Featured

ಹೆಜಮಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಇದರ ಸಮಗ್ರ ಜೀಣೋದ್ಧಾರದ ವಿಜ್ಞಾಪನಾ ಪತ್ರ ಬಿಡುಗಡೆ.

ಹೆಜಮಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಇದರ ಸಮಗ್ರ ಜೀಣೋದ್ಧಾರದ ವಿಜ್ಞಾಪನಾ ಪತ್ರ ಬಿಡುಗಡೆ.

ಕಾಪು: ಇತಿಹಾಸ ಪ್ರಸಿದ್ಧ ದೇವಸ್ಥಾನಗಳಲ್ಲಿ ಒಂದಾದ ಹೆಜಮಾಡಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸುಮಾರು ಹತ್ತು ಕೋಟಿ ವೆಚ್ಚದಲ್ಲಿ ಸಮಗ್ರ ಜೀಣೋದ್ಧಾರದ ಅಂಗವಾಗಿ ಆದಿತ್ಯವಾರ ದೇಗುಲದ ವಠಾರದಲ್ಲಿ ವಿಜ್ಞಾಪನಾ ಪತ್ರ ಬಿಡುಗಡೆ ಸಮಾರಂಭವು ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಮತ್ತು ವಿಜ್ಞಾಪನಾ ಪತ್ರ ಬಿಡುಗಡೆಯನ್ನು ಉದ್ಯಮಿ ೨೦೧೯ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ವಿಜೇತ ಶ್ರೀ ಕೆ ಪ್ರಕಾಶ್ ಶೆಟ್ಟಿ ನೆರವೇರಿಸಿದರು.ತದನಂತರ ಮಾತಾಡಿ ಈ ಐತಿಹಾಸಿಕ ದೇಗುಲ ನಿರ್ಮಾಣ ಕಾರ್ಯದಲ್ಲಿ ನನ್ನನ್ನು ಪಾಲುದಾರರನ್ನಾಗಿಸಿದ ದೇವರಿಗೆ ಹಾಗೂ ಕಮಿಟಿ ಸದಸ್ಯರಿಗೆ ವಂದನೆಗಳು, ತುಳುನಾಡಿನ ದೇವಸ್ಥಾನಗಳು ಜೀರ್ಣೋದ್ದಾರಗೊಂಡು ಮುಂದಿನ ಪೀಳಿಗೆಗೆ ಅದು ಕೊಡುಗೆಯಾಗಬೇಕು ಎಂದರು.ನೂತನ ದೇಗುಲದ ನೀಲನಕಾಶೆಯನ್ನು ಕಾಪು ಕ್ಷೇತ್ರದ ಶಾಸಕ ಲಾಲಾಜಿ ಆರ್ ಮೆಂಡನ್ ನೆರೆವೇರಿಸಿದರು.

ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ ಮಾತಾಡಿ” ಹೆಜಮಾಡಿ ಉಡುಪಿ ಜಿಲ್ಲೆಯ ಹೆಬ್ಬಾಗಿಲು ಇಲ್ಲಿನ ದೇಗುಲ ನಿರ್ಮಾಣ ಆಗುವಂತಹ ಕಾರ್ಯ ಅತ್ಯಂತ ಸಂತಸ ಹಾಗೂ ಖುಷಿಯ ವಿಚಾರ, ಧಾರ್ಮಿಕ ಕ್ಷೇತ್ರಗಳು ಅಭಿವೃದ್ದಿ ಹೊಂದಿದಾಗ ಮಾನವರು ಕೂಡ ಅಭಿವೃದ್ದಿ ಪಥದಲ್ಲಿ ಸಾಗಲು ಸಾಧ್ಯ ಎಂದರು.

ಕಾರ್ಯಕ್ರದಲ್ಲಿ ಉದ್ಯಮಿ ಪ್ರಕಾಶ್ ಶೆಟ್ಟಿಯವರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು ಮತ್ತು ಎಡಪದವು ರಾಧಕೃಷ್ಣ ತಂತ್ರಿ ಆರ್ಶೀವಚನ ನೀಡಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೀಣೋದ್ದಾರ ಸಮಿತಿ ಅಧ್ಯಕ್ಷರು ಜಯಂತ್ ಶೆಟ್ಟಿ ವಹಿಸಿದ್ದರು.

ಆಡಳಿತ ಮೊಕ್ತೆಸರರು ಶ್ರೀ ದಯಾನಂದ ಹೆಜಮಾಡಿ , ಡಾ| ಎಚ್.ಟಿ ಮನೋರಮ ರಾವ್,ಸಂತೋಷ್ ಶೆಟ್ಟಿ ಪೂಣೆ,ವಾಸುದೇವ ಆರ್ ಕೋಟ್ಯಾನ್,ಸುಮನ್ ತಲವಾರ್ ಹೆಜಮಾಡಿ,ಶಶಿಕಾಂತ್ ಪಡುಬಿದ್ರಿ,ನೀತಾ ಗುರುರಾಜ್,ರೇಣುಕಾ ಪುತ್ರನ್,ವಿಶಾಲಕ್ಷಿ ಪುತ್ರನ್,ಪುರುಷೋತ್ತಮ ಗುರಿಕಾರ,ರತ್ನಾಕರ ಶೆಟ್ಟಿ,ಕೊಂಬೆಟ್ಟು ರಘುಪತಿ ರಾವ್,ಶಂಕರ್ ಶೆಟ್ಟಿ ,ಗೀತಾಂಜಲಿ ಸುವರ್ಣ,ಪುಷ್ಪರಾಜ್ ಎಸ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.ಸುಧಾಕರ ಕರ್ಕೇರ ಸ್ವಾಗತಿಸಿ, ಅರ್ಪಿತಾ ಪ್ರಶಾಂತ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ ,ಓಂದಾಸ್ ಹೆಜಮಾಡಿ ವಂದಿಸಿದರು.

ವರದಿ: ಪುರುಷೋತ್ತಮ ಸಾಲಿಯಾನ್,ವಿಶ್ವನ್ಯೂಸ್೨೪

Vishwa News 24

Recent Posts

ಕುಂದಾಪುರ: ಹೋಂಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ – vishwanews24

ಕುಂದಾಪುರ: ಹೋಂ ಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…

2 hours ago

ಉಚ್ಚಿಲ : ಕರಾವಳಿ ಭಾಗವಿಲ್ಲದೇ ರಾಜ್ಯಕ್ಕೆ ಹೆಚ್ಚಿನ ಬೆಲೆಯೇ ಇರುವುದಿಲ್ಲ :  ಮುಖ್ಯಮಂತ್ರಿ ಡಿ.ಕೆ.ಶಿ – vishwanews24

ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ  :…

7 hours ago

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ ; ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು – vishwanews24

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ  : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…

7 hours ago

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ – vishwanews24

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ    ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…

7 hours ago

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

1 day ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

1 day ago