂಡಿದ್ದರು ಎಂದು ಮೋದಿ ಎಕ್ಸ್‌ನಲ್ಲಿ ಉಲ್ಲೇಖಿಸಿದ್ದಾರೆ.

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

3 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

4 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

4 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

4 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

4 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

1 day ago