Featured

ಹೆಚ್ ವಿಶ್ವನಾಥ್ ಸಚಿವರಾಗಲು ಸಾಧ್ಯವಿಲ್ಲ : ಹೈಕೋರ್ಟ್ -Vishwanews24

ಹೆಚ್ ವಿಶ್ವನಾಥ್ ಸಚಿವರಾಗಲು ಸಾಧ್ಯವಿಲ್ಲ : ಹೈಕೋರ್ಟ್ -Vishwanews24

ಬೆಂಗಳೂರು : ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದ ಎ.ಎಚ್‌.ವಿಶ್ವನಾಥ್‌‌‌‌‌ ಅವರಿಗೆ ಹೈಕೋರ್ಟ್ ಆಘಾತ ನೀಡಿದ್ದು, “ಚುನಾವಣೆಯಲ್ಲಿ ಸೋತು, ವಿಧಾನಪರಿಷತ್‌‌‌‌‌‌‌ಗೆ ನಿರ್ದೇಶನಗೊಂಡು ಸದಸ್ಯರಾದ ಕಾರಣ ಅವರಿಗೆ ಸಚಿವರಾಗಲು ಸಾಧ್ಯವಿಲ್ಲ” ಎಂದು ಹೈಕೋರ್ಟ್ ತಿಳಿಸಿದೆ.

ಹೆಚ್ ವಿಶ್ವನಾಥ್, ಆರ್ ಶಂಕರ್ ಮತ್ತು ಎಂಟಿಬಿ ನಾಗರಾಜ್ ಅವರಿಗೆ ಸಚಿವ ಸ್ಥಾನ ನೀಡುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದಂತ ಅರ್ಜಿಯ ವಿಚಾರಣೆ ನಡೆಸಿದಂತ ಹೈಕೋರ್ಟ್ ವಿಭಾಗಿಯ ಪೀಠವು, ಹೆಚ್ ವಿಶ್ವನಾಥ್ ಸಚಿವರಾಗಲು ಅನರ್ಹರಾಗಿದ್ದಾರೆ. ಅನರ್ಹರಾಗಿ, ಸೋತು ನಾಮನಿರ್ದೇಶನಗೊಂಡಿದ್ದಾರೆ. ವಿಶ್ವನಾಥ್ ಅನರ್ಹತೆಯನ್ನು ಸಿಎಂ ಪರಿಗಣಿಸಬೇಕು. ಕಲಂ 164(1ಬಿ), 361 ಬಿ ಅಡಿ ವಿಶ್ವನಾಥ್ ಅನರ್ಹರು. ಹೀಗಾಗಿ 2021ರವರೆಗೆ ಸಚಿವರಾಗಲು ಅರ್ಹರಲ್ಲ ಎಂಬುದಾಗಿ ಮಹತ್ವದ ಆದೇಶ ನೀಡಿದೆ.

ಇನ್ನೂ ಆರ್.ಶಂಕರ್, ಎಂ.ಟಿ.ಬಿ ನಾಗರಾಜ್ ಅವರು ಚುನಾವಣೆಯಲ್ಲಿ ಆಯ್ಕೆಗೊಂಡು ಎಂ.ಎಲ್ ಸಿ ಆಗಿದ್ದಾರೆ. ಹೀಗಾಗಿ ಅವರಿಗೆ ಸಚಿವರಾಗಲು ಯಾವುದೇ ಅಡೆತಡೆಯಿಲ್ಲ. ಆದ್ರೇ ಹೆಚ್ ವಿಶ್ವನಾಥ್ ನಾಮ ನಿರ್ದೇಶನಗೊಂಡಿರೋದು. ಹೀಗಾಗಿ ಅವರಿಗೆ ಸಚಿವ ಸ್ಥಾನ ನೀಡೋದಕ್ಕೆ ಅನರ್ಹರಾಗಿದ್ದಾರೆ ಎಂಬುದಾಗಿ ಹೈಕೋರ್ಟ್ ವಿಭಾಗೀಯ ಪೀಠವು ಅಭಿಪ್ರಾಯ ಪಟ್ಟಿದೆ. ಈ ಮೂಲಕ ಹಳ್ಳಿಹಕ್ಕಿ ಹೆಚ್ ವಿಶ್ವನಾಥ್ ಗೆ ಬಿಗ್ ಶಾಕ್ ನೀಡಿದ್ದರೇ, ಆರ್ ಶಂಕರ್, ಎಂಟಿಬಿ ನಾಗರಾಜ್ ಗೆ ಬಿಗ್ ರಿಲೀಫ್ ನೀಡಿದೆ.

Vishwa News 24

Recent Posts

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ -vishwanews24

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…

58 minutes ago

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು -vishwanews24

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…

1 hour ago

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

21 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

22 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

23 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

23 hours ago