Featured

ಹೃದಯಾಘಾತದಿಂದ ಸಚಿವ ಉಮೇಶ್‌ ಕತ್ತಿ ನಿಧನ ;  ಪ್ರಧಾನಿ ಮೋದಿ, ಬಿಎಸ್‍ವೈ ಕಂಬನಿ – VIshwnaews24

ಹೃದಯಾಘಾತದಿಂದ ಸಚಿವ ಉಮೇಶ್‌ ಕತ್ತಿ ನಿಧನ ;  ಪ್ರಧಾನಿ ಮೋದಿ, ಬಿಎಸ್‍ವೈ ಕಂಬನಿ

ಬೆಂಗಳೂರು : ರಾಜ್ಯದ ಅರಣ್ಯ, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ್‌ ವಿ. ಕತ್ತಿ (62) ಅವರು ಹೃದಯಾಘಾತದಿಂದ ಮಂಗಳವಾರ ರಾತ್ರಿ ನಿಧನರಾದರು.

ರಾತ್ರಿ ಶೌಚಾಲಯಕ್ಕೆ ತೆರಳಿದ್ದ ಅವರು ಅಲ್ಲಿಯೇ ಕುಸಿದುಬಿದ್ದಿದ್ದರು. ಹತ್ತು ನಿಮಿಷಗಳಾದರೂ ಹೊರ ಬರದಿದ್ದಾಗ ಕುಟುಂಬದವರು ಬಾಗಿಲು ತೆರೆದು ಒಳ ಹೋದಾಗ ಅಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವುದು ಕಂಡುಬಂದಿತ್ತು. ಬಳಿಕ ಅವರನ್ನು ಎಂ.ಎಸ್‌. ರಾಮಯ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ತೀವ್ರನಿಗಾ ಘಟಕದಲ್ಲಿ ಇರಿಸಲಾಗಿತ್ತು. ತಡರಾತ್ರಿ ವೇಳೆಗೆ ಉಮೇಶ ಕತ್ತಿ ಕೊನೆಯುಸಿರೆಳೆದರು ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.

ಸಚಿವ ಉಮೇಶ್ ಕತ್ತಿ ನಿಧನಕ್ಕೆ ರಾಜಕೀಯ ನಾಯಕರು, ಗಣ್ಯರು ಸೇರಿದಂತೆ ರಾಜ್ಯಾದ್ಯಂತ ಜನ ಕಂಬನಿ ಮಿಡಿಯುತ್ತಿದ್ದಾರೆ. ಇದೀಗ ಪ್ರಧಾನಿ ನರೇಂದ್ರ ಮೋದಿ  ಯವರು ಕೂಡ ಕತ್ತಿ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಕತ್ತಿ, ಉಮೇಶ್ ಕತ್ತಿ ಅವರು ಓರ್ವ ಅನುಭವಿ ನಾಯಕರಾಗಿದ್ದು, ಕರ್ನಾಟಕದ ಅಭಿವೃದ್ಧಿಗೆ ಅಭೂತಪೂರ್ವ ಕೊಡುಗೆ ನೀಡಿದ್ದರು. ಇದೀಗ ಅವರ ನಿಧನದ ಸುದ್ದಿ ಕೇಳಿ ಮನಸ್ಸಿಗೆ ತುಂಬಾ ನೋವಾಗಿದೆ. ಈ ಸಮಯದಲ್ಲಿ ಅವರ ಕುಟುಂಬಸ್ಥರ ದುಃಖದಲ್ಲಿ ನಾನೂ ಪಾಲುದಾರನಾಗಿದ್ದೇನೆ. ಓಂ ಶಾಂತಿ ಎಂದು ಬರೆದುಕೊಂಡಿದ್ದಾರೆ.

ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪಪ್ರತಿಕ್ರಿಯಿಸಿ, ಉಮೇಶ್ ಕತ್ತಿ ಅವರ ನಿಧನ ರಾಜ್ಯಕ್ಕೆ, ಪಕ್ಷಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ನಿಧನದ ಸುದ್ದಿ ನೋವು ತರಿಸಿದೆ. ಭಗವಂತ ಅವರ ಕುಟುಂಬಕ್ಕೆ, ಕ್ಷೇತ್ರದ ಜನತೆಗೆ ನೋವು ತಡೆದುಕೊಳ್ಳುವ ಶಕ್ತಿ ಭರಿಸಲಿ. ಉತ್ತರ ಕರ್ನಾಟಕ ಭಾಗದಲ್ಲಿ ಪ್ರಭಾವಿ ನಾಯಕರಾಗಿದ್ದರು. 9 ಬಾರಿ ಶಾಸಕರಾಗಿ, 4 ಬಾರಿ ಸಚಿವರಾಗಿ ಉತ್ತಮ ಕೆಲಸ ಮಾಡಿದ್ದಾರೆ. ನಾನು ಸಹ ಅವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸುತ್ತಿದ್ದೇನೆ ಎಂದು ಸಂತಾಪ ಸೂಚಿಸಿದ್ದಾರೆ.

 

Vishwa News 24

Recent Posts

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

15 minutes ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

23 minutes ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

30 minutes ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

38 minutes ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

21 hours ago

ಮಂಗಳೂರು: MRPL ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕಡ ಕುಟುಂಬಕ್ಕೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO – vishwanews24

ಮಂಗಳೂರು: MRPL ಅಪಘಾತದಲ್ಲಿ ಮೃತಪಟ್ಟ ಮನೀಶ್ ಕರ್ಕಡ ಕುಟುಂಬಕ್ಕೆ ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ಒದಗಿಸಿದ EPFO ಮಂಗಳೂರು: ರಿಫೈನರಿ &…

21 hours ago