Featured

ಹೆಚ್ಚು ವಿದ್ಯಾರ್ಹತೆ ಹೊಂದಿರದ ಯಾವೊಬ್ಬ ಅಂಗನವಾಡಿ ಕಾರ್ಯಕರ್ತೆಯರನ್ನು ತೆಗೆದುಹಾಕುವ ಪ್ರಶ್ನೆಯೇ ಇಲ್ಲ – Vishwanews24

ಹೆಚ್ಚು ವಿದ್ಯಾರ್ಹತೆ ಹೊಂದಿರದ ಯಾವೊಬ್ಬ ಅಂಗನವಾಡಿ ಕಾರ್ಯಕರ್ತೆಯರನ್ನು ತೆಗೆದುಹಾಕುವ ಪ್ರಶ್ನೆಯೇ ಇಲ್ಲ

ವಿಧಾನ ಪರಿಷತ್ತು: ರಾಜ್ಯದ ಅಂಗನವಾಡಿಗಳಲ್ಲೂ “ರಾಷ್ಟ್ರೀಯ ಶಿಕ್ಷಣ ನೀತಿ’ ಜಾರಿಗೊಳಿಸಲು ಸರ್ಕಾರ ನಿರ್ಧರಿಸಿದ್ದು, ಹಾಗಂತ ಹೆಚ್ಚು ವಿದ್ಯಾರ್ಹತೆ ಹೊಂದಿರದ ಯಾವೊಬ್ಬ ಅಂಗನವಾಡಿ ಕಾರ್ಯಕರ್ತೆಯರನ್ನು ತೆಗೆದುಹಾಕುವ ಪ್ರಶ್ನೆಯೇ ಇಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಹಾಲಪ್ಪ ಆಚಾರ್‌ ಅಭಯ ನೀಡಿದರು.

ಮಂಗಳವಾರ ಪ್ರಶ್ನೋತ್ತರ ವೇಳೆ ಜೆಡಿಎಸ್‌ ಸದಸ್ಯ ಗೋವಿಂದರಾಜು ಪ್ರಶ್ನೆಗೆ ಪ್ರತಿಕ್ರಿಯಿಸಿ, ರಾಜ್ಯದಲ್ಲಿ 66,361 ಅಂಗನವಾಡಿ ಕೇಂದ್ರಗಳಿದ್ದು, ಈ ಪೈಕಿ 20 ಸಾವಿರಕ್ಕೂ ಅಧಿಕ ಅಂಗನವಾಡಿಗಳಲ್ಲಿನ ಕಾರ್ಯಕರ್ತೆಯರು ಪಿಯುಸಿಗಿಂತ ಹೆಚ್ಚು ವಿದ್ಯಾರ್ಹತೆ ಹೊಂದಿದ್ದಾರೆ. ಮೊದಲ ಹಂತದಲ್ಲಿ ಈ ಅಂಗನವಾಡಿಗಳಲ್ಲಿ ಜಾರಿಗೊಳಿಸಲಾಗುವುದು. ಅದಕ್ಕೂ ಮುನ್ನ ಅಲ್ಲಿ ಕೆಲಸ ಮಾಡುವ ಕಾರ್ಯಕರ್ತೆಯರಿಗೆ ರಾಷ್ಟ್ರೀಯ ಶಿಕ್ಷಣ ನೀತಿಗೆ ಅನುಗುಣವಾಗಿ ಆರು ತಿಂಗಳ ತರಬೇತಿ ನೀಡಲಾಗುವುದು. ಉಳಿದವರಿಗೆ ಒಂದು ವರ್ಷ ಕೌಶಲ್ಯ ತರಬೇತಿ ಒದಗಿಸಲಾಗುವುದು. ಯಾರೊಬ್ಬರನ್ನೂ ತೆಗೆದುಹಾಕುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಇನ್ನುಮುಂದೆ ಅಂಗನವಾಡಿ ಕೇಂದ್ರಗಳಲ್ಲಿ ಕಾರ್ಯಕರ್ತೆಯರ ನೇಮಕಾತಿ ಸಂದರ್ಭದಲ್ಲಿ ಹೆಚ್ಚಿನ ವಿದ್ಯಾರ್ಹತೆ ಹೊಂದಿರುವವರಿಗೆ ಆದ್ಯತೆ ನೀಡಲಾಗುವುದು ಎಂದು ಹೇಳಿದರು.

ಆರ್ಥಿಕ ಪರಿಸ್ಥಿತಿ ಉತ್ತಮವಾಗಿರುತ್ತದೆ…ನೋಡಿ ಇಂದಿನ ದಿನ ಭವಿಷ್ಯ .. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಮುಂಬರುವ ದಿನಗಳಲ್ಲಿ ರಾಜ್ಯದಲ್ಲಿ 4,266 ಅಂಗನವಾಡಿ ಕೇಂದ್ರಗಳು ತಲೆಯೆತ್ತಲಿವೆ. ಅಲ್ಲೆಲ್ಲ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ)ಗೆ ಪೂರಕವಾದ ವಿದ್ಯಾರ್ಹತೆ ಹೊಂದಿರುವ ಕಾರ್ಯಕರ್ತೆಯರನ್ನು ತೆಗೆದುಕೊಳ್ಳಲಾಗುವುದು. ಇದರಿಂದ ಅನುಷ್ಠಾನ ಸುಲಭವಾಗಲಿದ್ದು, ಮಕ್ಕಳ ಬೆಳವಣಿಗೆಗೂ ಅನುಕೂಲ ಆಗಲಿದೆ ಎಂದ ಸಚಿವರು, ಎನ್‌ಇಪಿಗೆ ಸಂಬಂಧಿಸಿದಂತೆ ಪಠ್ಯಕ್ರಮ ವಿನ್ಯಾಸ, ಮೌಲ್ಯಮಾಪನ, ಸಮುದಾಯ ಸೇರಿ ಆರು ಸಮಿತಿಗಳನ್ನು ರಚಿಸಲಾಗಿದೆ. ಇದು ವರದಿ ನೀಡಿದ ನಂತರ ಪಠ್ಯಕ್ರಮ ಜಾರಿಗೆ ಬರಲಿದೆ ಎಂದರು.

ಕರ್ನಾಟಕ ಭೂ ಕಂದಾಯ (ತಿದ್ದುಪಡಿ) ವಿಧೇಯಕ ಮಂಡನೆ – Vishwanews24

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

12 hours ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

1 day ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

1 day ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

1 day ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

2 days ago