desha

ಹೆಡಗೇವಾರ್ ಜನ್ಮ ಸ್ಥಳಕ್ಕೆ ಭೇಟಿ ನೀಡಿದ ಮಾಜಿ ರಾಷ್ಟ್ರಪತಿ, ಡೈರಿಯಲ್ಲಿ ಅದ್ಭುತವಾದ ಸಂದೇಶ ಬರೆದ ಪ್ರಣಬ್ ಮುಖರ್ಜಿ..

ಕಾಂಗ್ರೆಸ್ ಪಕ್ಷದ ತೀವ್ರ ವಿರೋಧದ ನಡುವೆಯೂ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರು ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯ ಕಚೇರಿ ಇರುವ ನಾಗ್ಪುರಕ್ಕೆ ಭೇಟಿ ನೀಡಿದ್ದಾರೆ. ಪ್ರತಿ ವರ್ಷ ನಡೆಯುವ ಸಂಘ ಶಿಕ್ಷಾ ವರ್ಗಕ್ಕೆ ಆರ್ ಎಸ್ ಎಸ್ ಗಣ್ಯ ನಾಯಕರನ್ನು ಆಹ್ವಾನಿಸುತ್ತದೆ. ಈ ಬಾರಿ ಆರ್ ಎಸ್ ಎಸ್ ಮಾಜಿ ರಾಷ್ಟ್ರಪತಿಗಳಾದ ಪ್ರಣವ್ ಮುಖರ್ಜಿ ಅವರನ್ನು ಆಹ್ವಾನಿಸಿತ್ತು. ಕಾಂಗ್ರೆಸ್ ವಲಯದಲ್ಲಿ ಈ ಸುದ್ದಿ ತೀವ್ರ ಸಂಚಲನವನ್ನು ಸೃಷ್ಟಿಸಿತ್ತು. ಪ್ರಣಬ್ ಮುಖರ್ಜಿಯವರು ಭಾಗವಹಿಸಿದಂತೆ ಭಾರಿ ಒತ್ತಡ ಹೇರುವ ತಂತ್ರವನ್ನು ಮಾಡಿತ್ತು. ಆದರೆ ಪ್ರಣಬ್ ಮುಖರ್ಜಿ ಅವರು ತಾನು ಭಾಗವಹಿಸಿಯೇ ತೀರುವುದಾಗಿ ಘೋಷಿಸಿದ್ದರು.

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಶಿಕ್ಷಾ ವರ್ಗವನ್ನು ಉದ್ದೇಶಿಸಿ ಭಾಷಣ ಮಾಡುವ ಮುನ್ನ ಆರ್ ಎಸ್ ಎಸ್‌ ನ ಸ್ಥಾಪಕರಾದ ಹೆಡಗೆವಾರ್ ಅವರ ಜನ್ಮಸ್ಥಳಕ್ಕೆ ಪ್ರಣಬ್ ಮುಖರ್ಜಿಯವರು ಭೇಟಿ ನೀಡಿದ್ದರು. ಹೆಡಗೆವಾರ್ ಅವರ ಜನ್ಮ ಸ್ಮಾರಕದಲ್ಲಿ ಸಂದರ್ಶಕರ ಪುಸ್ತಕದಲ್ಲಿ ಪ್ರಣವ್ ಮುಖರ್ಜಿ ಅವರು ಹೆಡಗೆವಾರ್ ಕುರಿತು ಅದ್ಭುತವಾದ ಸಂದೇಶವೊಂದನ್ನು ಬರೆದಿದ್ದಾರೆ. ‘ನಾನು ಇಂದು ಇಲ್ಲಿ ಭಾರತ ಮಾತೆಯ ಹೆಮ್ಮೆಯ ಪುತ್ರನೋರ್ವನಿಗೆ ನಮನ ಸಲ್ಲಿಸಲು ಬಂದಿದ್ದೇನೆ’ ಎಂಬ ಸಂದೇಶವನ್ನು ಸಂದರ್ಶಕರ ಡೈರಿಯಲ್ಲಿ ಪ್ರಣವ್ ಮುಖರ್ಜಿಯವರು ದಾಖಲಿಸಿದ್ದಾರೆ.  ಆರ್.ಎಸ್.ಎಸ್. ಸ್ಥಾಪಕರನ್ನು ‘ಭಾರತ ಮಾತೆಯ ಹೆಮ್ಮೆಯ ಪುತ್ರ’ ಎಂದು ಪ್ರಣಬ್ ಮುಖರ್ಜಿ ಯವರು ಬಣ್ಣಿಸಿದ್ದಾರೆ.

ನಾಗಪುರಕ್ಕೆ ಹೋಗಿ ಅಲ್ಲಿಯೇ ಎಲ್ಲ ಪ್ರಶ್ನೆಗಳಿಗೂ ಉತ್ತರಿಸುತ್ತೇನೆ ಎಂದಿದ್ದರು ಪ್ರಣಬ್ ಮುಖರ್ಜಿ. ಪ್ರಣಬ್ ಮುಖರ್ಜಿ ಅವರು ಈಗ ಸಂದರ್ಶಕರ ಡೈರಿಯಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸ್ಥಾಪಕರಾದ ಹೆಡಗೇವಾರ್ ರನ್ನು ಹೊಗಳುವ ಮೂಲಕ ವಿರೋಧಿಗಳ ಬಾಯಿಯನ್ನು ಈಗಾಗಲೇ ಮುಚ್ಚಿಸಿದ್ದಾರೆ. ಇನ್ನು ಇಂದು ಸಂಜೆ ಆರ್ ಎಸ್ ಎಸ್ ಸಂಘ ಶಿಕ್ಷಾ ವರ್ಗದಲ್ಲಿ ಆರ್ ಎಸ್ ಎಸ್ ಸ್ವಯಂ ಸೇವಕರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಅಲ್ಲಿ ಇನ್ನು ಯಾವ ಯಾವ ವಿಷಯಗಳನ್ನು ಹಂಚಿಕೊಳ್ಳಲಿದ್ದಾರೆ ಎಂಬುದು ತೀವ್ರ ಕುತೂಹಲ ಮೂಡಿಸಿದೆ.

Vishwa News 24

Recent Posts

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…

2 days ago

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ : ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! vishwanews24

ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…

2 days ago

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  – vishwanews24

ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ  ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…

2 days ago

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು – vishwanews24

ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…

2 days ago

ಡಿಕೆಶಿ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ – vishwanews24

 ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್‌.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…

2 days ago

ಉಡುಪಿ: ತುಳುನಾಡಿನ, ತುಳು ಜನರ ಭಾವನೆಗೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಬೆಲೆ ಕೊಟ್ಟಿದ್ದಾರೆ : ರಮೇಶ್ ಕಾಂಚನ್ – vishwanews24

ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…

3 days ago