ಉಡುಪಿ, : ತಾಯಿ ಇಲ್ಲದ ಮಕ್ಕಳನ್ನು ಮಲ ತಂದೆಯೊಬ್ಬರು ಬಿಟ್ಟು ಪರಾರಿಯಾದ ಘಟನೆ ಹೆಜಮಾಡಿಯಲ್ಲಿ ನಡೆದಿದೆ. ಬಿಜಾಪುರ ಮೂಲದ ರಾಜು ಎಂಬಾತ ಎದೇ ಮೂಲದ ಮಹಿಳೆಯೊಬ್ಬರನ್ನು ಮದುವೆಯಾಗಿದ್ದರು, ಮಹಿಳೆಯು ಅನಾರೋಗ್ಯದಿಂದ ಸಾವನ್ನಪ್ಪಿದ್ದರು.
ಆಕೆಯ ಮೊದಲ ಗಂಡ ಹೆಜಮಾಡಿ ಮನೆಯೊಂದರಲ್ಲಿ ಇಬ್ಬರು ಮಕ್ಕಳೊಂದಿಗೆ ವಾಸವಾಗಿದ್ದರು. 9ನೇ ತರಗತಿಯಲ್ಲಿ ವಿಧ್ಯಾಭ್ಯಾಸ ಮಾಡುವ ಈ ಇಬ್ಬರು ಮಕ್ಕಳನ್ನು ಅದೇ ಮನೆಯಲ್ಲಿ ಹತ್ತು ದಿನಗಳ ಹಿಂದೆ ಮಲತಂದೆ ಬಿಟ್ಟು ಪರಾರಿಯಾಗಿದ್ದಾರೆ. ಅನಾಥರಾಗಿದ್ದ ಮಕ್ಕಳನ್ನು ಕಂಡ ಹೆಜಮಾಡಿ ಪಂಚಾಯತ್ ಉಪಾಧ್ಯಕ್ಷ ಸುಧಾಕರ ಕರ್ಕೇರ ಅವರು ಮಾನವೀಯ ನೆಲೆಯಲ್ಲಿ ಮಕ್ಕಳಿಗೆ ಊಟ ಮತ್ತು ವಸತಿ ವ್ಯವಸ್ಥೆಯನ್ನು ನೀಡಿದ್ದರು.
ಬಳಿಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಉಡುಪಿಗೆ ಮಾಹಿತಿಯನ್ನು ನೀಡಿದ್ದಾರೆ. ಈ ಮಾಹಿತಿ ಆಧರಿಸಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಪ್ರಭಾಕರ್ ಆಚಾರ್ಯ,ಕಾನೂನು ಪರಿವೀಕ್ಷಣಾಧಿಕಾರಿ ,ಸಮಾಜ ಕಾರ್ಯಕರ್ತೆ ಗ್ಲೀಶಾ ಮೊಂತೆರೋ ಪಂಚಾಯತ್ ಉಪಾಧ್ಯಕ್ಷರ ಮನೆಗೆ ಭೇಟಿ ನೀಡಿ ಮಾಹಿತಿಯನ್ನು ಪಡೆದು ಮಕ್ಕಳನ್ನು ಮಕ್ಕಳ ಪಾಲನೆ ಮತ್ತು ಪೋಷಣೆ ಕೇಂದ್ರಕ್ಕೆ ಮಾಹಿತಿ ನೀಡಲಾಯಿತು. ಅವರ ಆದೇಶದಂತೆ ಬಾಲಕನನ್ನು ಸಿ.ಎಸ್.ಐ ಬಾಯ್ಸ್ ಹೋಮ್ ಉಡುಪಿ ಹಾಗೂ ಬಾಲಕಿಯನ್ನುನಿಟ್ಟೂರಿನ ಸರ್ಕಾರಿ ಬಾಲಕಿಯರ ಬಾಲಮಂದಿರದಲ್ಲಿ ತಾತ್ಕಾಲಿಕ ಪುನರ್ವಸತಿ ಕಲ್ಪಿಸಲಾಗಿದೆ.
ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.
ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್
8088827292
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…