ಹೃದಯಾಘಾತ : ಪಿಯುಸಿ ವಿದ್ಯಾರ್ಥಿನಿ ಸಾವು – vishwanews24

Featured, ರಾಜ್ಯ ನ್ಯೂಸ್

ಹೃದಯಾಘಾತ : ಪಿಯುಸಿ ವಿದ್ಯಾರ್ಥಿನಿ ಸಾವು

ಕೊಪ್ಪಳ: ಹೃದಯಾಘಾತಕ್ಕೆ 18ರ ಯುವತಿ ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆ ಕೂಕನೂರ ತಾಲೂಕಿನ ರಾಯವಣಕಿ ಗ್ರಾಮದಲ್ಲಿ ನಡೆದಿದೆ.

ಕಾವ್ಯಾ ಚಲವಾದಿ (18) ಮೃತ ದುರ್ದೈವಿಯಾಗಿದ್ದು, ಈಕೆ ಪಿಯುಸಿ ಓದುತ್ತಿದ್ದರು ಎಂದು ತಿಳಿದುಬಂದಿದೆ.

ಮೃತ ಕಾವ್ಯಾ ಕಳೆದ ಎರಡು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಮಂಗಳವಾರ ಸಂಜೆ 6 ಗಂಟೆ ಸುಮಾರಿಗೆ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.

Leave a Reply