ಕಾಂಗ್ರೆಸ್ ಪಕ್ಷದ ತೀವ್ರ ವಿರೋಧದ ನಡುವೆಯೂ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರು ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯ ಕಚೇರಿ ಇರುವ ನಾಗ್ಪುರಕ್ಕೆ ಭೇಟಿ ನೀಡಿದ್ದಾರೆ. ಪ್ರತಿ ವರ್ಷ ನಡೆಯುವ ಸಂಘ ಶಿಕ್ಷಾ ವರ್ಗಕ್ಕೆ ಆರ್ ಎಸ್ ಎಸ್ ಗಣ್ಯ ನಾಯಕರನ್ನು ಆಹ್ವಾನಿಸುತ್ತದೆ. ಈ ಬಾರಿ ಆರ್ ಎಸ್ ಎಸ್ ಮಾಜಿ ರಾಷ್ಟ್ರಪತಿಗಳಾದ ಪ್ರಣವ್ ಮುಖರ್ಜಿ ಅವರನ್ನು ಆಹ್ವಾನಿಸಿತ್ತು. ಕಾಂಗ್ರೆಸ್ ವಲಯದಲ್ಲಿ ಈ ಸುದ್ದಿ ತೀವ್ರ ಸಂಚಲನವನ್ನು ಸೃಷ್ಟಿಸಿತ್ತು. ಪ್ರಣಬ್ ಮುಖರ್ಜಿಯವರು ಭಾಗವಹಿಸಿದಂತೆ ಭಾರಿ ಒತ್ತಡ ಹೇರುವ ತಂತ್ರವನ್ನು ಮಾಡಿತ್ತು. ಆದರೆ ಪ್ರಣಬ್ ಮುಖರ್ಜಿ ಅವರು ತಾನು ಭಾಗವಹಿಸಿಯೇ ತೀರುವುದಾಗಿ ಘೋಷಿಸಿದ್ದರು.
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶಿಕ್ಷಾ ವರ್ಗವನ್ನು ಉದ್ದೇಶಿಸಿ ಭಾಷಣ ಮಾಡುವ ಮುನ್ನ ಆರ್ ಎಸ್ ಎಸ್ ನ ಸ್ಥಾಪಕರಾದ ಹೆಡಗೆವಾರ್ ಅವರ ಜನ್ಮಸ್ಥಳಕ್ಕೆ ಪ್ರಣಬ್ ಮುಖರ್ಜಿಯವರು ಭೇಟಿ ನೀಡಿದ್ದರು. ಹೆಡಗೆವಾರ್ ಅವರ ಜನ್ಮ ಸ್ಮಾರಕದಲ್ಲಿ ಸಂದರ್ಶಕರ ಪುಸ್ತಕದಲ್ಲಿ ಪ್ರಣವ್ ಮುಖರ್ಜಿ ಅವರು ಹೆಡಗೆವಾರ್ ಕುರಿತು ಅದ್ಭುತವಾದ ಸಂದೇಶವೊಂದನ್ನು ಬರೆದಿದ್ದಾರೆ. ‘ನಾನು ಇಂದು ಇಲ್ಲಿ ಭಾರತ ಮಾತೆಯ ಹೆಮ್ಮೆಯ ಪುತ್ರನೋರ್ವನಿಗೆ ನಮನ ಸಲ್ಲಿಸಲು ಬಂದಿದ್ದೇನೆ’ ಎಂಬ ಸಂದೇಶವನ್ನು ಸಂದರ್ಶಕರ ಡೈರಿಯಲ್ಲಿ ಪ್ರಣವ್ ಮುಖರ್ಜಿಯವರು ದಾಖಲಿಸಿದ್ದಾರೆ. ಆರ್.ಎಸ್.ಎಸ್. ಸ್ಥಾಪಕರನ್ನು ‘ಭಾರತ ಮಾತೆಯ ಹೆಮ್ಮೆಯ ಪುತ್ರ’ ಎಂದು ಪ್ರಣಬ್ ಮುಖರ್ಜಿ ಯವರು ಬಣ್ಣಿಸಿದ್ದಾರೆ.
ನಾಗಪುರಕ್ಕೆ ಹೋಗಿ ಅಲ್ಲಿಯೇ ಎಲ್ಲ ಪ್ರಶ್ನೆಗಳಿಗೂ ಉತ್ತರಿಸುತ್ತೇನೆ ಎಂದಿದ್ದರು ಪ್ರಣಬ್ ಮುಖರ್ಜಿ. ಪ್ರಣಬ್ ಮುಖರ್ಜಿ ಅವರು ಈಗ ಸಂದರ್ಶಕರ ಡೈರಿಯಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸ್ಥಾಪಕರಾದ ಹೆಡಗೇವಾರ್ ರನ್ನು ಹೊಗಳುವ ಮೂಲಕ ವಿರೋಧಿಗಳ ಬಾಯಿಯನ್ನು ಈಗಾಗಲೇ ಮುಚ್ಚಿಸಿದ್ದಾರೆ. ಇನ್ನು ಇಂದು ಸಂಜೆ ಆರ್ ಎಸ್ ಎಸ್ ಸಂಘ ಶಿಕ್ಷಾ ವರ್ಗದಲ್ಲಿ ಆರ್ ಎಸ್ ಎಸ್ ಸ್ವಯಂ ಸೇವಕರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಅಲ್ಲಿ ಇನ್ನು ಯಾವ ಯಾವ ವಿಷಯಗಳನ್ನು ಹಂಚಿಕೊಳ್ಳಲಿದ್ದಾರೆ ಎಂಬುದು ತೀವ್ರ ಕುತೂಹಲ ಮೂಡಿಸಿದೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…