ಬೆಳಗಾವಿ :ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಬಂಬಲವಾಡ ಗ್ರಾಮದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಪರೀಕ್ಷೆಗೂ ಮುನ್ನವೇ ಹೃದಯಾಘಾತದಿಂದ ಸಾವನ್ನಪ್ಪಿರುವ ದುರದೃಷ್ಟಕರ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು 17 ವರ್ಷದ ಭೂಮಿಕಾ ಮಾಳಂಗಿ ಎಂದು ಗುರುತಿಸಲಾಗಿದೆ. ಇಂದು ದ್ವಿತೀಯ ಪಿಯುಸಿ ಪರೀಕ್ಷೆ ಇದ್ದ ಕಾರಣ, ಭೂಮಿಕಾ ಬೆಳಗ್ಗೆಯಿಂದಲೇ ಪರೀಕ್ಷೆಗೆ ಉತ್ಸಾಹದಿಂದ ಸಿದ್ಧತೆ ಮಾಡಿಕೊಳ್ಳುತ್ತಿದ್ದಳು.
ಸ್ನಾನ ಮುಗಿಸಿ ಮನೆಯಿಂದ ಹೊರಬರುತ್ತಿದ್ದ ಸನ್ನಿವೇಶದಲ್ಲಿ ಆಕೆಗೆ ದಿಢೀರ್ ಆಗಿ ಎದೆನೋವು ಕಾಣಿಸಿಕೊಂಡು ಕುಸಿದು ಬಿದ್ದಿದ್ದಾಳೆ. ತಕ್ಷಣವೇ ಆತಂಕಗೊಂಡ ಪೋಷಕರು ಆಕೆಯನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯುವ ಪ್ರಯತ್ನ ಮಾಡಿದರು. ಆದರೆ, ದುರದೃಷ್ಟವಶಾತ್ ಆಸ್ಪತ್ರೆಗೆ ತಲುಪುವ ಮಾರ್ಗಮಧ್ಯೆಯೇ ಭೂಮಿಕಾ ಕೊನೆಯುಸಿರೆಳೆದಿದ್ದಾಳೆ.
ಇದನ್ನೂ ಓದಿ:
ಶೈಕ್ಷಣಿಕ ಜೀವನದ ಪ್ರಮುಖ ಪರೀಕ್ಷೆಯನ್ನು ಎದುರಿಸಬೇಕಿದ್ದ ವಿದ್ಯಾರ್ಥಿನಿ, ವಿಧಿಯಾಟಕ್ಕೆ ಬಲಿಯಾಗಿ ಜೀವನದ ಪರೀಕ್ಷೆಯನ್ನೇ ಮುಗಿಸಿರುವುದು ಪೋಷಕರ ಹಾಗೂ ಗ್ರಾಮಸ್ಥರ ಎದೆಯನ್ನು ಭಾರವಾಗಿಸಿದೆ. ಪರೀಕ್ಷೆಯ ಒತ್ತಡ ಅಥವಾ ಆರೋಗ್ಯದ ಏರುಪೇರು ಈ ಸಾವಿಗೆ ಕಾರಣವೇ ಎಂಬುದು ಇನ್ನಷ್ಟೇ ತಿಳಿಯಬೇಕಿದೆ. ತುಂಬು ವಯಸ್ಸಿನ ಮಗಳ ಅನಿರೀಕ್ಷಿತ ಸಾವಿನಿಂದ ಬಂಬಲವಾಡ ಗ್ರಾಮದಲ್ಲಿ ಶೋಕಮಯ ವಾತಾವರಣ ನಿರ್ಮಾಣವಾಗಿದ್ದು, ಪೋಷಕರ ಕ್ರಂದನ ಮುಗಿಲು ಮುಟ್ಟಿದೆ.
ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…
ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…
ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…