ಪಡುಬಿದ್ರಿ: ಗೂಡ್ಸ್ ವಾಹನ ಪಲ್ಟಿಯಾದ ಪರಿಣಾಮ ಅದರಲ್ಲಿದ್ದ ಕಾರ್ಮಿಕ ಮಹಿಳೆ ಸಾವನ್ನಪ್ಪಿದ ಘಟನೆ ಗುರುವಾರ (ಡಿ.11) ಮುಂಜಾನೆ ಹೆಜಮಾಡಿ ಟೋಲ್ ಗೇಟ್ ಬಳಿ ನಡೆದಿದೆ.
ಮೃತರನ್ನು ಜೀವನ ನಿರ್ವಹಣೆಗೆ ಪಡುಬಿದ್ರಿಯತ್ತ ಪಿಕಪ್ ಗೂಡ್ಸ್ ವಾಹನ ಹತ್ತಿ ಹೊರಟಿದ್ದ ಲಿಂಗಪ್ಪಯ್ಯ ಕಾಡು ನಿವಾಸಿ ಸಾವಿತ್ರಿ ಎಂದು ಗುರುತಿಸಲಾಗಿದೆ.
ಹೆಜಮಾಡಿ ಟೋಲ್ ಗೇಟ್ ಸಮೀಪ ವಾಹನ ಪಲ್ಟಿಯಾದಾಗ ಅದರಲ್ಲಿದ್ದ ಕಾಂಕ್ರೀಟ್ ಮಿಕ್ಸರ್ ಯಂತ್ರವು ನತದೃಷ್ಟೆ ಸಾವಿತ್ರಿ ಅವರನ್ನು ಯಮನಾಗಿ ಕಾಡಿತ್ತು. ಯಂತ್ರದೆಡೆಗೆ ಸಿಲುಕಿ ತೀವ್ರ ಗಾಯಗೊಂಡ ಅವರನ್ನು ಅಸ್ಪತ್ರೆಗೆ ಒಯ್ಯುವಾಗಲೇ ಸಾವನ್ನಪ್ಪಿದ್ದರು. ಗಾಯಗೊಂಡಿರುವ ಇತರ ಆರು ಮಂದಿಯನ್ನು ಚಿಕಿತ್ಸೆಗಾಗಿ ಅಸ್ಪತ್ರೆಗೆ ಒಯ್ಯಲಾಗಿದೆ.
ದಿನಂಪ್ರತಿ ಇದೇ ವಾಹನದಲ್ಲಿ ಕಾರ್ಮಿಕರನ್ನು ವಿವಿದೆಡೆಯ ಕಾಮಗಾರಿ ಸ್ಥಳಕ್ಕೆ ಮೂಲ್ಕಿಯ ಲಿಂಗಪ್ಪಯ್ಯ ಕಾಡಿನಿಂದ ಒಟ್ಟು ಸೇರಿಸಿ ಕರೆದೊಯ್ಯಲಾಗುತ್ತಿತ್ತು ಎಂದು ತಿಳಿದುಬಂದಿದೆ.
ಪಡುಬಿದ್ರಿ ಪೊಲೀಸರು ಸ್ಥಳಕ್ಕೆ ಭೇಟಿಯಿತ್ತು ಪರಿಶೀಲಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…