ಪಡುಬಿದ್ರಿ: ಸಾಂಪ್ರದಾಯಿಕ ನಾಡದೋಣಿ ಮೀನುಗಾರಿಕೆಗೆ ತೆರಳಿದ್ದ ಮೀನುಗಾರರೊಬ್ಬರು ಸಮುದ್ರದಲ್ಲಿ ಮುಳುಗಿ ಮೃತಪಟ್ಟ ಘಟನೆ ಹೆಜಮಾಡಿ ಅಳಿವೆ ಬಾಗಿಲಿನಲ್ಲಿ ನಡೆದಿದೆ.
ಹೆಜಮಾಡಿ ಕೋಡಿ ಮಾನಂಪಾಡಿಯ ಜಯಂತ ಶ್ರೀಯಾನ್ (45) ಮೃತಪಟ್ಟವರಾಗಿದ್ದು, ಇವರು ಇಂದು ಮುಂಜಾವ ಅಳಿವೆ ಬಾಗಿಲು( ನದಿ ಕಡಲು ಸೇರುವ ಸಂಗಮ ಸ್ಥಳ) ಸಮೀಪ ಮೀನುಗಾರಿಕೆಯಲ್ಲಿ ನಿರತರಾಗಿದ್ದರು. ಈ ವೇಳೆ ಏಕಾಏಕಿ ಮೇಲೆದ್ದ ಬೃಹತ್ ಅಲೆ ಮೀನುಗಾರನಿಗೆ ಅಪ್ಪಳಿಸಿದೆ. ಅಲೆಯ ಘಾತಕ ಪ್ರಹಾರದಿಂದಾಗಿ ಮೀನುಗಾರ ದೋಣಿಯಿಂದ ನೀರಿಗೆ ಬಿದ್ದಿದ್ದು, ಈಜಲೂ ಸಾಧ್ಯವಾಗದೆ ದಾರುಣವಾಗಿ ಮೃತಪಟ್ಟಿದ್ದಾರೆ.
ಜಯಂತ್ ಅವರಿಗೆ ಪತ್ನಿ ಹಾಗೂ 4 ಮಕ್ಕಳಿದ್ದಾರೆ. ಸ್ಥಳಕ್ಕೆ ಪಡುಬಿದ್ರಿ ಎಸ್ ಐ ದಿಲೀಪ್, ಹೆಜಮಾಡಿ ಗ್ರಾಪಂ ಅಧ್ಯಕ್ಷ ಪ್ರಾಣೇಶ್ ಹೆಜಮಾಡಿ, ಸದಸ್ಯ ಶರಣ್ ಕುಮಾರ್ ಮಟ್ಟು ಮತ್ತಿತರರು ಭೇಟಿ ನೀಡಿದರು. ಮೃತದೇಹವನ್ನು ಪಡುಬಿದ್ರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಾಗಿಸಲಾಗಿದೆ.
ಅರೆಂಜ್ ಅಲರ್ಟ್ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…