Featured

ಹೃದಯಾಘಾತ – ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್‌.ಧ್ರುವನಾರಾಯಣ ನಿಧನ – VIshwanews24

ಹೃದಯಾಘಾತ – ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್‌.ಧ್ರುವನಾರಾಯಣ ನಿಧನ

ಮೈಸೂರು: ಕೆಪಿಸಿಸಿ ಕಾರ್ಯಾಧ್ಯಕ್ಷ , ಮಾಜಿ ಸಂಸದ, ಕೆಪಿಸಿಸಿ ಉಡುಪಿ ಜಿಲ್ಲಾ ಉಸ್ತುವಾರಿ ಆರ್‌.ಧ್ರುವನಾರಾಯಣ ನಿಧನ ಹೊಂದಿದ್ದಾರೆ. ಹೃದಯಾಘಾತದಿಂದ ಅವರು ಮೈಸೂರಿನಲ್ಲಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಅವರಿಗೆ 61 ವರ್ಷ ವಯಸ್ಸಾಗಿತ್ತು.

ಧ್ರುವ ನಾರಾಯಣ ಅವರು ಶನಿವಾರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಹಠಾತ್ ಹೃದಯಾಘಾತ ಸಂಭವಿಸಿದ ಕೂಡಲೇ ಅವರನ್ನು ಮೈಸೂರಿನ ಡಿಆರ್​ಎಂಎಸ್​​ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಹಲೋಕ ತ್ಯಜಿಸಿದ್ದಾರೆ.

ಶನಿವಾರ ಬೆಳಗ್ಗೆ 6.30ರ ವೇಳೆಗೆ ಧ್ರುವನಾರಾಯಣ ಅವರಿಗೆ ಎದೆ ನೋವು ಕಾಣಿಸಿಕೊಂಡಿದೆ, ಕೂಡಲೇ ಅವರು ಡ್ರೈವರ್ ಗೆ ಕರೆ ಮಾಡಿದ್ದಾರೆ, ಅವರನ್ನು ಕಾರಿನಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ಮಾರ್ಗ ಮಧ್ಯದಲ್ಲೇ ಕೊನೆಯುಸಿರೆಳೆದಿದ್ದಾರೆ.

1983ರಲ್ಲಿ ಓರ್ವ ಸಾಮಾನ್ಯ ಕಾರ್ಯಕರ್ತನಾಗಿ ಕಾಂಗ್ರೆಸ್ ಪಕ್ಷ ಸೇರಿದ ಆರ್. ಧ್ರುವನಾರಾಯಣ ಅವರು ಕಾಲಾಂತರದಲ್ಲಿ ಪಕ್ಷದ ಮುಖಂಡನಾಗಿ ಬೆಳೆದರು.

2004ರಲ್ಲಿ ಸಂತೇಮರಹಳ್ಳಿ ವಿಧಾನ ಸಭಾ ಕ್ಷೇತ್ರ ಹಾಗೂ 2008ರಲ್ಲಿ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರಗಳಿಂದ ಸತತ ಎರಡು ಬಾರಿ ಶಾಸಕರಾಗಿ ಜಯ ಗಳಿಸಿದ್ದರು. 1999ರಲ್ಲಿ ಸಂತೇಮರಹಳ್ಳಿ ಕ್ಷೇತ್ರದ ವಿಧಾನ ಸಭಾ ಚುನಾವಣೆಯಲ್ಲಿ ಜೆಡಿ(ಜಾತ್ಯತೀತ) ಅಭ್ಯರ್ಥಿ ಎ.ಆರ್. ಕೃಷ್ಣಮೂರ್ತಿ ಅವರ ಎದುರು ಪರಾಜಿತರಾದರು. ಆದರೆ ಇದೇ ಕೃಷ್ಣಮೂರ್ತಿ ಅವರನ್ನು 2004ರ ವಿಧಾನಸಭಾ ಚುನಾವಣೆಯಲ್ಲಿ ಕೇವಲ 1 ಮತದಿಂದ ಧೃವನಾರಾಯಣ ಸೋಲಿಸಿದ್ದರು. ಹಾಗೆಯೇ 2009 ಹಾಗೂ 2014ರ ಲೋಕಸಭಾ ಚುನಾವಣೆಯಲ್ಲಿ ಕೂಡ ಕೃಷ್ಣಮೂರ್ತಿ ಅವರನ್ನು ಸೋಲಿಸಿ ಸಂಸದರಾದರು. ಬೆಂಗಳೂರು ಕೃಷಿ ವಿಶ್ವವಿದ್ಯಾಲಯದಿಂದ ಕೃಷಿ ಪದವಿ ಹಾಗೂ ಸ್ನಾತಕೋತ್ತರ ಪದವಿ ಪಡೆದಿರುವ ಧೃವನಾರಾಯಣ ಮೂಲತಃ ವೃತ್ತಿಯಿಂದ ಕೃಷಿಕರು.

Vishwa News 24

Recent Posts

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ – vishwanews24

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…

6 hours ago

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆಯನ್ನು ತಿರುಚಲಾಗಿದೆ : ಸಿಎಂ  – vishwanews24

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ  ಬೆಂಗಳೂರು: ನನಗೆ ಮದ…

6 hours ago

ಎಚ್ಚರ ತಪ್ಪಿದರೆ ಎಂಆರ್‌ಪಿಎಲ್ ಯಾವತ್ತಿಗೂ ಜೀವಂತ ಜ್ವಾಲಾಮುಖಿ: ಸತ್ಯಜಿತ್ ಸುರತ್ಕಲ್ – vishwanews24

ಎಂಆರ್‌ಪಿಎಲ್‌ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…

7 hours ago

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ – vishwanews24

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…

7 hours ago

ಕಾರ್ಕಳ: ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…

8 hours ago

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ – vishwanews24

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…

8 hours ago