ಹೃದಯಾಘಾತ : ಬಿಜೆಪಿ ಹಿರಿಯ ನಾಯಕ ಎಂ ಬಿ ಭಾನುಪ್ರಕಾಶ್ ನಿಧನ – vishwanews24
ಬಿಜೆಪಿಯ ಹಿರಿಯ ನಾಯಕ ಎಂ ಬಿ ಭಾನುಪ್ರಕಾಶ್ ನಿಧನ
ಶಿವಮೊಗ್ಗ: ಬಿಜೆಪಿಯ ಹಿರಿಯ ನಾಯಕ ಎಂ ಬಿ ಭಾನುಪ್ರಕಾಶ್ ಅವರು ನಿಧನರಾಗಿದ್ದಾರೆ. ಮಾಜಿ ಎಂಎಲ್ಸಿ ಎಂಬಿ ಭಾನುಪ್ರಕಾಶ್, ಹೃದಯಾಘಾತದಿಂದ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಶಿವಮೊಗ್ಗ ತಾಲೂಕಿನ ಮತ್ತೂರು ಗ್ರಾಮದ ಎಂ ಬಿ ಭಾನುಪ್ರಕಾಶ್ ಬಿಜೆಪಿ ಸಂಘಟನೆಯಲ್ಲಿ ಹಲವಾರು ಹುದ್ದೆಗಳನ್ನು ನಿರ್ವಹಿಸಿದ್ದರು.
ನಗರದ (Shivamogga) ಗೋಪಿ ಸರ್ಕಲ್‍ನಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರ ಏರಿಕೆ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಅವರು ಭಾಗಿಯಾಗಿದ್ದರು. ಈ ವೇಳೆ ಅವರು ತೀವ್ರ ಹೃದಯಾಘಾತವಾಗಿ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಶಿವಮೊಗ್ಗದ ಮ್ಯಾಕ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಅವರು ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ.
ಕೋಲ್ಕತ್ತಾ: ಎಕ್ಸ್‌ಪ್ರೆಸ್ ರೈಲಿಗೆ ಹಿಂಬದಿಯಿಂದ ಗೂಡ್ಸ್ ರೈಲು ಡಿಕ್ಕಿ : ಐವರು ದುರ್ಮರಣ – vishwanews24
ಶಿವಮೊಗ್ಗ ಜಿಲ್ಲೆಯ ಮತ್ತೂರಿನವರಾದ ಭಾನುಪ್ರಕಾಶ್ ನಳೀನ್ ಕುಮಾರ್ ಕಟೀಲ್ ರಾಜ್ಯ ಬಿಜೆಪಿ ಅಧ್ಯಕ್ಷರಾಗಿದ್ದ ಸಮಯದಲ್ಲಿ 2019ರಲ್ಲಿ ರಾಜ್ಯ ಬಿಜೆಪಿ ಉಪಾಧ್ಯಕ್ಷರಾಗಿ ಕೂಡ ಕರ್ತವ್ಯ ನಿರ್ವಹಿಸಿದ್ದರು. ಭಾನುಪ್ರಕಾಶ್ ಬಿಜೆಪಿಯ ಹಿರಿಯ ಮುಖಂಡ. ಸರಳ, ಸಜ್ಜನ ಎಂಬ ಹೆಗ್ಗಳಿಕೆ. ಸತ್ಯ, ನ್ಯಾಯ, ನಿಷ್ಠೆಯ ಪರವಾಗಿ ಮಾತನಾಡುವ ಉತ್ತಮ ವಾಗ್ಮಿ. ಗಾಜನೂರು ಜಿ.ಪಂ. ಕ್ಷೇತ್ರದಿಂದ ಆಯ್ಕೆಯಾಗಿದ್ದ ಭಾನುಪ್ರಕಾಶ್ 2001ರಿಂದ 2005ರ ಅವಧಿಯಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯರಾಗಿದ್ದರು. ಬಳಿಕ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದರು.
ಮಂಗಳೂರು:: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆ – vishwanews24
