Featured

ಹೃದಯಾಘಾತದಿಂದ ಪತ್ನಿ ನಿಧನ :ಮನನೊಂದು ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಪತಿ – vishwanews24

ಹೃದಯಾಘಾತದಿಂದ ಪತ್ನಿ ನಿಧನ :ಮನನೊಂದು ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಪತಿ

ಉಳ್ಳಾಲ  : ಧಾರುಣ ಘಟನೆಯೊಂದರಲ್ಲಿ ಹೃದಯಾಘಾತದಿಂದ ಪತ್ನಿ ನಿಧನರಾದ ಸುದ್ದಿ ತಿಳಿದ ಕೆಲವೇ ನಿಮಿಷಗಳಲ್ಲಿ ಪತಿ ಕೂಡ ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಣಾಜೆಯ ಗ್ರಾಮಚಾವಡಿ ಎಂಬಲ್ಲಿ ನಡೆದಿದೆ.

ಮೃತರನ್ನು ಗ್ರಾಮ ಚಾವಡಿ ನಿವಾಸಿ ಮೀನಾಕ್ಷಿ ಪೂಜಾರಿ(59) ಮತ್ತು ಅವರ ಪತಿ ಶೇಷಪ್ಪ ಪೂಜಾರಿ(63) ಎಂದು ಗುರುತಿಸಲಾಗಿದೆ.

ಮೀನಾಕ್ಷಿ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದು, ಮನೆಯಲ್ಲಿದ್ದುಕೊಂಡೇ ಚಿಕಿತ್ಸೆ ಪಡೆಯುತ್ತಿದ್ದರು. ಮಂಗಳವಾರ ರಾತ್ರಿ ಮೀನಾಕ್ಷಿ ಆವರಿಗೆ ಎದೆನೋವು ಕಾಣಿಸಿಕೊಂಡಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಮೀನಾಕ್ಷಿ ಅವರ ಸ್ಥಿತಿ ಗಂಭಿರವಾಗಿದ್ದು ಸಾವು ಬದುಕಿನ ನಡುವೆ ಹೋರಾಡುತ್ತಿದ್ದರು. ಮರುದಿನ ಸಂಜೆ ಶೇಷಪ್ಪ ಆವರು ಮನೆಗೆ ಆಗಮಿಸಿದ್ದ ಸಂದರ್ಭ ಮೀನಾಕ್ಷಿ ಅವರ ಸಾವಿನ ಸುದ್ಧಿಯನ್ನು ಸಂಬಂಧಿಕರೊಬ್ಬರು ತಿಳಿಸಿದ್ದರು. ಸಂಬಂಧಿಕರು ಪಕ್ಕದ ಅಂಗಡಿಗೆ ತೆರಳಿ ವಾಪಾಸಾದಾಗ ಶೇಷಪ್ಪ ಅವರು ಕೀಟನಾಶಕವನ್ನು ಕುಡಿದಿದ್ದು, ಪಕ್ಕದ ಅಂಗಡಿಯವರು ಮತ್ತು ಸಂಬಂಧಿಕರು ಕೀಟನಾಶಕವನ್ನು ಎಳೆದು ತೆಗೆದರೂ ಅದಾಗಲೇ ಗಂಭೀರ ಸ್ಥಿತಿಯಲ್ಲಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದು, ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು.

ಮೀನಾಕ್ಷಿ ತನ್ನ ಪತಿ ಶೇಷಪ್ಪಪೂಜಾರಿ ಮತ್ತು ಮೀನಾಕ್ಷಿಯ ಸಹೋದರಿ ಮತ್ತು ಅವರ ಪತಿಯೂ ಒಂದೇ ಮನೆಯಲ್ಲಿ ವಾಸವಾಗಿದ್ದು, ಮಕ್ಕಳಿಲ್ಲದ ಕೊರಗು ಮತ್ತು ಅನಾರೋಗ್ಯದಿಂದ ಬೇಸತ್ತು ಪತ್ನಿ ಸಾವಿನ ಕೆಲವೇ ಗಂಟೆಯಲ್ಲಿ ತನ್ನ ಜೀವನವನ್ನು ಕೊನೆಗಾಣಿಸಿದ್ದಾರೆ. ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago