Featured

ಹೆಚ್ಚಾದ ಮಂಕಿಪಾಕ್ಸ್ ಕಾಯಿಲೆ– ರಾಜ್ಯದ ವಿಮಾನ ನಿಲ್ದಾಣಗಳಲ್ಲಿ ಕಟ್ಟೆಚ್ಚರ ಕ್ರಮಕ್ಕೆ ಆದೇಶ , ಸುತ್ತೋಲೆ ಪ್ರಕಟ – vishwanews24

ಹೆಚ್ಚಾದ ಮಂಕಿಪಾಕ್ಸ್ ಕಾಯಿಲೆ– ರಾಜ್ಯದ ವಿಮಾನ ನಿಲ್ದಾಣಗಳಲ್ಲಿ ಕಟ್ಟೆಚ್ಚರ ಕ್ರಮಕ್ಕೆ ಆದೇಶ , ಸುತ್ತೋಲೆ ಪ್ರಕಟ

ಬೆಂಗಳೂರು: ಮಂಕಿಪಾಕ್ಸ್  ಕಾಯಿಲೆ ಹೆಚ್ಚಾಗುತ್ತಿದ್ದಂತೆ ಆರೋಗ್ಯ ಇಲಾಖೆ ರಾಜ್ಯದ ವಿಮಾನ ನಿಲ್ದಾಣಗಳಲ್ಲಿ ಕಟ್ಟೆಚ್ಚರ ಕ್ರಮಕ್ಕೆ ಆದೇಶ ಹೊರಡಿಸಿದೆ. ಕೇಂದ್ರ ಆರೋಗ್ಯ ಇಲಾಖೆಯ ಸೂಚನೆ ಬೆನ್ನಲ್ಲೇ ರಾಜ್ಯ ಆರೋಗ್ಯ ಇಲಾಖೆ ಸುತ್ತೋಲೆ ಪ್ರಕಟಿಸಿದೆ.

ನೆರೆಯ ಪಾಕಿಸ್ತಾನ  ಸೇರಿದಂತೆ ವಿವಿಧ ದೇಶಗಳಲ್ಲಿ ಮಂಕಿಪಾಕ್ಸ್ ಪತ್ತೆ ಹಿನ್ನೆಲೆ ರಾಜ್ಯ ಆರೋಗ್ಯ ಇಲಾಖೆ ಅಲರ್ಟ್ ಆಗಿದೆ. ವಿಮಾನ ನಿಲ್ದಾಣ ಮತ್ತು ಬಂದರುಗಳಲ್ಲಿ ಪ್ರಯಾಣಿಕರ ತಪಾಸಣೆಗೆ ಸೂಚನೆ ನೀಡಿದೆ. ಮಂಕಿಪಾಕ್ಸ್ ಶಂಕಿತರನ್ನ ಗುರುತಿಸಿ ಸ್ಕ್ರೀನಿಂಗ್ ಮಾಡುವಂತೆ ಹಾಗೂ ಅಂತಾರಾಷ್ಟ್ರೀಯ ಪ್ರಯಾಣಿಕರ ಮೇಲೆ ನಿಗಾ ಇಡುವಂತೆ ಹೇಳಿದೆ.

ಹೈರಿಸ್ಕ್ ದೇಶಗಳ ಮೇಲೆ ಎಚ್ಚರವಹಿಸುವಂತೆ ಮತ್ತು ಮಂಕಿಪಾಕ್ಸ್ ಕಂಡುಬಂದ ದೇಶಗಳ ಪ್ರಯಾಣಿಕರ ಮೇಲೆ ಹದ್ದಿನಕಣ್ಣಿಡಲು ಸೂಚನೆ ಕೊಟ್ಟಿದೆ.

ಮಂಕಿಪಾಕ್ಸ್ ಶಂಕಿತರ ಚಿಕಿತ್ಸೆಗೆ ಬೆಂಗಳೂರಿನ ಇಂದಿರಾನಗರದ ಆಸ್ಪತ್ರೆ ಹಾಗೂ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ. ಮಂಕಿಪಾಕ್ಸ್ ಶಂಕಿತರು ಕಂಡು ಬಂದರೆ ಶಂಕಿತ ಮಾದರಿಗಳನ್ನ ಬಿಎಮ್ ಸಿ ಲ್ಯಾಬ್ ಕಳಿಸುವಂತೆ ಸೂಚಿಸಿದೆ.

ಮಂಕಿಪಾಕ್ಸ್ ಕಂಡು ಬಂದರೆ 21 ದಿನಗಳ ಕ್ವಾರಂಟೈನ್ ಗುಳ್ಳೆಗಳು ಸಂಪೂರ್ಣ ವಾಸಿಯಾಗುವರೆಗೂ ಚಿಕಿತ್ಸೆ ನೀಡಲಾಗುತ್ತದೆ ಮತ್ತು ಸೋಂಕಿತರು ಮತ್ತೊಬ್ಬರ ಸಂಪರ್ಕಕ್ಕೆ ಬಾರದಂತೆ ಕ್ವಾರಂಟೈನ್‌ನಲ್ಲಿ ಇರಿಸಬೇಕು ಎಂದು ಹೇಳಿದೆ.

Vishwa News 24

Recent Posts

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

22 hours ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

23 hours ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

23 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

24 hours ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

1 day ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

1 day ago