ಹೃದಯಾಘಾತದಿಂದ ಸಚಿವ ಉಮೇಶ್ ಕತ್ತಿ ನಿಧನ ; ಪ್ರಧಾನಿ ಮೋದಿ, ಬಿಎಸ್‍ವೈ ಕಂಬನಿ – VIshwnaews24
ಹೃದಯಾಘಾತದಿಂದ ಸಚಿವ ಉಮೇಶ್ ಕತ್ತಿ ನಿಧನ ; ಪ್ರಧಾನಿ ಮೋದಿ, ಬಿಎಸ್‍ವೈ ಕಂಬನಿ
ಬೆಂಗಳೂರು : ರಾಜ್ಯದ ಅರಣ್ಯ, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ್ ವಿ. ಕತ್ತಿ (62) ಅವರು ಹೃದಯಾಘಾತದಿಂದ ಮಂಗಳವಾರ ರಾತ್ರಿ ನಿಧನರಾದರು.
ರಾತ್ರಿ ಶೌಚಾಲಯಕ್ಕೆ ತೆರಳಿದ್ದ ಅವರು ಅಲ್ಲಿಯೇ ಕುಸಿದುಬಿದ್ದಿದ್ದರು. ಹತ್ತು ನಿಮಿಷಗಳಾದರೂ ಹೊರ ಬರದಿದ್ದಾಗ ಕುಟುಂಬದವರು ಬಾಗಿಲು ತೆರೆದು ಒಳ ಹೋದಾಗ ಅಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವುದು ಕಂಡುಬಂದಿತ್ತು. ಬಳಿಕ ಅವರನ್ನು ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ತೀವ್ರನಿಗಾ ಘಟಕದಲ್ಲಿ ಇರಿಸಲಾಗಿತ್ತು. ತಡರಾತ್ರಿ ವೇಳೆಗೆ ಉಮೇಶ ಕತ್ತಿ ಕೊನೆಯುಸಿರೆಳೆದರು ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.
ಸಚಿವ ಉಮೇಶ್ ಕತ್ತಿ ನಿಧನಕ್ಕೆ ರಾಜಕೀಯ ನಾಯಕರು, ಗಣ್ಯರು ಸೇರಿದಂತೆ ರಾಜ್ಯಾದ್ಯಂತ ಜನ ಕಂಬನಿ ಮಿಡಿಯುತ್ತಿದ್ದಾರೆ. ಇದೀಗ ಪ್ರಧಾನಿ ನರೇಂದ್ರ ಮೋದಿ ಯವರು ಕೂಡ ಕತ್ತಿ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ.
Shri Umesh Katti Ji was an experienced leader who made rich contributions to Karnataka’s development. Pained by his demise. My thoughts are with his family and supporters in this tragic hour. Om Shanti.
— Narendra Modi (@narendramodi) September 7, 2022
ಈ ಸಂಬಂಧ ಟ್ವೀಟ್ ಮಾಡಿರುವ ಕತ್ತಿ, ಉಮೇಶ್ ಕತ್ತಿ ಅವರು ಓರ್ವ ಅನುಭವಿ ನಾಯಕರಾಗಿದ್ದು, ಕರ್ನಾಟಕದ ಅಭಿವೃದ್ಧಿಗೆ ಅಭೂತಪೂರ್ವ ಕೊಡುಗೆ ನೀಡಿದ್ದರು. ಇದೀಗ ಅವರ ನಿಧನದ ಸುದ್ದಿ ಕೇಳಿ ಮನಸ್ಸಿಗೆ ತುಂಬಾ ನೋವಾಗಿದೆ. ಈ ಸಮಯದಲ್ಲಿ ಅವರ ಕುಟುಂಬಸ್ಥರ ದುಃಖದಲ್ಲಿ ನಾನೂ ಪಾಲುದಾರನಾಗಿದ್ದೇನೆ. ಓಂ ಶಾಂತಿ ಎಂದು ಬರೆದುಕೊಂಡಿದ್ದಾರೆ.
ಅರಣ್ಯ ಸಚಿವ, ನನ್ನ ಆಪ್ತ ಸಹೋದ್ಯೋಗಿ ಶ್ರೀ ಉಮೇಶ್ ಕತ್ತಿ ಅವರ ಅಕಾಲಿಕ ನಿಧನದಿಂದ ತೀವ್ರ ದುಃಖಿತನಾಗಿದ್ದೇನೆ. ಅವರ ನಿಧನದಿಂದ ರಾಜ್ಯ ಓರ್ವ ನುರಿತ ಮುತ್ಸದ್ಧಿ,ಕ್ರಿಯಾಶೀಲ ಮುಖಂಡ ಹಾಗೂ ನಿಷ್ಠಾವಂತ ಜನಸೇವಕನನ್ನು ಕಳೆದುಕೊಂಡಿದೆ. ಅವರ ಅಗಲಿಕೆಯ ದುಃಖವನ್ನು ಸಹಿಸುವ ಶಕ್ತಿಯನ್ನು ಆ ಭಗವಂತ ಅವರ ಕುಟುಂಬಕ್ಕೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ pic.twitter.com/tcfNlw9Cdr
— Basavaraj S Bommai (@BSBommai) September 6, 2022
ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪಪ್ರತಿಕ್ರಿಯಿಸಿ, ಉಮೇಶ್ ಕತ್ತಿ ಅವರ ನಿಧನ ರಾಜ್ಯಕ್ಕೆ, ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ನಿಧನದ ಸುದ್ದಿ ನೋವು ತರಿಸಿದೆ. ಭಗವಂತ ಅವರ ಕುಟುಂಬಕ್ಕೆ, ಕ್ಷೇತ್ರದ ಜನತೆಗೆ ನೋವು ತಡೆದುಕೊಳ್ಳುವ ಶಕ್ತಿ ಭರಿಸಲಿ. ಉತ್ತರ ಕರ್ನಾಟಕ ಭಾಗದಲ್ಲಿ ಪ್ರಭಾವಿ ನಾಯಕರಾಗಿದ್ದರು. 9 ಬಾರಿ ಶಾಸಕರಾಗಿ, 4 ಬಾರಿ ಸಚಿವರಾಗಿ ಉತ್ತಮ ಕೆಲಸ ಮಾಡಿದ್ದಾರೆ. ನಾನು ಸಹ ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸುತ್ತಿದ್ದೇನೆ ಎಂದು ಸಂತಾಪ ಸೂಚಿಸಿದ್ದಾರೆ.
