Featured

ಹೆಜಮಾಡಿ ಟೋಲ್ ಗೇಟ್ ನಲ್ಲಿ ಹಗಲು ದರೋಡೆ : ಬಸ್ಸು ಮಾಲಕರಿಂದ ಸಾಂಕೇತಿಕ ಪ್ರತಿಭಟನೆ – vishwanews24

ಹೆಜಮಾಡಿ ಟೋಲ್ ಗೇಟ್ ವಿರುದ್ಧ ಆಕ್ರೋಶ: ಬಸ್ಸು ಮಾಲಕರಿಂದ ಸಾಂಕೇತಿಕ ಪ್ರತಿಭಟನೆ

ಪಡುಬಿದ್ರಿ:  ಹೆಜಮಾಡಿ ಟೋಲ್ ಗೇಟ್ ನಲ್ಲಿ ಬಸ್ಸುಗಳಿಂದ ಅವೈಜ್ಞಾನಿಕವಾಗಿ ಟೋಲ್ ಕಡಿತ ಮಾಡಲಾಗುತ್ತಿದೆ. ಎರಡು ದಿನಗಳ ಒಳಗೆ ಈ ಸಮಸ್ಯೆಗೆ ಪರಿಹಾರ ಕಲ್ಪಿಸದಿದ್ದಲ್ಲಿ ತೀವ್ರವಾಗಿ ಪ್ರತಿಭಟಿಸಿ ಶಕ್ತಿ ಪ್ರದರ್ಶನ ಮಾಡುವುದಾಗಿ ಬಸ್ಸು ಮಾಲಕರು ಎಚ್ಚರಿಸಿದ್ದಾರೆ.

ಹೆಜಮಾಡಿ ಟೋಲ್ ಗೇಟ್ ನಲ್ಲಿ ಹಗಲು ದರೋಡೆ ಮಾಡಲಾಗುತ್ತಿದೆ ಎಂದು ಆರೋಪಿಸಿ ಕೆನರಾ ಬಸ್ಸು ಮಾಲಕರ ಸಂಘ ಹಾಗೂ ಕರಾವಳಿ ಬಸ್ಸು ಮಾಲಕರ ಸಂಘದ ಪದಾಧಿಕಾರಿಗಳು ಬುಧವಾರ ಸಾಂಕೇತಿಕವಾಗಿ ಪ್ರತಿಭಟಿಸಿ ಟೋಲ್ ಅಧಿಕಾರಿಗಳನ್ನು ಎಚ್ಚರಿಸಿದ್ದಾರೆ.

ತಮ್ಮ ಮಿನಿ ಬಸ್ಸುಗಳಿಗೆ ಘನ ವಾಹನಗಳ ಟೋಲನ್ನು ಕಡಿತಗೊಳಿಸಲಾಗುತ್ತಿದ್ದು, ಅವೈಜ್ಞಾನಿಕವಾಗಿರುವ ಈ ಕ್ರಮವನ್ನು ಕೂಡಲೇ ನಿಲ್ಲಿಸಬೇಕು. ಇಲ್ಲವಾದಲ್ಲಿ ಬಸ್ಸುಗಳನ್ನೆಲ್ಲಾ ಟೋಲ್ ಗೆ ಅಡ್ಡವಾಗಿರಿಸಿ ತೀವ್ರತರ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದ್ದಾರೆ.

ಫಾಸ್ಟ್ಟ್ಯಾಗ್ ಮೊತ್ತದ ಹೊರತಾಗಿಯೂ ಮತ್ತೆ ತಮಗೆ ಬರೆ ಬೀಳುತ್ತಿದೆ. ದೇಶದ ಎಲ್ಲೂ ಇಲ್ಲದ ಪರಿಸ್ಥಿತಿ ಇಲ್ಲಿದೆ. ನಮಗೆ ಬೇಡಿಕೆಗಳಿಗೆ ಸ್ಪಂದಿಸದಿದ್ದಲ್ಲಿ ಟೋಲ್ ಗೇಟ್ ಬಂದ್ ಮಾಡಿ ಪ್ರತಿಭಟನೆ ಮಾಡಲಿರುವುದಾಗಿ ದಿಲ್ ರಾಜ್ ಆಳ್ವ ಹೇಳಿದರು.

ಕೆನರಾ ಬಸ್ಸು ಮಾಲಕರ ಸಂಘದ ಅಧ್ಯಕ್ಷ ರಾಜವರ್ಮ ಬಲ್ಲಾಳ್ ಮಾತನಾಡಿ. ಹೆಜಮಾಡಿ, ಸಾಸ್ತಾನ, ಶಿರೂರುಗಳಲ್ಲಿ ಪ್ರತಿ ಬಸ್ ಗಳಿಂದ ದಿನಕ್ಕೆ 700 ರೂ.ನಷ್ಟು ಮೊತ್ತ ಟೋಲ್ ಹೆಸರಲ್ಲಿ ಸುಲಿಗೆಯಾಗುತ್ತಿದೆ ಎಂದು ದೂರಿದರು.

ಕೆನರಾ ಬಸ್ ಮಾಲಕರ ಸಂಘದ ಅಧ್ಯಕ್ಷ ರಾಘವೇಂದ್ರ ಭಟ್ ಮಾತನಾಡಿ, ಟೋಲ್ ಹೆಸರಿನಲ್ಲಿ ಹಗಲು ದರೋಡೆಯಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಸ್ ಮಾಲಕರಾದ ಜೀವಂಧರ್ ಬಲ್ಲಾಳ್, ರಝಾಕ್ ಮೊದಲಾದವರು ಭಾಗವಹಿಸಿದ್ದರು.

Vishwa News 24

Recent Posts

ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ – vishwanews24

ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ ಉಡುಪಿ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಯ…

7 hours ago

ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ – vishwanews24

ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…

12 hours ago

ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ  – vishwanews24

ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ  ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…

12 hours ago

ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ – vishwanews24

ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ ನವದೆಹಲಿ: ಪೆಟ್ರೋಲ್‌, ಡೀಸೆಲ್‌ ಬಳಿಕ…

12 hours ago

ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು – vishwanews24

ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…

13 hours ago

ಗೋ ರಕ್ಷಣೆಯ ಹೆಸರಿನಲ್ಲಿ ನಡೆಯುತ್ತಿರುವ ದೌರ್ಜನ್ಯಗಳ ವಿರುದ್ಧ ಮಂಗಳೂರಿನಲ್ಲಿ SDPI ಪ್ರತಿಭಟನೆ – vishwanews24

ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…

13 hours ago