ಬೆಂಗಳೂರು: ಸಿದ್ದಗಂಗ ಮಠದ ಶಿವಕುಮಾರ ಸ್ವಾಮೀಜಿ ಅವರನ್ನು ಶುಕ್ರವಾರ ಏರ್ ಆಂಬುಲೆನ್ಸ್ ಮೂಲಕ ಚೆನ್ನೈಗೆ ಕರೆದೊಯ್ಯಲಾಯಿತು. ತುಮಕೂರು ಸಮೀಪದ ಕ್ಯಾತ್ಸಂದ್ರದಲ್ಲಿರುವ ಸಿದ್ದಗಂಗ ಮಠದಿಂದ ಬೆಂಗಳೂರಿನ ಎಚ್‌ಎಎಲ್ ವಿಮಾನ ನಿಲ್ದಾಣಕ್ಕೆ ರಸ್ತೆಮಾರ್ಗದಲ್ಲಿ ಕರೆತರಲಾಯಿತು.
ಸ್ವಾಮೀಜಿ ಆರೋಗ್ಯ ತಪಾಸಣೆ ನಡೆಸಿದ ಬೆಂಗಳೂರು ಮತ್ತು ಚೆನ್ನೈನ ತಜ್ಞ ವೈದ್ಯರು ಅವರನ್ನು ವಾಯುಮಾರ್ಗದ ಮೂಲಕ ಚೆನ್ನೈಗೆ ಕರೆದೊಯ್ಯುವ ನಿರ್ಧಾರ ತೆಗೆದುಕೊಂಡರು. ಕಳೆದ ಶನಿವಾರವಷ್ಟೇ ಸ್ವಾಮೀಜಿ ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದರು. ಈ ವೇಳೆ ಅವರ ಯಕೃತ್‌ಗೆ ಸ್ಟಂಟ್‌ಗಳನ್ನು ಅಳವಡಿಸಲಾಗಿತ್ತು.
2016ರಲ್ಲಿ ಮೊದಲ ಬಾರಿಗೆ ಸ್ಟಂಟ್ ಅಳವಡಿಸಿದ ನಂತರ ಪದೇಪದೆ ಸೋಂಕಿನ ಕಾರಣಕ್ಕೆ ಜ್ವರ ಅವರನ್ನು ಬಾಧಿಸುತ್ತಿತ್ತು. ಸ್ವಾಮೀಜಿಯ ವಯಸ್ಸು ಈಗ 111 ವರ್ಷ. ಅವರಿಗೆ ಹೈಪರ್‌ಟೆನ್ಷನ್ (ಬಿಪಿ) ಅಥವಾ ಡಯಾಬಿಟಿಸ್ (ಶುಗರ್) ಸಮಸ್ಯೆ ಇಲ್ಲ. ಯಕೃತ್ತಿನ ಸಮಸ್ಯೆಯೊಂದು ಬಹುಕಾಲದಿಂದ ಬಾಧಿಸುತ್ತಿದೆ.
ಸ್ವಾಮೀಜಿ ಶೀಘ್ರ ಗುಣಮುಖರಾಗಬೇಕು ಎಂದು ರಾಜ್ಯದ ವಿವಿಧೆಡೆ ಭಕ್ತರು ಇಷ್ಟದೇವರಿಗೆ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು.
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…