Featured

ಹೆಚ್ಎಂಪಿವಿ ವೈರಸ್ – ಸೋಂಕು ಹರಡದಂತೆ ಸರ್ಕಾರದಿಂದ ಸೂಕ್ತ ಮುಂಜಾಗ್ರತಾ ಕ್ರಮ : ಸಿಎಂ – vishwanews24

ಹೆಚ್ಎಂಪಿವಿ ವೈರಸ್ – ಸೋಂಕು ಹರಡದಂತೆ ಸರ್ಕಾರದಿಂದ ಸೂಕ್ತ ಮುಂಜಾಗ್ರತಾ ಕ್ರಮ : ಸಿಎಂ ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ಹೆಚ್ ಎಂ ಪಿ ವಿ ವೈರಸ್ ನ ಎರಡು ಪ್ರಕರಣ ಪತ್ತೆಯಾದ ಹಿನ್ನಲೆಯಲ್ಲಿ , ಸೋಂಕು ಹರಡದಂತೆ ಸರ್ಕಾರ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.ಚೈನಾ ದೇಶದಲ್ಲಿ ಹೆಚ್ ಎಂ ಪಿ ವಿ ವೈರಸ್ ಕಾಣಿಸಿಕೊಂಡಿದ್ದು, ಕರ್ನಾಟಕದಲ್ಲಿ ಈ ವೈರಸ್ ಪತ್ತೆಯಾಗಿರುವ ಮಾಹಿತಿ ದೊರೆತಿದೆ. ಆದ್ದರಿಂದ ಈ ವೈರಸ್ ಹರಡದಂತೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲು ಆರೋಗ್ಯ ಇಲಾಖೆಗೆ ಸೂಚನೆ ನೀಡಲಾಗಿದೆ. ಆರೋಗ್ಯ ಸಚಿವರು ಈಗಾಗಲೇ ಸಭೆ ನಡೆಸುತ್ತಿದ್ದು, ವೈರಸ್ ತಡೆಗೆ ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಗಳು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದರು.

ಸೋಂಕು ತಡೆಯ ಕ್ರಮವಾಗಿ ವಿಮಾನ ನಿಲ್ದಾಣಗಳಲ್ಲಿ ಸ್ಕ್ರೀನಿಂಗ್ ಪುನ: ಪ್ರಾರಂಭಿಸುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ಈ ಬಗ್ಗೆ ಆರೋಗ್ಯ ಸಚಿವರು ಸಭೆ ನಡೆಸುತ್ತಿದ್ದು, ರಾಜ್ಯದಲ್ಲಿ ತೆಗೆದುಕೊಳ್ಳಬಹುದಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ತೀರ್ಮಾನಿಸಲಾಗುವುದು ಎಂದರು.

Vishwa News 24

Recent Posts

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

25 minutes ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

38 minutes ago

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

4 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

4 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

4 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

4 days ago