ಬೆಂಗಳೂರು: ಕನ್ನಡದ ಹಿರಿಯ ಪತ್ರಕರ್ತ ಹಾಗೂ ಸಂಯುಕ್ತ ಕರ್ನಾಟಕ ಪತ್ರಿಕೆ ಸಂಪಾದಕ ವಸಂತ ನಾಡಿಗೇರ (59) ಸೋಮವಾರ ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾಗಿದ್ದಾರೆ. ವಸಂತ್ ನಾಡಿಗೇರ ಅವರು ಕಳೆದ ಮೂರುವರೆ ದಶಕದಿಂದ ಕನ್ನಡ ಪತ್ರಿಕೋದ್ಯಮದಲ್ಲಿ ಕೆಲಸ ಮಾಡಿದ್ದಾರೆ. ವಸಂತ್ ನಾಡಿಗೇರ ಅವರು ಶೀರ್ಷಿಕೆಗಳ ಮೂಲಕವೇ ಮನೆ ಮಾತಾಗಿದ್ದರು. ವಸಂತ ನಾಡಿಗೇರ ಅವರು ಕನ್ನಡ ಪ್ರಭ, ವಿಜಯಕರ್ನಾಟಕ, ವಿಶ್ವವಾಣಿಯಲ್ಲಿ ಕಾರ್ಯ ನಿರ್ವಹಿಸಿದ್ದರು. ಇವರು ಕಳೆದ ಎರಡು ವರ್ಷಗಳಿಂದ ಸಂಯುಕ್ತ ಕರ್ನಾಟಕ ಸಂಪಾದಕರಾಗಿದ್ದರು. ಇವರಿಗೆ ಪತ್ನಿ, ಪುತ್ರಿ ಹಾಗೂ ಪುತ್ರ ಇದ್ದಾರೆ.
ವಸಂತ ನಾಡಿಗೇರ ಅವರು ಮೂಲತಃ ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನವರು. ಪ್ರಾಥಮಿಕ ಮತ್ತು ಪೌಢ ಶಿಕ್ಷಣವನ್ನು ರಾಣೆಬೆನ್ನೂರಿನಲ್ಲಿ ಪೂರ್ಣಗೊಳಿಸಿದರು. ನಂತರ ಧಾರವಾಡದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿಯನ್ನು ಪಡೆದರು. ವಸಂತ ನಾಡಿಗೇರ್ ಅವರು ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ರಸಾಯನ ಶಾಸ್ತ್ರದಲ್ಲಿ ಎಂಎಸ್ಸಿ ಪದವಿ ಪಡೆದರು. ವಸಂತ ನಾಡಿಗೇರ್ ಅವರಿಗೆ ಕರ್ನಾಟಕ ವಿಶ್ವ ವಿದ್ಯಾಲಯದ ಹಳೇ ವಿದ್ಯಾರ್ಥಿಗಳು, ಪ್ರಾಧ್ಯಾಪಕರು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…