ಹೆಜಮಾಡಿ : ಪಡುಬಿದ್ರಿ ಸಮೀಪದ ಹೆಜಮಾಡಿ ಟೋಲ್ ಗೇಟಿನಲ್ಲಿ ಸ್ಥಳೀಯ ವಾಹನಗಳಿಗೆ ವಿನಾಯತಿ ನೀಡುವಂತೆ ಹೆಜಮಾಡಿ ಗ್ರಾಮ ಪಂಚಾಯತ್ ವತಿಯಿಂದ ನವಯುಗ ಕಂಪನಿಗೆ ಮನವಿ ಸಲ್ಲಿಸಲಾಯಿತು.
ಹೆಜಮಾಡಿ ಗ್ರಾಮದಿಂದ ಕೇವಲ ಅರ್ಧ ಕಿಲೋ ಮೀಟರ್ ದೂರದಲ್ಲಿ ಮೂಲ್ಕಿ ಗ್ರಾಮ ಇದೆ. ಮೂಲ್ಕಿಯಲ್ಲಿ ವ್ಯಾಪಾರ ವಹಿವಾಟು ಮಾಡುವವರಿಗೆ ಟೋಲ್ ಗೇಟಿನಿಂದ ಅತ್ಯಂತ ತೊಂದರೆ ಉಂಟಾಗುತ್ತಿದೆ. ಹೆಜಮಾಡಿ ಪರಿಸರದ ವಾಹನಗಳಿಗೆ ಟೋಲ್ ಗೇಟಿನ ಸಿಬ್ಬಂದಿ ದಿನನಿತ್ಯ ಕಿರುಕುಳ ನೀಡುತ್ತಿದ್ದಾರೆ.
ಇದನ್ನೂ ಓದಿ :ಉಡುಪಿ: ಅನರ್ಹರ ಪಡಿತರ ಚೀಟಿ ಹಿಂದಿರುಗಿಸಲು ಏ. 15 ಕೊನೆಯ ದಿನ : ಜಿಲ್ಲಾಧಿಕಾರಿ ಜಿ. ಜಗದೀಶ್ -Vishwanews24
ಶಾಲಾ ಬಸ್ಸ್ಗಳಿಗೂ ಟೋಲ್ ವಿನಾಯಿತಿ ಇಲ್ಲದ್ದರಿಂದ ಪಾಲಕರು ಹೆಚ್ಚಿನ ಹಣವನ್ನು ಶಾಲೆಗೆ ಭರಿಸಬೇಕಾಗಿದೆ. ಟೋಲ್‌ನಲ್ಲಿ ವಿನಾಯತಿ ನೀಡುವಂತೆ ಈಗಾಗಲೇ ಟೋಲ್ ಗೇಟಿನ ಅಧಿಕಾರಿಗಳಿಗೆ ಮನವಿ ಮಾಡಿದ್ದರೂ ಅವರು ಸ್ಪಂದಿಸುತ್ತಿಲ್ಲ ಎಂದು ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರಾಣೇಶ್ ಹೆಜ್ಮಾಡಿ ಮಾಧ್ಯಮಕ್ಕೆ ತಿಳಿಸಿದ್ದಾರೆ ಹೇಳಿಕೊಂಡಿದ್ದಾರೆ.
ಹೆಜಮಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಪವಿತ್ರ ಗಿರೀಶ್, ಹೆಜಮಾಡಿ ಗ್ರಾಮ ಪಂಚಾಯತ್‌ನ ಎಲ್ಲಾ ಸದಸ್ಯರು ಟೋಲ್ ಗೇಟಿಗೆ ತೆರಳಿ ಅಲ್ಲಿಯ ಅಧಿಕಾರಿ ಶಿವಪ್ರ‍್ರಸಾದ್ ರೈಯವರಿಗೆ ಮನವಿ ಸಲ್ಲಿಸಿದರು. ಶಿವಪ್ರ‍್ರಸಾದ್ ರೈಯವರು ಮನವಿಗೆ ಸ್ಪಂಧಿಸಿ, ಮೇಲಾಧಿಕಾರಿಯವರಿಗೆ ಈ ಬಗ್ಗೆ ತಿಳಿಹೇಳಿ ಶೀಘ್ರವಾಗಿ ಸ್ಪಂಧಿಸುವ ಭರವಸೆ ನೀಡಿದ್ದಾರೆ.
ಇದನ್ನೂ ಓದಿ :ಉಡುಪಿ :ಕನ್ನಡ ಬಳಕೆ ಕಡ್ಡಾಯ : ಜಿಲ್ಲಾಧಿಕಾರಿ ಜಿ.ಜಗದೀಶ್ -Vishwanews24
ಕಾಂಗ್ರೆಸ್ನಿಂದ ಆಹ್ವಾನ ಬಂದಿರುವುದು ನಿಜ .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…
ಉಡುಪಿ: ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…
ಉಡುಪಿ : ಒಳಚರಂಡಿ ಕಾಮಗಾರಿ; ಸಂಚಾರ ನಿಷೇಧ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ಶಿರಿಬೀಡು ವಾರ್ಡಿನ ಶಾಂಭವಿ ಹೋಟೇಲ್ ಎದುರು ರಸ್ತೆಯಲ್ಲಿ…
ಉಡುಪಿ : ಸರಳ ವಿವಾಹಕ್ಕೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ ಉಡುಪಿ, : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿನ ಆರ್ಥಿಕವಾಗಿ…
ಅ. 18ರಂದು ರಕ್ಷಣಾಪುರ ಜವನೆರ್ ಕಾಪು ವತಿಯಿಂದ ನಾಲ್ಕನೇ ವರ್ಷದ ‘ಕಾಪು ಪಿಲಿ ಪರ್ಬ’ ವಿನಯ್ ಕುಮಾರ್ ಸೊರಕೆ ಮಾರ್ಗದರ್ಶನದಲ್ಲಿ…
ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…