ಕಾಪು : ಹೆಜಮಾಡಿ ನಾಗರಿಕರ ಹಿತರಕ್ಷಣಾ ಸಮಿತಿಯ ನೇತ್ರತ್ವದಲ್ಲಿ ಪಡುಬಿದ್ರಿ, ಹೆಜಮಾಡಿ,ಮುಲ್ಕಿ ಭಾಗದ ಸ್ಥಳೀಯರಿಗೆ ಟೋಲ್ ವಿನಾಯಿತಿ ಕೋರಿ ಹೆಜಮಾಡಿ ಟೋಲ್ ಗೇಟ್ ಬಳಿ ಬುಧವಾರ ಪ್ರತಿಭಟನೆ ನಡೆಯಿತು.
ಫಾಸ್ಟ್ ಟ್ಯಾಗ್ ಕಡ್ಡಾಯಗೊಳಿಸಿರುವ ಹಿನ್ನಲೆಯಲ್ಲಿ ಹೆಜಮಾಡಿ ಟೋಲ್ ಗೇಟ್ ನಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದ್ದು, ಸ್ಥಳೀಯ ವಾಹನಗಳಿಗೆ ಟೋಲ್ ವಿನಾಯಿತಿ ನೀಡಬೇಕೆಂದು ಒತ್ತಾಯಿಸಿ ಮಾಜಿ ಸಚಿವ ವಿನಯಕುಮಾರ್ ಸೊರಕೆ,ಹೆಜಮಾಡಿ ನಾಗರಿಕ ಹೋರಾಟ ಸಮಿತಿ ಅಧ್ಯಕ್ಷ ಶೇಖರ್ ಹೆಜಮಾಡಿ,ಮುಲ್ಕಿ ನಾಗರಿಕರ ಅಭಿವೃದ್ಧಿ ಸಮಿತಿ ಅಧ್ಯಕ್ಷ ಹರೀಶ್ ಎನ್ ಪುತ್ರನ್,ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ಶೆಟ್ಟಿ ಸೇರಿದಂತೆ ಅನೇಕ ಮುಖಂಡರು ಪ್ರತಿಭಟನಾ ಸಭೆಯಲ್ಲಿ ಮಾತನಾಡಿದರು.
ಈ ಸಂದರ್ಭದಲ್ಲಿ ಮುಲ್ಕಿ,ಹೆಜಮಾಡಿ, ಪಡುಬಿದ್ರಿ ಟೋಲ್ ಹೋರಾಟ ಸಮಿತಿಯಿಂದ ಟೋಲ್ ವಿನಾಯಿತಿ ಬಗ್ಗೆ ಎನ್.ಎಚ್ ಪ್ರತಿನಿಧಿ ಮಲ್ಲಿಕಾರ್ಜುನ ಇವರಿಗೆ ಮನವಿ ಸಲ್ಲಿಸಲಾಯಿತು.ರೋಲ್ಫಿ ಡಿಕೋಸ್ಟ,ಸುಭಾಸ್ ಬಿ ಶೆಟ್ಟಿ, ಸತೀಶ್ ಅಂಚನ್ ,ಮಧು ಆಚಾರ್ಯ, ಹಾಜಿ ಶೇಖಬ್ಬ ಕೋಟೆ, ನವೀನ್ ಚಂದ್ರ ಜೆ ಶೆಟ್ಟಿ, ಸನಾ ಇಬ್ರಾಹಿಂ,ಸುದೀರ್ ಕರ್ಕೇರ, ಪಾಂಡುರಂಗ ಕರ್ಕೇರ, ಸುಧಾಕರ್ ಎರ್ಮಾಳು, ನವೀನ್ ಎನ್.ಶೆಟ್ಟಿ,ಪ್ರಾಣೇಶ್ ಹೆಜಮಾಡಿ,ರವಿ ಶೆಟ್ಟಿ, ಇಕ್ಬಾಲ್ ಮುಲ್ಕಿ, ಟೋಲ್ ವ್ಯವಸ್ಥಾಪಕ ಶಿವಪ್ರಸಾದ್ ಮೊದಲಾದವರು ಉಪಸ್ಥಿತರಿದ್ದರು.
ಕಾರ್ಕಳ: ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಾರ್ಕಳ: ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…
ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…
ಕಾಂಗ್ರೆಸ್ನಿಂದ ಆಹ್ವಾನ ಬಂದಿರುವುದು ನಿಜ .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…
ಉಡುಪಿ: ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…