ಬೆಂಗಳೂರು: ಮಂಕಿಪಾಕ್ಸ್ ಕಾಯಿಲೆ ಹೆಚ್ಚಾಗುತ್ತಿದ್ದಂತೆ ಆರೋಗ್ಯ ಇಲಾಖೆ ರಾಜ್ಯದ ವಿಮಾನ ನಿಲ್ದಾಣಗಳಲ್ಲಿ ಕಟ್ಟೆಚ್ಚರ ಕ್ರಮಕ್ಕೆ ಆದೇಶ ಹೊರಡಿಸಿದೆ. ಕೇಂದ್ರ ಆರೋಗ್ಯ ಇಲಾಖೆಯ ಸೂಚನೆ ಬೆನ್ನಲ್ಲೇ ರಾಜ್ಯ ಆರೋಗ್ಯ ಇಲಾಖೆ ಸುತ್ತೋಲೆ ಪ್ರಕಟಿಸಿದೆ.
ನೆರೆಯ ಪಾಕಿಸ್ತಾನ ಸೇರಿದಂತೆ ವಿವಿಧ ದೇಶಗಳಲ್ಲಿ ಮಂಕಿಪಾಕ್ಸ್ ಪತ್ತೆ ಹಿನ್ನೆಲೆ ರಾಜ್ಯ ಆರೋಗ್ಯ ಇಲಾಖೆ ಅಲರ್ಟ್ ಆಗಿದೆ. ವಿಮಾನ ನಿಲ್ದಾಣ ಮತ್ತು ಬಂದರುಗಳಲ್ಲಿ ಪ್ರಯಾಣಿಕರ ತಪಾಸಣೆಗೆ ಸೂಚನೆ ನೀಡಿದೆ. ಮಂಕಿಪಾಕ್ಸ್ ಶಂಕಿತರನ್ನ ಗುರುತಿಸಿ ಸ್ಕ್ರೀನಿಂಗ್ ಮಾಡುವಂತೆ ಹಾಗೂ ಅಂತಾರಾಷ್ಟ್ರೀಯ ಪ್ರಯಾಣಿಕರ ಮೇಲೆ ನಿಗಾ ಇಡುವಂತೆ ಹೇಳಿದೆ.
ಹೈರಿಸ್ಕ್ ದೇಶಗಳ ಮೇಲೆ ಎಚ್ಚರವಹಿಸುವಂತೆ ಮತ್ತು ಮಂಕಿಪಾಕ್ಸ್ ಕಂಡುಬಂದ ದೇಶಗಳ ಪ್ರಯಾಣಿಕರ ಮೇಲೆ ಹದ್ದಿನಕಣ್ಣಿಡಲು ಸೂಚನೆ ಕೊಟ್ಟಿದೆ.
ಮಂಕಿಪಾಕ್ಸ್ ಶಂಕಿತರ ಚಿಕಿತ್ಸೆಗೆ ಬೆಂಗಳೂರಿನ ಇಂದಿರಾನಗರದ ಆಸ್ಪತ್ರೆ ಹಾಗೂ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ. ಮಂಕಿಪಾಕ್ಸ್ ಶಂಕಿತರು ಕಂಡು ಬಂದರೆ ಶಂಕಿತ ಮಾದರಿಗಳನ್ನ ಬಿಎಮ್ ಸಿ ಲ್ಯಾಬ್ ಕಳಿಸುವಂತೆ ಸೂಚಿಸಿದೆ.
ಮಂಕಿಪಾಕ್ಸ್ ಕಂಡು ಬಂದರೆ 21 ದಿನಗಳ ಕ್ವಾರಂಟೈನ್ ಗುಳ್ಳೆಗಳು ಸಂಪೂರ್ಣ ವಾಸಿಯಾಗುವರೆಗೂ ಚಿಕಿತ್ಸೆ ನೀಡಲಾಗುತ್ತದೆ ಮತ್ತು ಸೋಂಕಿತರು ಮತ್ತೊಬ್ಬರ ಸಂಪರ್ಕಕ್ಕೆ ಬಾರದಂತೆ ಕ್ವಾರಂಟೈನ್‌ನಲ್ಲಿ ಇರಿಸಬೇಕು ಎಂದು ಹೇಳಿದೆ.
ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…
ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…
ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…
ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…
ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…
ಎಂಆರ್‌ಪಿಎಲ್ ಸ್ಫೋಟ ಪ್ರಕರಣ: ಮೃತರ ಕುಟುಂಬಕ್ಕೆ ಗರಿಷ್ಠ ಪರಿಹಾರ : ಭರತ್ ಶೆಟ್ಟಿ ಆಗ್ರಹ ಮಂಗಳೂರು: ಸ್ಫೋಟದ ನಿಖರ ಕಾರಣ…