Featured

ಹೆಣ್ಣುಮಕ್ಕಳ ವಿವಾಹದ ವಯಸ್ಸು 18 ರಿಂದ 21ಕ್ಕೆ ಏರಿಕೆ :  ಕೇಂದ್ರ ಸಂಪುಟ ಅನುಮೋದನೆ – Vishwanews24

ಹೆಣ್ಣುಮಕ್ಕಳ ವಿವಾಹದ ವಯಸ್ಸು 18ರಿಂದ 21ಕ್ಕೆ ಏರಿಕೆ :  ಕೇಂದ್ರ ಸಂಪುಟ ಅನುಮೋದನೆ – Vishwanews24

ನವದೆಹಲಿ: ಹೆಣ್ಣುಮಕ್ಕಳ ವಿವಾಹದ ಕನಿಷ್ಠ ವಯಸ್ಸನ್ನು 18ರಿಂದ 21ಕ್ಕೆ ಹೆಚ್ಚಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಬುಧವಾರ ಅನುಮೋದನೆ ನೀಡಿದೆ ಎಂದು ಮೂಲಗಳು ತಿಳಿಸಿವೆ.

ದೇಶದ 74ನೇ ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ ಅಂದರೆ 2020ರ ಆಗಸ್ಟ್‌ 15ರಂದು ರಾಷ್ಟ್ರವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ ಮಾಡುವಾಗ ಈ ವಿಚಾರವನ್ನು ಪ್ರಸ್ತಾಪಸಿದ್ದರು.

ಹೆಣ್ಣುಮಕ್ಕಳ ಆರೋಗ್ಯದ ವಿಚಾರವಾಗಿ ಸರ್ಕಾರ ಬದ್ಧವಾಗಿದೆ. ಅಪೌಷ್ಟಿಕತೆಯಿಂದ ಹೆಣ್ಣುಮಕ್ಕಳನ್ನು ರಕ್ಷಿಸುವುದು ಸರ್ಕಾರದ ಉದ್ದೇಶ. ಅವರು ಸರಿಯಾದ ವಯಸ್ಸಿನಲ್ಲಿ ವಿವಾಹವಾಗುವುದು ಸೂಕ್ತ ಎಂದು ಪ್ರಧಾನಿ ಮೋದಿ ಆಶಯ ವ್ಯಕ್ತಪಡಿಸಿದ್ದಾರೆ.

ಸದ್ಯ ಇರುವ ಕಾನೂನಿನ ಪ್ರಕಾರ, ನಿಗದಿಪಡಿಸಲಾಗಿರುವ ವಿವಾಹದ ವಯಸ್ಸು ಗಂಡುಮಕ್ಕಳಿಗೆ 21 ಹಾಗೂ ಹೆಣ್ಣುಮಕ್ಕಳಿಗೆ 18 ವರ್ಷ. ಈ ಹಿನ್ನೆಲೆಯಲ್ಲಿ ಹೊಸ ಯೋಜನೆಯನ್ನು ಕಾರ್ಯರೂಪಕ್ಕೆ ತರಲು ಬಾಲ್ಯವಿವಾಹ ನಿಷೇಧ ಕಾಯಿದೆ, ವಿಶೇಷ ವಿವಾಹ ಕಾಯಿದೆ ಮತ್ತು ಹಿಂದೂ ವಿವಾಹ ಕಾಯಿದೆಗಳಲ್ಲಿ ಬದಲಾವಣೆ ಮಾಡಲು ಸರ್ಕಾರ ಮುಂದಾಗಿದೆ.

ಹೀಗಾಗಿ ಒಂದಷ್ಟು ಸಮಸ್ಯೆಗಳು ನಿವಾರಣೆಯಾಗುತ್ತವೆ ಎಂಬುದನ್ನು ಗಮನದಲ್ಲಿಟ್ಟುಕೊಂಡು  ಅದರ ಬಗ್ಗೆ ಪರಿಶೀಲಿಸಲು ಕೇಂದ್ರ ಸರ್ಕಾರ ಒಂದು ಟಾಸ್ಕ್​ಫೋರ್ಸ್ ರಚಿಸಿತ್ತು. ಈ ಟಾಸ್ಕ್ ಫೋರ್ಸ್​ನ ಶಿಫಾರಸ್ಸಿನ ಅನ್ವಯ ಪ್ರಸ್ತಾಪಕ್ಕೆ ಕೇಂದ್ರ ಸಂಪುಟ ಅನುಮೋದನೆ ನೀಡಿದೆ.

 

 

Vishwa News 24

Recent Posts

ದರ್ಶನ್‌ ಪುತ್ರನಿದ್ದ ಕಾರು ಅಪಘಾತ : ವಿಜಯಲಕ್ಷ್ಮಿ ಸ್ಪಷ್ಟನೆ – vishwanews24

ದರ್ಶನ್‌ ಪುತ್ರನಿದ್ದ ಕಾರು ಅಪಘಾತ : ವಿನೀಶ್‌ ವಾಹನ ಚಲಾಯಿಸಿಲ್ಲ: ವಿಜಯಲಕ್ಷ್ಮಿ ಸ್ಪಷ್ಟನೆ ಬೆಂಗಳೂರು: ನಟ ದರ್ಶನ್ ಅವರ ಪುತ್ರ…

27 minutes ago

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ – vishwanews24

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಧರ್ಮಸ್ಥಳ: ದೆಹಲಿ ಪ್ರವಾಸ ಮುಗಿಸಿ ನೇರವಾಗಿ ಧರ್ಮಸ್ಥಳಕ್ಕೆ…

38 minutes ago

ಆಗುಂಬೆ ಘಾಟಿ : ಸೆ. 30 ರವರೆಗೆ ಭಾರಿ ವಾಹನಗಳ ಸಂಚಾರ ನಿಷೇಧ – vishwanews24

ಆಗುಂಬೆ ಘಾಟಿ : ಭಾರಿ ವಾಹನಗಳ ಸಂಚಾರ ನಿಷೇಧ   ಉಡುಪಿ  : ರಾಷ್ಟ್ರೀಯ  ಹೆದ್ದಾರಿ 169ಎ ರ ತೀರ್ಥಹಳ್ಳಿ –…

42 minutes ago

ಉಡುಪಿ : ಗ್ಯಾರಂಟಿ ಯೋಜನೆಯ ಸೌಲಭ್ಯಗಳು ಅರ್ಹರಿಗೆ ತಲುಪಲು ಪರಿಣಾಮಕಾರಿ ಕೆಲಸ ಮಾಡಿ : ರಮೇಶ್ ಕಾಂಚನ್ – vishwanews24

ಉಡುಪಿ : ಗ್ಯಾರಂಟಿ ಯೋಜನೆಯ ಸೌಲಭ್ಯಗಳು ಅರ್ಹರಿಗೆ ತಲುಪಲು ಪರಿಣಾಮಕಾರಿ ಕೆಲಸ ಮಾಡಿ : ರಮೇಶ್ ಕಾಂಚನ್ ಉಡುಪಿ :…

50 minutes ago

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

18 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

19 hours ago