ಬೆಂಗಳೂರು : ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದ ಎ.ಎಚ್.ವಿಶ್ವನಾಥ್ ಅವರಿಗೆ ಹೈಕೋರ್ಟ್ ಆಘಾತ ನೀಡಿದ್ದು, “ಚುನಾವಣೆಯಲ್ಲಿ ಸೋತು, ವಿಧಾನಪರಿಷತ್‌ಗೆ ನಿರ್ದೇಶನಗೊಂಡು ಸದಸ್ಯರಾದ ಕಾರಣ ಅವರಿಗೆ ಸಚಿವರಾಗಲು ಸಾಧ್ಯವಿಲ್ಲ” ಎಂದು ಹೈಕೋರ್ಟ್ ತಿಳಿಸಿದೆ.
ಹೆಚ್ ವಿಶ್ವನಾಥ್, ಆರ್ ಶಂಕರ್ ಮತ್ತು ಎಂಟಿಬಿ ನಾಗರಾಜ್ ಅವರಿಗೆ ಸಚಿವ ಸ್ಥಾನ ನೀಡುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದಂತ ಅರ್ಜಿಯ ವಿಚಾರಣೆ ನಡೆಸಿದಂತ ಹೈಕೋರ್ಟ್ ವಿಭಾಗಿಯ ಪೀಠವು, ಹೆಚ್ ವಿಶ್ವನಾಥ್ ಸಚಿವರಾಗಲು ಅನರ್ಹರಾಗಿದ್ದಾರೆ. ಅನರ್ಹರಾಗಿ, ಸೋತು ನಾಮನಿರ್ದೇಶನಗೊಂಡಿದ್ದಾರೆ. ವಿಶ್ವನಾಥ್ ಅನರ್ಹತೆಯನ್ನು ಸಿಎಂ ಪರಿಗಣಿಸಬೇಕು. ಕಲಂ 164(1ಬಿ), 361 ಬಿ ಅಡಿ ವಿಶ್ವನಾಥ್ ಅನರ್ಹರು. ಹೀಗಾಗಿ 2021ರವರೆಗೆ ಸಚಿವರಾಗಲು ಅರ್ಹರಲ್ಲ ಎಂಬುದಾಗಿ ಮಹತ್ವದ ಆದೇಶ ನೀಡಿದೆ.
ಇನ್ನೂ ಆರ್.ಶಂಕರ್, ಎಂ.ಟಿ.ಬಿ ನಾಗರಾಜ್ ಅವರು ಚುನಾವಣೆಯಲ್ಲಿ ಆಯ್ಕೆಗೊಂಡು ಎಂ.ಎಲ್ ಸಿ ಆಗಿದ್ದಾರೆ. ಹೀಗಾಗಿ ಅವರಿಗೆ ಸಚಿವರಾಗಲು ಯಾವುದೇ ಅಡೆತಡೆಯಿಲ್ಲ. ಆದ್ರೇ ಹೆಚ್ ವಿಶ್ವನಾಥ್ ನಾಮ ನಿರ್ದೇಶನಗೊಂಡಿರೋದು. ಹೀಗಾಗಿ ಅವರಿಗೆ ಸಚಿವ ಸ್ಥಾನ ನೀಡೋದಕ್ಕೆ ಅನರ್ಹರಾಗಿದ್ದಾರೆ ಎಂಬುದಾಗಿ ಹೈಕೋರ್ಟ್ ವಿಭಾಗೀಯ ಪೀಠವು ಅಭಿಪ್ರಾಯ ಪಟ್ಟಿದೆ. ಈ ಮೂಲಕ ಹಳ್ಳಿಹಕ್ಕಿ ಹೆಚ್ ವಿಶ್ವನಾಥ್ ಗೆ ಬಿಗ್ ಶಾಕ್ ನೀಡಿದ್ದರೇ, ಆರ್ ಶಂಕರ್, ಎಂಟಿಬಿ ನಾಗರಾಜ್ ಗೆ ಬಿಗ್ ರಿಲೀಫ್ ನೀಡಿದೆ.
ಸಿದ್ದರಾಮಯ್ಯ ರಾಜೀನಾಮೆ ಕೊಡುವವರೆಗೂ ಗ್ಯಾರಂಟಿಯಿಲ್ಲ : ಶೋಭಾ ಕರಂದ್ಲಾಜೆ ಬೆಂಗಳೂರು: ಸಿದ್ದರಾಮಯ್ಯ ಹಳೆಯ ಹುಲಿ, ಯಾವಾಗ ಯಾವ ಆಟ ಆಡುತ್ತಾರೋ…
ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ ಎಬೋಲಾ ಪ್ರಕರಣದ ರಿಪೋರ್ಟ್ ನೆಗೆಟಿವ್ : ದಿನೇಶ್ ಗುಂಡೂರಾವ್ ಸ್ಪಷ್ಟನೆ ಬೆಂಗಳೂರು: ರಾಜ್ಯದಲ್ಲಿ ವರದಿಯಾಗಿದ್ದ ಶಂಕಿತ…
ಕಾಪು ಹಳೇ ಮಾರಿಯಮ್ಮ ದೇವಿಗೆ ಲಕ್ಷಪುಷ್ಪಾರ್ಚನೆ 135 ಕೆಜಿ ಕೆಂಪು ಕೇಪುಳ ಹೂ, 1,200ಕ್ಕೂ ಅಧಿಕ ಚೆಂಡು ಮಲ್ಲಿಗೆ ಸಮರ್ಪಣೆ…
ಭಾರತೀಯ ನೌಕಾಪಡೆಯಲ್ಲಿ ಸಬ್ ಲೆಫ್ಟಿನೆಂಟ್ ಆಗಿ ಮಂಗಳೂರಿನ ನಿಶೆಲ್ ಫ್ಲೋರಾ ಆಲ್ಮೇಡಾ ಆಯ್ಕೆ ಮಂಗಳೂರು: ನಗರದ ಕುಲಶೇಖರದ ಕೊಂಗೂರು ನಿವಾಸಿಗಳಾದ…
ಶಿರ್ವ: ಆತ್ಮಹತ್ಯೆಗೆ ಪ್ರಚೋದನೆ ; ಮೂವರ ವಿರುದ್ಧ ದೂರು ದಾಖಲು ಶಿರ್ವ: ಪತ್ನಿ, ಆಕೆಯ ಸಹೋದರಿ ಮತ್ತು ಪತ್ನಿಗೆ ಇನ್‌ಸ್ಟಾಗ್ರಾಮ್…
ಹಳೆಯಂಗಡಿ: ನಿಂತಿದ್ದ ಬಸ್ಸಿಗೆ ಟಿಪ್ಪರ್ ಢಿಕ್ಕಿ; ನಾಲ್ವರು ವಿದ್ಯಾರ್ಥಿಗಳಿಗೆ ಗಾಯ ಹಳೆಯಂಗಡಿ: ಕಿನ್ನಿಗೋಳಿಯಿಂದ ಮಂಗಳೂರು ಕಡೆಗೆ ಸಂಚರಿಸುತ್ತಿದ್ದ ಸರ್ವಿಸ್ ಬಸ್ಸಿಗೆ…