ಚಿತ್ರದುರ್ಗ: ದ್ವಿತೀಯ ಪಿಯು ವಿದ್ಯಾರ್ಥಿಯೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.
ವಿದ್ಯಾರ್ಥಿಯನ್ನು ಇಲ್ಲಿನ ಎಸ್‌ಎಲ್‌ವಿ ಕಾಲೇಜಿನ ದ್ವಿತೀಯ ಪಿಯು ವಿದ್ಯಾರ್ಥಿ ನಾಡಿಗ್ ಓಂಪ್ರಕಾಶ್ (17) ಎಂದು ಗುರುತಿಸಲಾಗಿದೆ.
“ಈತ ಹೊಳಲ್ಕೆರೆ ತಾಲ್ಲೂಕಿನ ಶಿವಗಂಗಾ ಗ್ರಾಮದವನಾಗಿದ್ದು, ಚಿತ್ರದುರ್ಗದ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರು. ಪ್ರತಿದಿನದಂತೆ ಬೆಳಗ್ಗೆ 8.30ಕ್ಕೆ ಓಂಪ್ರಕಾಶ್ ಕಾಲೇಜಿಗೆ ಬಂದಿದ್ದ. ಕೊಠಡಿಗೆ ತೆರಳು ವೇಳೆ ಈತ ದಿಢೀರ್ ಕುಸಿದು ಬಿದ್ದು, ತೀವ್ರ ಅಸ್ವಸ್ಥಗೊಂಡಿದ್ದರು” ಎಂದು ಪೊಲೀಸರು ತಿಳಿಸಿದ್ದಾರೆ.
ಓಂಪ್ರಕಾಶ್ ಕುಸಿದು ಬಿದ್ದಿದ್ದನ್ನ ಸಹಪಾಠಿಗಳು ಹಾಗೂ ಶಿಕ್ಷಕರು ಗಮನಿಸಿದ್ದು, ಆತನನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದಾರೆ. ಹೆಚ್ಚಿ ಚಿಕಿತ್ಸೆಗೆ ಎಂದು ಜಿಲ್ಲಾಸ್ಪತ್ರೆಗೆ ಸಾಗಿಸುವ ಮಾರ್ಗದ ನಡುವೆ ವಿದ್ಯಾರ್ಥಿ ಸಾವನ್ನಪ್ಪಿದ್ದಾರೆ. ವಿದ್ಯಾರ್ಥಿಯ ಸಾವಿಗೆ ಹೃದಯಾಘಾತ ಕಾರಣ ಎಂದು ವೈದ್ಯರು ಹೇಳಿದ್ದಾರೆ.
ಈ ಬಗ್ಗೆ ಬಡಾವಣೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದೀಪಾವಳಿ ಹಬ್ಬದ ಶುಭಾಶಯ ಕೋರಿದ ಗಣ್ಯರು – Vishwanews24
https://fb.watch/91_uf4AAFt/
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…