ಹೈದರಾಬಾದ್: ಟಾಲಿವುಡ್ ಖ್ಯಾತ ಹಾಸ್ಯ ನಟ ರಾಜೇಂದ್ರ ಪ್ರಸಾದ್ ಅವರ ಪುತ್ರಿ ಗಾಯತ್ರಿ ಹೃದಯಾಘಾತದಿಂದ ನಿಧನ ಹೊಂದಿರುವುದಾಗಿ ವರದಿಯಾಗಿದೆ.
ಶುಕ್ರವಾರ ಹೃದಯಾಘಾತಕ್ಕೆ ಒಳಗಾದ ಗಾಯತ್ರಿ ಅವರನ್ನು ಕುಟುಂಬ ಸದಸ್ಯರು ಹೈದರಾಬಾದ್‌ನ ಎಐಜಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಗಾಯತ್ರಿ ನಿಧನ ಹೊಂದಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿವೆ.
ರಾಜೇಂದ್ರ ಪ್ರಸಾದ್ ಅವರಿಗೆ ಓರ್ವ ಪುತ್ರಿ ಹಾಗೂ ಓರ್ವ ಪುತ್ರ ಇದ್ದು ಇದೀಗ ಪುತ್ರಿಯ ಅಕಾಲಿಕ ಮರಣದಿಂದ ಕುಟುಂಬ ಕಂಗೆಟ್ಟಿದೆ. ಗಾಯತ್ರಿ ಅಕಾಲಿಕ ನಿಧನಕ್ಕೆ ಟಾಲಿವುಡ್ ಚಿತ್ರರಂಗ ಕಂಬನಿ ಮಿಡಿದಿದೆ.
ಖ್ಯಾತ ನಟರಾಗಿರುವ ರಾಜೇಂದ್ರ ಪ್ರಸಾದ್, ಮೊದಲು ಕ್ಯಾರೆಕ್ಟರ್ ಆರ್ಟಿಸ್ಟ್ ಆಗಿ ವೃತ್ತಿ ಜೀವನ ಆರಂಭಿಸಿ ನಂತರ ಕಾಮಿಡಿ ಹೀರೋ ಆದರು. ತೆಲುಗು ಪ್ರೇಕ್ಷಕರಿಗೆ ಹಲವು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ್ದರು. ಸದ್ಯ ಸ್ಟಾರ್ ಹೀರೋಗಳ ಚಿತ್ರಗಳಲ್ಲಿ ಕ್ಯಾರೆಕ್ಟರ್ ಆರ್ಟಿಸ್ಟ್ ಆಗಿ ಮಿಂಚುತ್ತಿದ್ದಾರೆ.
ಎಂಆರ್‌ಪಿಎಲ್ ನಲ್ಲಿ ಭಾರೀ ಸ್ಫೋಟ : ಸುಟ್ಟು ಕರಕಲಾದ ಸ್ಥಿತಿಯಲ್ಲಿ ಓರ್ವನ ಮೃತದೇಹ ಪತ್ತೆ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ಬುಧವಾರ ಮಧ್ಯಾಹ್ನದ…
MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ ಘಟನಾ ಸ್ಥಳದಲ್ಲಿ ಮಹಿಳಾ ಸಿಬ್ಬಂದಿ ಹಾಜರಿರಲಿಲ್ಲ ಹಾಗೂ ಗಾಯಗೊಂಡಿಲ್ಲ :…
ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ ಬಂಟ್ವಾಳ: ಕಲ್ಲಡ್ಕ ಫ್ಲೈಓವರ್ ಮೇಲೆ ದನಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು…
ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ.. ಬೈಕಂಪಾಡಿ, ಸುರತ್ಕಲ್, ಜೋಕಟ್ಟೆಯಲ್ಲಿ ಕಂಪಿಸಿದ ಕಟ್ಟಡಗಳು ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ…
ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…
ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…