Featured

ಹೆಚ್ಚಿದ ಒಮಿಕ್ರಾನ್ ಭೀತಿ : ಮುಂಬೈನಲ್ಲಿ 144 ಸೆಕ್ಷನ್ ಜಾರಿ – ಯಾವುದೇ ರೀತಿಯ ರ‍್ಯಾಲಿ, ಮೆರವಣಿಗೆಗೆ ನಡೆಸದಂತೆ ನಿಷೇಧ – Vishwanews24

ಮಹಾರಾಷ್ಟ್ರದಲ್ಲಿ ನಿನ್ನೆ ಒಂದೇ ದಿನ 7 ಓಮಿಕ್ರಾನ್  ಪ್ರಕರಣ, ಒಟ್ಟು 17  ಪ್ರಕರಣ..

ಮುಂಬೈನಲ್ಲಿ 144 ಸೆಕ್ಷನ್ ಜಾರಿ – ಯಾವುದೇ ರೀತಿಯ ರ‍್ಯಾಲಿ, ಮೆರವಣಿಗೆಗೆ ನಡೆಸದಂತೆ ನಿಷೇಧ – Vishwanews24

ಮುಂಬೈ: ಕೋವಿಡ್-19 ಹೊಸ ರೂಪಾಂತರಿ ಓಮಿಕ್ರಾನ್ ಸೋಂಕು ವೇಗವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಮುಂಬೈನಲ್ಲಿ 144 ಸೆಕ್ಷನ್ ಜಾರಿಗೊಳಿಸಲಾಗಿದೆ. ಡಿ.11, 12ರಂದು ನಗರದಲ್ಲಿ ಗುಂಪು ಸೇರುವಂತಹ ಯಾವುದೇ ರೀತಿಯ ರ‍್ಯಾಲಿ, ಮೆರವಣಿಗೆ ನಡೆಸದಂತೆ ನಿಷೇಧಿಸಲಾಗಿದೆ.

ಮಹಾರಾಷ್ಟ್ರದಲ್ಲಿ ನಿನ್ನೆ ಒಂದೇ ದಿನ ಓಮಿಕ್ರಾನ್ ಸೋಂಕಿತ 7 ಪ್ರಕರಣಗಳು ವರದಿಯಾಗಿವೆ. ಆ ಪೈಕಿ 3 ಪ್ರಕರಣಗಳು ಮುಂಬೈನಲ್ಲೇ ವರದಿಯಾಗಿವೆ. ನಗರದಲ್ಲಿ ಓಮಿಕ್ರಾನ್ ಸೋಂಕು ಮತ್ತಷ್ಟು ಹರಡುವ ಸಾಧ್ಯತೆ ಇದ್ದು, ಮುನ್ನೆಚ್ಚರಿಕೆ ಕ್ರಮವಾಗಿ 144 ಸೆಕ್ಷನ್ ಜಾರಿ ಮಾಡಲಾಗಿದೆ. ಆದೇಶವನ್ನು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಸಲಾಗಿದೆ.

ಈ ಕುರಿತು ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಮಹಾರಾಷ್ಟ್ರದಲ್ಲಿ 3 ವರ್ಷದ ಮಗು ಸೇರಿದಂತೆ ಸೇರಿದಂತೆ 7 ಮಂದಿಯಲ್ಲಿ ಓಮಿಕ್ರಾನ್ ಇರುವುದು ದೃಢಪಟ್ಟಿದೆ. ಸೋಂಕಿತರ ಪೈಕಿ ಮೂವರು ತಾಂಜಾನಿಯಾ, ಯುಕೆ ಮತ್ತು ದಕ್ಷಿಣ ಆಫ್ರಿಕಾದಿಂದ ಪ್ರಯಾಣ ಬೆಳೆಸಿದ್ದವರಾಗಿದ್ದಾರೆ. ನಾಲ್ವರು ಸೋಂಕಿತರು ನೈಜೀರಿಯಾದ ಮಹಿಳೆಯ ಪ್ರಾಥಮಿಕ ಸಂಪರ್ಕದಲ್ಲಿದ್ದವರು ಎಂದು ತಿಳಿದುಬಂದಿದೆ. ರಾಜ್ಯದಲ್ಲಿ ಓಮಿಕ್ರಾನ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಹಲವು ನಿರ್ಬಂಧಗಳನ್ನು ವಿಧಿಸಲಾಗಿದೆ ಎಂದು ತಿಳಿಸಿದೆ.

ಏಳು ಮಂದಿಯಲ್ಲಿ ನಾಲ್ವರಿಗೆ ಯಾವುದೇ ರೋಗ ಲಕ್ಷಣಗಳಿಲ್ಲ. ಆದರೆ ಪರೀಕ್ಷೆಯಲ್ಲಿ ಪಾಸಿಟಿವ್ ಬಂದಿದೆ. ಸೋಂಕಿತರ ಪೈಕಿ ನಾಲ್ವರು ಕೋವಿಡ್ ಲಸಿಕೆಯ ಎರಡೂ ಡೋಸ್‍ಗಳನ್ನು ಪಡೆದುಕೊಂಡಿದ್ದಾರೆ. ಓರ್ವ ಒಂದು ಡೋಸ್ ಮಾತ್ರ ಪಡೆದುಕೊಂಡಿದ್ದಾರೆ. ದೇಶದಲ್ಲೇ ಮೊದಲ ಬಾರಿಗೆ ಮಗುವಿನಲ್ಲಿ ಓಮಿಕ್ರಾನ್ ಪತ್ತೆಯಾಗಿರುವುದು ಆತಂಕ ಮೂಡಿಸಿದೆ. ಮಹಾರಾಷ್ಟ್ರದಲ್ಲಿ ಇದುವರೆಗೆ ಒಟ್ಟು 17 ಓಮಿಕ್ರಾನ್ ಪ್ರಕರಣಗಳು ವರದಿಯಾಗಿವೆ.

Vishwa News 24

Recent Posts

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ -vishwanews24

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…

5 hours ago

ಕಾಪು : ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ -vishwanews24

ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…

5 hours ago

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  -vishwanews24

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…

5 hours ago

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ -vishwanews24

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…

8 hours ago

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ -vishwanews24

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…

8 hours ago

ಎಂಆರ್‌ಪಿಎಲ್‌ ಸ್ಫೋಟ ಪ್ರಕರಣ: ಮೃತರ ಕುಟುಂಬಕ್ಕೆ ಗರಿಷ್ಠ ಪರಿಹಾರ : ಭರತ್‌ ಶೆಟ್ಟಿ ಆಗ್ರಹ -vishwanews24

ಎಂಆರ್‌ಪಿಎಲ್‌ ಸ್ಫೋಟ ಪ್ರಕರಣ: ಮೃತರ ಕುಟುಂಬಕ್ಕೆ ಗರಿಷ್ಠ ಪರಿಹಾರ : ಭರತ್‌ ಶೆಟ್ಟಿ ಆಗ್ರಹ ಮಂಗಳೂರು: ಸ್ಫೋಟದ ನಿಖರ ಕಾರಣ…

8 hours ago