ಹೃದಯಾಘಾತ : ಸ್ಯಾಂಡಲ್‌ವುಡ್‌ ಹಿರಿಯ ನಟ ಮನ್​ದೀಪ್​ ರಾಯ್ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು – Vishwanews24

Featured, ರಾಜ್ಯ ನ್ಯೂಸ್

ಹೃದಯಾಘಾತ : ಸ್ಯಾಂಡಲ್‌ವುಡ್‌ ಹಿರಿಯ ನಟ ಮನ್​ದೀಪ್​ ರಾಯ್ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ ಮನ್​ದೀಪ್​ ರಾಯ್​ ಅವರಿಗೆ ಹೃದಯಾಘಾತ ಸಂಭವಿಸಿದೆ. ಬೆಂಗಳೂರಿನ ಶೇಷಾದ್ರಿಪುರದಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೂರು ದಿನಗಳ ಹಿಂದೆ ಹಾರ್ಟ್​ ಅಟ್ಯಾಕ್​ ಆಗಿದೆ. ಸದ್ಯ ಅವರಿಗೆ ಚಿಕಿತ್ಸೆ ಮುಂದುವರಿಸಲಾಗುತ್ತಿದೆ.

ಶೀಘ್ರದಲ್ಲೇ ಮನ್​ದೀಪ್​ ರಾಯ್​ ಅವರ ಹೆಲ್ತ್​ ಅಪ್​ಡೇಟ್​ ಸಿಗಲಿದೆ. 500ಕ್ಕೂ ಅಧಿಕ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. ಆದರೆ ಇಂದು ಅವರ ಚಿಕಿತ್ಸೆಗೆ ಹಣಕಾಸಿನ ತೊಂದರೆ ಉಂಟಾಗಿದೆ. ಆರ್ಥಿಕ ನೆರವಿನ ಅವಶ್ಯಕತೆ ಇದೆ ಎಂಬುದು ತಿಳಿದುಬಂದಿದೆ. ಮನ್​ದೀಪ್​ ರಾಯ್​ ಅವರು ಆದಷ್ಟು ಬೇಗ ಗುಣಮುಖರಾಗಲಿ ಎಂದು ಅಭಿಮಾನಿಗಳು ಪ್ರಾರ್ಥಿಸುತ್ತಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ಪ್ರಪ್ರಥಮ ಬಾರಿಗೆ ಗೆಜ್ಜೆಗಿರಿ ಕ್ಷೇತ್ರ ಮಹಾತ್ಮೆ ಯಕ್ಷಗಾನ ಬಯಲಾಟ – Vishwanews24

Leave a Reply