Featured

ಹೃದಯಾಘಾತ : ಕನ್ನಡದ ಹಿರಿಯ ಪತ್ರಕರ್ತ ವಸಂತ ನಾಡಿಗೇರ ನಿಧನ – vishwanews24

ಹೃದಯಾಘಾತ : ಕನ್ನಡದ ಹಿರಿಯ ಪತ್ರಕರ್ತ ವಸಂತ ನಾಡಿಗೇರ ನಿಧನ

ಬೆಂಗಳೂರು: ಕನ್ನಡದ ಹಿರಿಯ ಪತ್ರಕರ್ತ ಹಾಗೂ ಸಂಯುಕ್ತ ಕರ್ನಾಟಕ ಪತ್ರಿಕೆ ಸಂಪಾದಕ ವಸಂತ ನಾಡಿಗೇರ (59) ಸೋಮವಾರ ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾಗಿದ್ದಾರೆ. ವಸಂತ್​ ನಾಡಿಗೇರ  ಅವರು ಕಳೆದ ಮೂರುವರೆ ದಶಕದಿಂದ ಕನ್ನಡ ಪತ್ರಿಕೋದ್ಯಮದಲ್ಲಿ ಕೆಲಸ ಮಾಡಿದ್ದಾರೆ. ವಸಂತ್​ ನಾಡಿಗೇರ  ಅವರು ಶೀರ್ಷಿಕೆಗಳ ಮೂಲಕವೇ ಮನೆ ಮಾತಾಗಿದ್ದರು. ವಸಂತ ನಾಡಿಗೇರ ಅವರು ಕನ್ನಡ ಪ್ರಭ, ವಿಜಯಕರ್ನಾಟಕ, ವಿಶ್ವವಾಣಿಯಲ್ಲಿ ಕಾರ್ಯ ನಿರ್ವಹಿಸಿದ್ದರು. ಇವರು ಕಳೆದ ಎರಡು ವರ್ಷಗಳಿಂದ ಸಂಯುಕ್ತ ಕರ್ನಾಟಕ ಸಂಪಾದಕರಾಗಿದ್ದರು. ಇವರಿಗೆ ಪತ್ನಿ, ಪುತ್ರಿ ಹಾಗೂ ಪುತ್ರ ಇದ್ದಾರೆ.

ವಸಂತ ನಾಡಿಗೇರ ಅವರು ಮೂಲತಃ ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನವರು. ಪ್ರಾಥಮಿಕ ಮತ್ತು ಪೌಢ ಶಿಕ್ಷಣವನ್ನು ರಾಣೆಬೆನ್ನೂರಿನಲ್ಲಿ ಪೂರ್ಣಗೊಳಿಸಿದರು. ನಂತರ ಧಾರವಾಡದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿಯನ್ನು ಪಡೆದರು. ವಸಂತ ನಾಡಿಗೇರ್​ ಅವರು ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ರಸಾಯನ ಶಾಸ್ತ್ರದಲ್ಲಿ ಎಂಎಸ್​ಸಿ ಪದವಿ ಪಡೆದರು. ವಸಂತ ನಾಡಿಗೇರ್​ ಅವರಿಗೆ ಕರ್ನಾಟಕ ವಿಶ್ವ ವಿದ್ಯಾಲಯದ ಹಳೇ ವಿದ್ಯಾರ್ಥಿಗಳು, ಪ್ರಾಧ್ಯಾಪಕರು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago